Sunday, December 22, 2024

ಸಿದ್ದರಾಮಯ್ಯನ ಸಂಪುಟದಲ್ಲಿ ಏಕೈಕ ಮಹಿಳೆ ಲಕ್ಷ್ಮಿ ಹೆಬ್ಬಾಳಕರ್​ಗೆ ಒಲಿದ ಮಂತ್ರಿಗಿರಿ ಭಾಗ್ಯ ​

ಬೆಂಗಳೂರು : ಮೊದಲ ಬಾರಿಗೆ ಸಿಎಂ ಸಿದ್ದರಾಮಯ್ಯ ಸಂಪುಟದಲ್ಲಿ ಮಂತ್ರಿ ಸ್ಥಾನ ಪಡೆದುಕೊಂಡ ಮೊದಲ ಏಕೈಕ ಮಹಿಳೆ  ಬೆಳಗಾವಿ ಗ್ರಾಮೀಣ ಶಾಸಕಿ ಲಕ್ಷ್ಮಿ ಹೆಬ್ಬಾಳಕರ.

ಹೌದು, ಲಕ್ಷ್ಮಿ ಹೆಬ್ಬಾಳ್ಕರ್  ಸತತ 2 ಬಾರಿ ಗೆದ್ದಿರುವ ಇವರು ಬಸವೇಶ್ವರ, ಶಿವಾಜಿ, ಅಂಬೇಡ್ಕರ್ ಹೆಸರಿನಲ್ಲಿ ಇಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಸಿಎಂ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್​ ಸಮುಖದಲ್ಲಿ ಪ್ರಮಾಣವಚನ ಸ್ವೀಕರಿಸಿದ್ದಾರೆ.

ಬೆಳಗಾವಿ ಜಿಲ್ಲೆಯ ಕಾಂಗ್ರೆಸ್ ಸಾಮಾನ್ಯ ಕಾರ್ಯಕರ್ತೆಯಾಗಿದ್ದ ಇವರು  ಅವಿರತ ಶ್ರಮಿದಿಂದಲೇ ಮಹಿಳಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆ ಅಲಂಕರಿಸಿದರು. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿಯೂ ಕೆಲಸ ಮಾಡಿರುವ ಅವರು ರಾಜಕೀಯದಲ್ಲಿ ಹೆಚ್ಚು ಸಕ್ರಿಯರಾದರು. ಪಕ್ಷ ಸಂಘಟನೆಯಲ್ಲಿ, ಕಾಂಗ್ರೆಸ್ ಸಮಾವೇಶಗಳನ್ನು ಬೆಳಗಾವಿ ಭಾಗದಲ್ಲಿ ಯಶಸ್ವಿಯಾಗಿಸಿಕೊಂಡು ಬಂದವರಲ್ಲಿ ಇವರು ಒಬ್ಬರು.

2013ರ ಚುನಾವಣೆಯಲ್ಲಿ ಬೆಳಗಾವಿ ಗ್ರಾಮೀಣ ಕ್ಷೇತ್ರದಿಂದಲೇ ಸ್ಪರ್ಧಿಸಿದ ಲಕ್ಷ್ಮೀ ಹೆಬ್ಬಾಳ್ಕರ್ ಅವರು 35,811 ಮತಗಳನ್ನು ಪಡೆದು ಸೋಲು ಅನುಭವಿಸಿದರು. ಮಾರನೇ ವರ್ಷ 2014ರ ಲೋಕಸಭೆ ಚುನಾವಣೆಯಲ್ಲಿ ಬೆಳಗಾವಿ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದರು. ಆಗ 4,78,557 ಮತಗಳನ್ನು ಪಡೆದು ಬಿಜೆಪಿ ಅಭ್ಯರ್ಥಿ ಸುರೇಶ ಅಂಗಡಿ ವಿರುದ್ಧ ಗೆಲವು ಸಾಧಿಸಿದ್ದಾರೆ.

 

RELATED ARTICLES

Related Articles

TRENDING ARTICLES