Wednesday, January 22, 2025

New Parliament Building: ಹೊಸ ಸಂಸತ್ ಭವನದಲ್ಲಿ 75ರೂ ನಾಣ್ಯ ಹಾಗೂ ಅಂಚೆ ಚೀಟಿ ಬಿಡುಗಡೆ

ನವದೆಹಲಿ :  ಇಂದು ನೂತನ ಸಂಸತ್ ಭವನ ಉದ್ಘಾಟನೆ(New Parliament Building) ಕಾರ್ಯಕ್ರಮ ಅದ್ಧೂರಿಯಾಗಿ ನೆರವೇರಿದ್ದು, ಈ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು(Narendra Modi) 75 ರೂನ ನಾಣ್ಯ ಹಾಗೂ ಅಂಚೆ ಚೀಟಿ ಬಿಡುಗಡೆ ಮಾಡಿದ್ದಾರೆ(Stamp And Rs 75 Coin Released).

ಹೌದು, 75 ವರ್ಷಗಳ ಸ್ವಾತಂತ್ರ್ಯವನ್ನು ಆಚರಿಸುತ್ತಿರುವ ಭಾರತಕ್ಕೆ ಗೌರವಾರ್ಥವಾಗಿ 75ರೂ ನಾಣ್ಯ ಬಿಡುಗಡೆ ಮಾಡಲಾಗಿದೆ. ಈ ನಾಣ್ಯದ ಒಂದು ಬದಿಯಲ್ಲಿ ಅಶೋಕ ಸ್ತಂಭದ ಸಿಂಹದ ಲಾಂಛನ ಹಾಗೂ ನಾಣ್ಯದ ಕೆಳಗಡೆ ಸತ್ಯಮೇವ ಜಯತೆ ಎಂದು ಬರೆಯಲಾಗಿದೆ. ಎಡಭಾಗದಲ್ಲಿ ಭಾರತ್, ಬಲ ಭಾಗದಲ್ಲಿ ಇಂಡಿಯಾ ಎಂದು ಬರೆಯಲಾಗಿದೆ. ಸಿಂಹದ ಲಾಂಛನದ ಕೆಳಗಡೆ ಮುಖಬೆಲೆಯನ್ನು ತೋರಿಸುವ ರೂಪಾಯಿ ಚಿಹ್ನೆ ಇರಲಿದ್ದು ₹75 ಎಂದು ಇಂಗ್ಲಿಷ್ ಅಂಕೆಯಲ್ಲಿ ಬರೆಯಲಾಗಿದೆ ಎಂದು ತಿಳಿದು ಬಂದಿದೆ.

 

 

RELATED ARTICLES

Related Articles

TRENDING ARTICLES