Thursday, December 26, 2024

Karnataka Rains: ಇಂದಿನಿಂದ ಜೂನ್ 2ರವರೆಗೆ ಮಳೆಯಾಗುವ ಸಾಧ್ಯತೆ ; ರಾಜ್ಯದಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು:  ಇಂದಿನಿಂದ ಜೂನ್ 2ರವರೆಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆಯಿಂದ ಮುನ್ಸೂಚನೆ ಸೂಚಿಸಿದ್ದಾರೆ.

ಹೌದು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೊಡಗು, ಚಾಮರಾಜನಗರ, ತುಮಕೂರು, ಮಂಡ್ಯ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ರಾಮನಗರ ಜಿಲ್ಲೆಗಳಲ್ಲಿ ಜೂನ್ 2ರವರೆಗೂ ಅಧಿಕ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಇನ್ನುಳಿದಂತೆ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಕೊಪ್ಪಳ, ರಾಯಚೂರು, ವಿಜಯಪುರ, ಮೈಸೂರು, ವಿಜಯನಗರ, ಶಿವಮೊಗ್ಗ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.

ಇದನ್ನೂ ಓದಿ: ಸಂಪುಟದ ಸಚಿವರ ಖಾತೆ ಹಂಚಿಕೆ ಅಧಿಕೃತ ಪಟ್ಟಿ ಪ್ರಕಟ: ಯಾವ ಸಚಿವರಿಗೆ ಯಾವ ಖಾತೆ ಗೊತ್ತಾ?ಸಂಪೂರ್ಣ ಪಟ್ಟಿ ಇಲ್ಲಿದೆ

ರಾಯಚೂರಿನಲ್ಲಿ 40.6 ಡಿಗ್ರಿ ಸೆಲ್ಸಿಯಸ್​ ಅತ್ಯಧಿಕ ಉಷ್ಣಾಂಶ ದಾಖಳಾಗಿದೆ, ಬೇಲೂರು, ಹುಣಸೂರು, ಕಳಸ, ಶಿರಾಲಿಯಲ್ಲಿ ಮಳೆಯಾಗಿದೆ. ಬೆಂಗಳೂರಿನಲ್ಲಿ ಮಧ್ಯಾಹ್ನದ ಬಳಿಕ ಮೋಡಕವಿದ ವಾತಾವರಣ ನಿರ್ಮಾಣವಾಗಲಿದ್ದು, ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ.

 

RELATED ARTICLES

Related Articles

TRENDING ARTICLES