ನವದೆಹಲಿ : ಇಂದು ಜವಾಹರ್‌ಲಾಲ್ ನೆಹರೂ 59ನೇ ಪುಣ್ಯತಿಥಿ. ಪ್ರಧಾನಿ ಮೋದಿ, ಖರ್ಗೆ ರಾಹುಲ್ ಗಾಂಧಿ ಸೇರಿದಂತೆ ಗಣ್ಯರಿಂದ ನಮನ ಸಲ್ಲಿಸಿದ್ದಾರೆ.
ಹೌದು, ದೆಹಲಿಯ ಶಾಂತಿವನದಲ್ಲಿರುವ ನೆಹರೂ ಸ್ಮಾರಕಕ್ಕೆ ಭೇಟಿ ನೀಡಿದ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಸೇರಿದಂತೆ ಅನೇಕರು ಪುಷ್ಪನಮನ ಸಲ್ಲಿಸಿದರು.
ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು, ಪಂಡಿತ್ ಜವಾಹರಲಾಲ್ ನೆಹರು ಅವರ ಕೊಡುಗೆಯಿಲ್ಲದೆ 21 ನೇ ಶತಮಾನದ ಭಾರತವನ್ನು ಕಲ್ಪಿಸಿಕೊಳ್ಳಲು ಸಾಧ್ಯವಾಗುವುದಿಲ್ಲ.
पंडित जवाहरलाल नेहरू जी के योगदान के बिना 21वीं सदी के भारत की कल्पना नहीं की जा सकती।
लोकतंत्र के निर्भीक प्रहरी, उनके प्रगतिशील विचारों ने चुनौतियों के बावजूद भारत के सामाजिक, राजनीतिक और आर्थिक विकास को दृढ़ता से आगे बढ़ाया।
‘हिन्द के जवाहर’ को मेरी विनम्र श्रद्धांजलि। pic.twitter.com/JL4CRjWZEu
— Mallikarjun Kharge (@kharge) May 27, 2023
ಪ್ರಜಾಪ್ರಭುತ್ವದ ನಿರ್ಭೀತ ಕಾವಲುಗಾರರಾಗಿದ್ದ ಅವರ ಪ್ರಗತಿಪರ ಆಲೋಚನೆಗಳು ಸವಾಲುಗಳ ನಡುವೆಯೂ ಭಾರತದ ಸಾಮಾಜಿಕ, ರಾಜಕೀಯ ಮತ್ತು ಆರ್ಥಿಕ ಅಭಿವೃದ್ಧಿಯನ್ನು ಬಲವಾಗಿ ಮುನ್ನಡೆಸಿದವು. ನೆಹರೂ ಅವರಿಗೆ ನನ್ನ ನಮನಗಳು ಎಂದು ಹೇಳಿದ್ದಾರೆ.
ಇನ್ನು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಟ್ವೀಟ್ ಮಾಡಿ, ಪಂಡಿತ್ ಜವಾಹರಲಾಲ್ ನೆಹರೂ ಅವರ ಪುಣ್ಯತಿಥಿಯಂದು ಅವರಿಗೆ ನಮನಗಳು ಎಂದು ಹೇಳಿದ್ದಾರೆ.
On his death anniversary, I pay tributes to our former PM Pandit Jawaharlal Nehru.
— Narendra Modi (@narendramodi) May 27, 2023