Saturday, August 23, 2025
Google search engine
HomeUncategorizedಸಿದ್ದು ಸಂಪುಟದಲ್ಲಿ ಹಲವರಿಗೆ ಸಚಿವಸ್ಥಾನ ಮಿಸ್

ಸಿದ್ದು ಸಂಪುಟದಲ್ಲಿ ಹಲವರಿಗೆ ಸಚಿವಸ್ಥಾನ ಮಿಸ್

ಬೆಂಗಳೂರು: ಇಂದು ಕಾಂಗ್ರೆಸ್‌ನ 24 ಮಂದಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸುತ್ತಿದ್ದು ಕೆಲ ಹಿರಿಯ ನಾಯಕರಿಗೆ ಸಚಿವ ಸ್ಥಾನ ತಪ್ಪಿದೆ. ಹಲವು ಹಿರಿಯ ನಾಯಕರು ಮಂತ್ರಿಗಿರಿಗೆ ಲಾಬಿ ನಡೆಸಿದ್ದರು… ಆದರೆ ಹೈಕಮಾಂಡ್‌ ಯಾವುದೇ ಲಾಬಿಗೆ ಬಗ್ಗದೇ ತನ್ನದೇ ಮಾನದಂಡ ಬಳಸಿ ಮಂತ್ರಿ ಸ್ಥಾನಕ್ಕೆ ಶಾಸಕರನ್ನು ಆಯ್ಕೆ ಮಾಡಿದೆ.

ಹೌದು,ಸಿಎಂ ಸಿದ್ದರಾಮಯ್ಯ ಸಂಪುಟದಲ್ಲಿ ಬಂಜಾರ ಸಮಾಜದ ಏಕೈಕ ಶಾಸಕ ರುದ್ರಪ್ಪ ಲಮಾಣಿಗೂ ನಿರಾಸೆಯಾಗಿದೆ. ಎಂಎಲ್‍ಸಿ ಬಿ.ಕೆ ಹರಿಪ್ರಸಾದ್, ಬಸವರಾಜ ರಾಯರೆಡ್ಡಿಗೂ ಮಂತ್ರಿ ಸ್ಥಾನ ಸಿಕ್ಕಿಲ್ಲ. ಬಿಜೆಪಿಗೆ ರಾಜೀನಾಮೆ ನೀಡಿ ಸ್ಪರ್ಧಿಸಿ ಸೋತಿದ್ದ ಮಾಜಿ ಸಿಎಂ ಜಗದೀಶ್​​ ಶೆಟ್ಟರ್‌ ಅವರಿಗೆ ಪರಿಷತ್‌ ಸ್ಥಾನ ನೀಡಿ ಮಂತ್ರಿ ಮಾಡಬಹುದು ಎಂದು ನಿರೀಕ್ಷೆ ಇತ್ತು. ಅದೇ ರೀತಿಯಾಗಿ ಅಥಣಿಯಿಂದ ಗೆದ್ದಿದ್ದ ಲಕ್ಷ್ಮಣ ಸವದಿ ಅವರಿಗೂ ಮಂತ್ರಿ ಸಿಗಲಿದೆ ಎಂಬ ನಿರೀಕ್ಷೆ ಇತ್ತು. ಆದರೆ ಕಾಂಗ್ರೆಸ್‌ ಹೈಕಮಾಂಡ್‌ ಇಬ್ಬರಿಗೂ ಮಂತ್ರಿ ಸ್ಥಾನ ನೀಡಿಲ್ಲ. ಲಕ್ಷ್ಮಣ ಸವದಿ, ಜಗದೀಶ್‌ ಶೆಟ್ಟರ್, ರುದ್ರಪ್ಪ ಲಮಾಣಿ, ಬಿ.ಕೆ ಹರಿಪ್ರಸಾದ್, ಬಸವರಾಜ ರಾಯರೆಡ್ಡಿ, ವಿನಯ್ ಕುಲಕರ್ಣಿ, ತನ್ವೀರ್ ಸೇಠ್, ಶಾಮನೂರು ಶಿವಶಂಕರಪ್ಪ, ಆರ್.ವಿ ದೇಶಪಾಂಡೆ, ಹ್ಯಾರಿಸ್, ಶಿವಲಿಂಗೇಗೌಡ, ಅಜಯ್ ಸಿಂಗ್, ಟಿ.ಬಿ ಜಯಚಂದ್ರ, ಎಂ.ಕೃಷ್ಣಪ್ಪ, ವಿಜಯಾನಂದ ಕಾಶಪ್ಪನವರ್, ನರೇಂದ್ರಸ್ವಾಮಿ, ತುಕರಾಂ ಮಂತ್ರಿಸ್ಥಾನ ಕೈ ತಪ್ಪಿದೆ..

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments