ಬೆಂಗಳೂರು : ಮೈಸೂರು ಜಿಲ್ಲೆ ತಿ.ನರಸೀಪುರ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ರಾಜ್ಯ ಸರ್ಕಾರ ತಲಾ 2 ಲಕ್ಷ ರೂಪಾಯಿ ಪರಿಹಾರ ಘೋಷಿಸಿದೆ.
ಈ ಕುರಿತು ಟ್ವೀಟ್ ಮಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಮೈಸೂರು ಜಿಲ್ಲೆಯ ತಿ.ನರಸೀಪುರ ಬಳಿ ಸಂಭವಿಸಿದ ಅಪಘಾತದಲ್ಲಿ 10 ಮಂದಿ ಸಾವಿಗೀಡಾದ ಸುದ್ದಿ ಕೇಳಿ ಸಂಕಟವಾಯಿತು. ಮೃತರ ಆತ್ಮಕ್ಕೆ ಶಾಂತಿ ಕೋರುತ್ತೇನೆ ಎಂದು ಹೇಳಿದ್ದಾರೆ.
ದುರ್ಘಟನೆಯಲ್ಲಿ ಸಾವಿಗೀಡಾದವರ ಕುಟುಂಬಕ್ಕೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ತಲಾ 2 ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು. ಅಪಘಾತದಲ್ಲಿ ಗಾಯಗೊಂಡವರಿಗೆ ಸೂಕ್ತ ಚಿಕಿತ್ಸೆಯ ವ್ಯವಸ್ಥೆ ಮಾಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ಮಾಹಿತಿ ನೀಡಿದ್ದಾರೆ.
ಮೈಸೂರು ಜಿಲ್ಲೆಯ ತಿ.ನರಸೀಪುರ ಬಳಿ ಸಂಭವಿಸಿದ ಅಪಘಾತದಲ್ಲಿ 10 ಮಂದಿ ಸಾವಿಗೀಡಾದ ಸುದ್ದಿ ಕೇಳಿ ಸಂಕಟವಾಯಿತು. ಮೃತರ ಆತ್ಮಕ್ಕೆ ಶಾಂತಿ ಕೋರುತ್ತೇನೆ.
ದುರ್ಘಟನೆಯಲ್ಲಿ ಸಾವಿಗೀಡಾದವರ ಕುಟುಂಬಕ್ಕೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ತಲಾ ರೂ. 2 ಲಕ್ಷ ಪರಿಹಾರ ನೀಡಲಾಗುವುದು.
ಅಪಘಾತದಲ್ಲಿ ಗಾಯಗೊಂಡವರಿಗೆ ಸೂಕ್ತ ಚಿಕಿತ್ಸೆಯ ವ್ಯವಸ್ಥೆ… pic.twitter.com/xSUD80kNro— CM of Karnataka (@CMofKarnataka) May 29, 2023
3 ಮಕ್ಕಳು ಸೇರಿ 10 ಮಂದಿ ಸಾವು
ಅಪಘಾತದಲ್ಲಿ ಮೂವರು ಮಕ್ಕಳು ಸೇರಿ 10 ಮಂದಿ ಸಾವನ್ನಪ್ಪಿದ್ದಾರೆ. ಪವನ್ (8), ಶ್ರಾವ್ಯ (5), ಕಾರ್ತಿಕ್(8), ಗಾಯತ್ರಿ (28), ಮಂಜುನಾಥ್ (35), ಪೂರ್ಣಿಮಾ (30), ಕೋಟ್ಯರೇಶ್ (45), ದುಜಾತಾ (40), ಸಂದೀಪ್ (23) ಮೃತರು ಎಂದು ತಿಳಿದುಬಂದಿದೆ.
ಇದನ್ನೂ ಓದಿ : ಒಳ ಉಡುಪಿನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 1.69 ಕೋಟಿ ಮೌಲ್ಯದ ವಜ್ರ ವಶ
ಸಂಸದೆ ಸುಮಲತಾ ಸಂತಾಪ
ಅಪಘಾತದಲ್ಲಿ ಸಾವನ್ನಪ್ಪಿರುವವರಿಗೆ ಸಂಸದೆ ಸುಮಲತಾ ಸಂತಾಪ ಸೂಚಿಸಿದ್ದಾರೆ. ಕೊಳ್ಳೇಗಾಲದ ತಿ.ನರಸೀಪುರ ಮುಖ್ಯ ರಸ್ತೆಯ ಕುರುಬೂರು ಗ್ರಾಮದ ಪಿಂಜರ ಪೋಲ್ ಬಳಿ ನಡೆದ ಭೀಕರ ಅಪಘಾತದಲ್ಲಿ ಬಳ್ಳಾರಿ ಮೂಲದ 10 ಜನರು ಮೃತಪಟ್ಟಿರುವುದು ಅತ್ಯಂತ ನೋವು ತಂದಿದೆ. ಮೃತರ ಆತ್ಮಕ್ಕೆ ಶಾಂತಿ ಕೋರುವೆ ಎಂದು ಟ್ವೀಟ್ ಮಾಡಿದ್ದಾರೆ.
ಅಪಘಾತದಲ್ಲಿ ಮೃತಪಟ್ಟ ಕುಟುಂಬಕ್ಕೆ ಈ ನೋವು ಭರಿಸುವಂತಹ ಶಕ್ತಿಯನ್ನು ಭಗವಂತ ದಯಪಾಲಿಸಲಿ ಎಂದು ಪ್ರಾರ್ಥನೆ ಮಾಡುವೆ. ಅಪಘಾತಕ್ಕೆ ಕಾರಣವನ್ನು ಪತ್ತೆ ಹಚ್ಚಿ ಸೂಕ್ತ ಕ್ರಮ ತಗೆದುಕೊಳ್ಳುವಂತೆ ವಿನಂತಿಸುವೆ ಎಂದು ಹೇಳಿದ್ದಾರೆ.