Friday, November 22, 2024

ಒಳ ಉಡುಪಿನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 1.69 ಕೋಟಿ ಮೌಲ್ಯದ ವಜ್ರ ವಶ

ಬೆಂಗಳೂರು : 1.69 ಕೋಟಿ ಮೌಲ್ಯದ ವಜ್ರದ ಹರಳುಗಳನ್ನು ಅಕ್ರಮವಾಗಿ ವಿದೇಶಕ್ಕೆ ಸಾಗಿಸಲು ಯತ್ನಿಸಿದ್ದ ವ್ಯಕ್ತಿಯನ್ನು ಸಿಐಎಸ್ ಎಫ್ (CISF) ಅಧಿಕಾರಿಗಳು ಮಂಗಳೂರಿನಲ್ಲಿ ಬಂಧಿಸಿದ್ದಾರೆ.

ಕೇರಳದ ಕಾಸರಗೋಡು ನಿವಾಸಿಯಾಗಿರುವ ವ್ಯಕ್ತಿ ದುಬೈಗೆ ತೆರಳಲು ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದನು. ಈ ವೇಳೆ ಪ್ರಯಾಣಿಕನ ಅನುಮನಾಸ್ಪದ ವರ್ತನೆ ಕಂಡು ಸಿಐಎಸ್ ಎಫ್ (CISF) ಅಧಿಕಾರಿಗಳು ತಪಾಸಣೆ ನಡೆಸಿದ್ದಾರೆ.

ಈ ವೇಳೆ ಆತನ ಒಳ ಉಡುಪಿನಲ್ಲಿ ಅಡಗಿಸಿಟ್ಟಿದ್ದ ವಜ್ರದ ಹರಳುಗಳು ಪತ್ತೆಯಾಗಿವೆ. 13 ಪೌಚ್​ಗಳಲ್ಲಿ ಒಟ್ಟು 1.69 ಕೋಟಿ ಮೌಲ್ಯದ ವಜ್ರದ ಹರಳುಗಳು ಪತ್ತೆಯಾಗಿವೆ. ಕೂಡಲೇ ಸಿಐಎಸ್​ಫ್​​ ಅಧಿಕಾರಿಗಳು ಆರೋಪಿಯನ್ನು ವಶಕ್ಕೆ ಪಡೆದು, ಕಸ್ಟಮ್ಸ್ ಅಧಿಕಾರಿಗಳಿಗೆ ಒಪ್ಪಿಸಿದ್ದಾರೆ.

ಇದನ್ನೂ ಓದಿ : ಅಕ್ರಮ ಹಣ ಇದ್ಯಾ? ಮಾರಕಾಸ್ತ್ರ ಇಟ್ಕೊಂಡಿದ್ದಿರಾ? : ರೌಡಿ ಶೀಟರ್ ಗಳಿಗೆ ಖಾಕಿ ಕ್ಲಾಸ್

ಈ ಕುರಿತು ಟ್ವೀಟ್ ಮಾಡಿರುವ ಬೆಂಗಳೂರು ಕಸ್ಟಮ್ಸ್ ಇಲಾಖೆ ಕಚೇರಿ, ದುಬೈಗೆ ಇದೇ 25 ರಂದು ತೆರಳಬೇಕಾಗಿದ್ದ ಪ್ರಯಾಣಿಕ ವಜ್ರಗಳನ್ನು ಅಕ್ರಮವಾಗಿ ಸಾಗಿಸಲು ಯತ್ನಿಸಿದ್ದು ಆತನನ್ನು ಕೇಂದ್ರಿ ಕೈಗಾರಿಕಾ ಭದ್ರತಾ ಪಡೆಯ ಸಿಬಂದಿ ವಶಕ್ಕೆ ಪಡೆದಿದ್ದಾರೆ. ಆರೋಪಿಯನ್ನು ಹೆಚ್ಚಿನ ವಿಚಾರಣೆಗಾಗಿ ಒಳಪಡಿಸಲಾಗುತ್ತಿದೆ ಎಂದು ತಿಳಿಸಿದೆ.

ಅನುಮನಾಸ್ಪದ ನಡೆ ತಂದ ಆಪತ್ತು

ದುಬೈಗೆ ತೆರಳಲು ಬಂದಿದ್ದ ಪ್ರಯಾಣಿಕನ ಅನುಮನಾಸ್ಪದ ನಡೆಯನ್ನು ಗಮನಿಸಿದ ಸಿಐಎಸ್ ಎಫ್ ಸಿಬಂದಿ ತಪಾಸಣೆ ನಡೆಸಿದ್ದಾರೆ. ಆತನ ಒಳ ಉಡುಪಿನಲ್ಲಿ ಬಚ್ಚಿಟ್ಟಿದ್ದ ಎರಡು ಪೊಟ್ಟಣಗಳಲ್ಲಿ ಹರಳುಗಲಿದ್ದದ್ದು ಕಂಡುಬಂದಿದೆ. ಆ ಎರಡು ಪೊಟ್ಟಣಗಳನ್ನು ವಶಕ್ಕೆ ಪಡೆದು ಪರಿಶೀಲಿಶಿದಾಗ ಅದರೊಳಗೆ 13 ಸಣ್ಣದ ಪೊಟ್ಟಣಗಳಲ್ಲಿ ವಜ್ರದ ಹರಳು ಪತ್ತೆಯಾಗಿದೆ.

RELATED ARTICLES

Related Articles

TRENDING ARTICLES