ಬೆಂಗಳೂರು : ಕಾಂಗ್ರೆಸ್ ಪಕ್ಷ ಕರ್ನಾಟಕ ಮಾದರಿಯಲ್ಲೇ ಇದೀಗ ರಾಜಸ್ಥಾನದಲ್ಲಿ 5 ಉಚಿತ ಗ್ಯಾರಂಟಿ ಭರವಸೆಗಳನ್ನು ಘೋಷಣೆ ಮಾಡಿದೆ.
ಮುಂಬರುವ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಕಾಂಗ್ರೆಸ್ ಪಕ್ಷ ರಾಜಸ್ಥಾನದಲ್ಲಿ ಉಚಿತ ಗ್ಯಾರಂಟಿ ಭರವಸೆಗಳನ್ನು ಘೋಷಿಸಿದೆ. ಈ ವರ್ಷಾಂತ್ಯದಲ್ಲಿ ರಾಜಾಸ್ತಾನ ವಿಧಾನಸಭಾ ಚುನಾವಣೆ ನಡೆಯುವ ಸಾಧ್ಯತೆಯಿದೆ.
ಪ್ರತಿ ಮನೆಯೊಡತಿಗೆ ತಿಂಗಳಿಗೆ 1,500 ರೂಪಾಯಿ, ಪ್ರತಿ ಕುಟುಂಬಕ್ಕೆ ಗ್ಯಾಸ್ ಸಿಲಿಂಡರ್ ಗೆ 500 ರೂಪಾಯಿ ಸಹಾಯಧನ, ಪ್ರತಿ ಕುಟುಂಬಕ್ಕೆ100 ಯೂನಿಟ್ ಉಚಿತ ವಿದ್ಯುತ್, ಕೃಷಿ ಸಾಲ ಮನ್ನಾ ಹಾಗೂ ಹಳೇ ಪಿಂಚಣಿ ಯೋಜನೆ ಜಾರಿ. ಇವು ಕಾಂಗ್ರೆಸ್ ಘೋಷಿಸಿರುವ ಭರವಸೆಗಳು.
ಇದನ್ನೂ ಓದಿ : ಮುಂದಿನ ಕ್ಯಾಬಿನೆಟ್ ನಲ್ಲಿ 5 ಗ್ಯಾರಂಟಿ ಈಡೇರಿಸುತ್ತೇವೆ : ಸಿಎಂ ಸಿದ್ದರಾಮಯ್ಯ
ರಾಜ್ಯದಲ್ಲಿ(ಕರ್ನಾಟಕ) ಪ್ರತಿ ಮನೆಯೊಡತಿಗೆ ತಿಂಗಳಿಗೆ ಗೃಹಲಕ್ಷ್ಮಿ ಯೋಜನೆಯಡಿಯಲ್ಲಿ 2,000 ರೂಪಾಯಿ, ಗೃಹ ಜ್ಯೋತಿಯಡಿಯಲ್ಲಿ ತಿಂಗಳಿಗೆ 200 ಯೂನಿಟ್ ಉಚಿತ ವಿದ್ಯುತ್, ಯುವನಿಧಿ ಯೋಜನೆಯಡಿಯಲ್ಲಿ ಪದವಿಧರರಿಗೆ ತಿಂಗಳಿಗೆ 3,000 ರೂಪಾಯಿ ಹಾಗೂ ಡಿಪ್ಲೊಮಾ ಮಾಡಿದವರಿಗೆ 1,500 ರೂಪಾಯಿ, ಅನ್ನಭಾಗ್ಯ ಯೋಜನೆಯಡಿಯಲ್ಲಿ ತಿಂಗಳಿಗೆ ಪ್ರತಿ ವ್ಯಕ್ತಿಗೆ 10 ಕಿಲೋ ಉಚಿತ ಅಕ್ಕಿ ಹಾಗೂ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಎಂಬ 5 ಉಚಿತ ಘೋಷಣೆಗಳನ್ನು ಕಾಂಗ್ರೆಸ್ ಪಕ್ಷ ನೀಡಿತ್ತು.