ಉಡುಪಿ : ಜೋಲಿ(ಜೋಕಾಲಿ)ಯಲ್ಲಿ ಆಟವಾಡಲು ಹೋದ ಬಾಲಕಿ ಕತ್ತಿಗೆ ಸೀರೆ ಸುತ್ತಿಕೊಂಡು ಉಸಿರುಗಟ್ಟಿ ಮೃತಪಟ್ಟ ದಾರುಣ ಘಟನೆ ಉಡುಪಿ ಜಿಲ್ಲೆ ಕಾರ್ಕಳ ತಾಲೂಕು ನಿಟ್ಟೆಯಲ್ಲಿ ನಡೆದಿದೆ.
ಮಾನ್ವಿ (9) ಮೃತ ಬಾಲಕಿ. ಆಟವಾಡುತ್ತಿದ್ದ ವೇಳೆ ಆಕಸ್ಮಿಕವಾಗಿ ಜೋಕಾಲಿಯಲ್ಲಿ ಸಿಲುಕಿಕೊಂಡು ಬಾಲಕಿ ಸಾವನ್ನಪಿದ್ದಾರೆ ಎನ್ನಲಾಗಿದೆ. ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಮೃತ ಮಾನ್ವಿ ಕೆಮ್ಮಣ್ಣು ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ 4ನೇ ತರಗತಿ ಓದುತ್ತಿದ್ದಳು.
ಮಾನ್ವಿ ನೆರೆಮನೆಯ ದೀಕ್ಷಾ ಎಂಬಾಕೆಯ ಜೊತೆ ಸೀರೆಯಲ್ಲಿ ಜೋಕಾಲಿ ಆಟ ಆಡುವಾಗ ಆಕಸ್ಮಿಕವಾಗಿ ಜೋಕಾಲಿಗೆ ಕಟ್ಟಿದ ಸೀರೆ ಆಕೆಯ ಕುತ್ತಿಗೆಗೆ ಸುತ್ತಿಕೊಂಡಿದೆ. ಕೂಡಲೇ ಆಕೆಯನ್ನು ನಿಟ್ಟೆ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದುಕೊಂಡು ಹೋಗಿದ್ದು ಅದಾಗಲೇ ಮೃತಪಟ್ಟಿದ್ದಳು. ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ : ವೋಟ್ ಹಾಕಿಲ್ಲ ಅಂತ ‘ದೊಡ್ಡಪ್ಪನನ್ನೇ ಕೊಂದ ಮಗ’
ಹಗ್ಗ ಕುತ್ತಿಗೆಗೆ ಸಿಲುಕಿ ಬಾಲಕಿ ಸಾವು
ಈ ಹಿಂದೆ ವಿಟ್ಲದಲ್ಲಿಯೂ ಇದೇ ರಿತಿಯ ಘಟನೆ ನಡೆದಿತ್ತು. ಮನೆಯಲ್ಲಿ ಆಟವಾಡುತ್ತಿದ್ದ ಸಂದರ್ಭ ಜೋಕಾಲಿಯ ಹಗ್ಗ ಕುತ್ತಿಗೆಗೆ ಸಿಲುಕಿ ಅನಂತಾಡಿಯ ಲಿಖಿತಾ(11) ಸಾವನ್ನಪ್ಪಿದ್ದಳು.
ಬಾಬನಕಟ್ಟೆ ಶಾಲೆಯಲ್ಲಿ 6ನೇ ತರಗತಿ ಓದುತ್ತಿದ್ದ ಲಿಖಿತಾ, ಜೋಕಾಲಿಗೆ ಕಟ್ಟಿದ್ದ ಹಗ್ಗ ಕುತ್ತಿಗೆಗೆ ಸಿಲುಕಿ ಉಸಿರುಗಟ್ಟಿ ಮೃತಪಟ್ಟಿದ್ದಳು. ಈ ಸಂಬಂಧ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.