Friday, November 22, 2024

ಬಿಜೆಪಿಯಲ್ಲಿ ಸಮರ್ಥ ವಿರೋಧ ಪಕ್ಷದ ನಾಯಕ ಇಲ್ವಾ? : ಕಾಂಗ್ರೆಸ್ ಪ್ರಶ್ನೆ

ಬೆಂಗಳೂರು : ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿದೆ. ಆದರೆ, ನಮ್ಮ ಸರ್ಕಾರವನ್ನು ಎದುರಿಸಲು ಬಿಜೆಪಿಯಲ್ಲಿ ಸಮರ್ಥ ವಿರೋಧ ಪಕ್ಷದ ನಾಯಕ ಇಲ್ವಾ? ಎಂದು ರಾಜ್ಯ ಕಾಂಗ್ರೆಸ್ ಪ್ರಶ್ನೆ ಮಾಡಿದೆ.

ಸಿಎಂ ಸಿದ್ದರಾಮಯ್ಯ ನೇತೃತ್ವದ ನೂತನ ಸಂಪುಟ ಸಚಿವರು ಇಂದು ಪ್ರಮಾಣವಚನ ಸ್ವೀಕರಿಸಿದ್ದಾರೆ. ಈ ಬೆನ್ನಲ್ಲೇ ಟ್ವೀಟ್ ಮಾಡಿರುವ ರಾಜ್ಯ ಕಾಂಗ್ರೆಸ್, ಬಿಜೆಪಿ ನಾಯಕರಿಗೆ ಟಕ್ಕರ್ ಕೊಟ್ಟಿದೆ.

‘ನಾವು ಗೆದ್ದೂ ಆಯ್ತು. ಸಿಎಂ ಹಾಗೂ ಡಿಸಿಎಂ ಆಯ್ಕೆಯೂ ಆಯ್ತು. ಸಚಿವ ಸಂಪುಟವೂ ರೆಡಿ ಆಯ್ತು. ಸರ್ಕಾರದ ರಚನೆಯೂ ಆಯ್ತು. ಇದುವರೆಗೂ ನಮ್ಮ ಸರ್ಕಾರವನ್ನು ಎದುರಿಸಲು ಬಿಜೆಪಿಗೆ ಸಮರ್ಥ ವಿರೋಧ ಪಕ್ಷದ ನಾಯಕ ಸಿಗದಿರುವುದು ದುರಂತ ಎಂದು ಛೇಡಿಸಿದೆ.

ಇದನ್ನೂ ಓದಿ : 24 ನೂತನ ಸಚಿವರ ಅಧಿಕೃತ ಪಟ್ಟಿ ಬಿಡುಗಡೆ : ಯಾರಿಗೆಲ್ಲಾ ಸಚಿವ ಸ್ಥಾನ?

ಬಿಜೆಪಿಗೆ ನೈತಿಕತೆ ಇರದಿದ್ದರೇನಂತೆ, ಕನಿಷ್ಠ ವಿರೋಧ ಪಕ್ಷದ ನಾಯಕನನ್ನು ಮುಂದಿಟ್ಟುಕೊಂಡಾದರು ಬಿಜೆಪಿ ನಮ್ಮನ್ನು ವಿರೋಧಿಸಲಿ. ನಮ್ಮ ಭರವಸೆಗಳನ್ನು ಈಡೇರಿಸಲು ನಾವು ಬದ್ಧರಾಗಿದ್ದೇವೆ. ಆದರೆ, ನಮ್ಮ ಸರ್ಕಾರವನ್ನು ಪ್ರಶ್ನಿಸಲು ಪ್ರಬಲ ವಿರೋಧ ಪಕ್ಷದ ನಾಯಕ ಬೇಕಲ್ಲವೇ ಎಂದು ಕುಟುಕಿದೆ.

ಭರವಸೆ ಈಡೇರಿಸುವುದುಗ್ಯಾರಂಟಿ

ನಾವು ನೀಡಿದ ಭರವಸೆಗಳನ್ನು ಈಡೇರಿಸುವುದು ‘ಗ್ಯಾರಂಟಿ’. ಆದರೆ, ಬಿಜೆಪಿ ನಾಯಕರು ಚುನಾವಣೆಗೂ ಮೊದಲು ಉಚಿತ ಯೋಜನೆಗಳನ್ನ ನೀಡಬಾರದು, ಉಚಿತ ಕೊಟ್ಟರೆ ಶ್ರೀಲಂಕಾ ಆಗತ್ತೆ, ಪಾಕಿಸ್ತಾನ್ ಆಗತ್ತೆ ಎಂದು ವಿರೋಧಿಸಿದ್ದವರು. ಇಂದು ಗ್ಯಾರಂಟಿ ಜಾರಿಗಾಗಿ ಪ್ರತಿಭಟಿಸುತ್ತೇವೆ ಎನ್ನುತ್ತಿರುವುದು ಹಾಸ್ಯಾಸ್ಪದ. ಬಿಜೆಪಿಗರಿಗೆ ಒಂದೇ ನಿಲುವು ಇಲ್ಲದಿರುವುದೇಕೆ? ಎಂದು ಛೇಡಿಸಿದೆ.

RELATED ARTICLES

Related Articles

TRENDING ARTICLES