Wednesday, January 22, 2025

ದೇವೇಗೌಡರನ್ನು ಭೇಟಿ ಮಾಡಿ, ಯೋಗಕ್ಷೇಮ ವಿಚಾರಿಸಿದೆ : ಸಂಸದೆ ಸುಮಲತಾ

ಬೆಂಗಳೂರು : ಮಾಜಿ ಪ್ರಧಾನ ಮಂತ್ರಿ ಹೆಚ್.ಡಿ. ದೇವೇಗೌಡ ಅವರನ್ನು ಭೇಟಿ ಮಾಡಿ, ಯೋಗಕ್ಷೇಮ ವಿಚಾರಿಸಿದೆ ಎಂದು ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಹೇಳಿದ್ದಾರೆ.

ಇಂದು ನಡೆದ ನೂತನ ಸಂಸತ್ ಭವನದ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡು, ನೂತನ ಸಂಸತ್ ಕಟ್ಟಡವನ್ನು ಪ್ರವೇಶ ಮಾಡಿದೆ. ಈ ಸಂದರ್ಭದಲ್ಲಿ ಹೆಚ್.ಡಿ. ದೇವೇಗೌಡ ಅವರನ್ನು ಭೇಟಿ ಮಾಡಿ, ಯೋಗಕ್ಷೇಮ ವಿಚಾರಿಸಿದೆ. ಹಿರಿಯರ ಜೊತೆ ಕಳೆದ ಆ ಕ್ಷಣ ಸದಾ ನೆನಪಿಡುವಂಥದ್ದು ಎಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ.

ಲೋಕಸಭಾ ಸದಸ್ಯಳಾಗಿ ನೂತನ ಸಂಸತ್ ಭವನದ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳುವ ಸೌಭಾಗ್ಯ ನನ್ನದಾಗಿತ್ತು. ಇದು ನಮ್ಮ ದೇಶಕ್ಕೆ ಐತಿಹಾಸಿಕ ದಿನವಾಗಿದೆ ಹಾಗೂ ನಾನು ಅದರ ಭಾಗವಾಗಿರುವುದಕ್ಕೆ ಹೆಮ್ಮೆಪಡುತ್ತೇನೆ ಎಂದು ಸುಮಲತಾ ತಿಳಿಸಿದ್ದಾರೆ.

ಇದನ್ನೂ ಓದಿ : ನೂತನ ಸಂಸತ್ ಭವನ ಉದ್ಘಾಟಿಸಿದ ಪ್ರಧಾನಿ ಮೋದಿ

ದೇಶದ ಸಮಗ್ರತೆ, ಐಕ್ಯತೆಯ ಸಂಕೇತ

ಹೊಸ ಸಂಸತ್ ಕಟ್ಟಡವು ನಮ್ಮ ರಾಷ್ಟ್ರದ ಪ್ರಗತಿ ಮತ್ತು ಸಮೃದ್ಧಿಯ ಸಂಕೇತವಾಗಿದೆ. ಸಂಸತ್ ಭವನವು ಅತ್ಯಾಧುನಿಕ ಸೌಲಭ್ಯದಿಂದ ಕೂಡಿದ್ದು ಅದು ದೇಶದ ಜನರಿಗೆ ಉತ್ತಮ ಸೇವೆ ಸಲ್ಲಿಸಲು ಅನುವು ಮಾಡಿಕೊಡುತ್ತದೆ ಎನ್ನುವ ವಿಶ್ವಾಸ ನನ್ನದು ಎಂದು ಸುಮಲತಾ ಹೇಳಿದ್ದಾರೆ.

ಹೊಸ ಸಂಸತ್ ಭವನವನ್ನೂ ಪ್ರವೇಶಿಸಿದ ಸಂದರ್ಭದಲ್ಲಿ ಸಂಸದೆ ಸುಮಲತಾ ಅವರು, ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರನ್ನು ಭೇಟಿ ಮಾಡಿ, ಶುಭಾಶಯ ತಿಳಿಸಿದ್ದಾರೆ.

RELATED ARTICLES

Related Articles

TRENDING ARTICLES