Thursday, December 19, 2024

ಗೃಹಲಕ್ಷ್ಮೀ ಯೋಜನೆಯ 2000 ರೂ. ಅತ್ತೆಗೆ ಮಾತ್ರ ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಬೆಳಗಾವಿ: ಗೃಹಲಕ್ಷ್ಮೀ ಯೋಜನೆಯಡಿಯಲ್ಲಿ ಮನೆಯೊಡತಿ ಅತ್ತೆಗೆ 2000 ರೂ. ಸಿಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿಕೆ ನೀಡಿದ್ದಾರೆ. 

ಹೌದು, ಬೆಳಗಾವಿಯಲ್ಲಿ ಇಂದು(ಮೇ30) ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕಾಂಗ್ರೆಸ್​ ಗ್ಯಾರಂಟಿಗಳು ಜೂನ್​ 1ರಿಂದಲೇ 5 ಗ್ಯಾರಂಟಿಗಳು ಜಾರಿಗೆ ಬರುವುದು ಬಹುತೇಕ ಖಚಿತವಾಗಿದ್ದು, ಅದರಲ್ಲೂ ಮುಖ್ಯಮಂತ್ರಿ ಗೃಹಲಕ್ಷ್ಮೀ ಯೋಜನೆಯಡಿ ಮನೆಯೊಡತಿಗೆ ಪ್ರತಿ ತಿಂಗಳು 2 ಸಾವಿರ ರೂಪಾಯಿ ಕೊಡುತ್ತೇವೆ ಎಂದು ಸರ್ಕಾರ ಹೇಳುತ್ತಿದೆ. ಅದರೆ ಮನೆಯೊಡತಿ ಯಾರು ಎನ್ನುವುದನ್ನು ಗುರುತಿಸುವುದೇ ಸರ್ಕಾರಕ್ಕೆ ದೊಡ್ಡ ಸವಾಲಾಗಿದ್ದು ಅದಕೆಲ್ಲಾ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಇಂದು ತರೆ ಎಳೆದಿದ್ದಾರೆ.

2000 ರೂ. ಅತ್ತೆಗಾ..? ಸೊಸೆಗಾ..?

2000 ರೂ. ಅತ್ತೆಗಾ? ಸೊಸೆಗಾ? ಎನ್ನುವುದೇ ಗೊಂದಲಕ್ಕೆ ಮಹಿಳಾ, ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​ ಪ್ರತಿಕ್ರಿಯಿಸಿದ್ದು, ಗೃಹಲಕ್ಷ್ಮೀ ಯೋಜನೆಯ ಹಣ ಅತ್ತೆಗೆ ಸಿಗಲಿದೆ ಎಂದು ಸ್ಪಷ್ಟಪಡಿಸಿದ್ದಾರೆ. ಇದರೊಂದಿಗೆ ಪರೋಕ್ಷವಾಗಿ ಸೊಸೆಗೆ ಗೃಹಲಕ್ಷ್ಮೀ ಯೋಜನೆ ಇಲ್ಲ ಎಂದರು.

ನಮ್ಮ ಸಂಪ್ರದಾಯದ ಪ್ರಕಾರ ಮನೆಯ ಒಡತಿ ಅತ್ತೆ

ನಮ್ಮ ಸಂಪ್ರದಾಯದ ಪ್ರಕಾರ ಮನೆಯ ಒಡತಿ ಅತ್ತೆ ಆಗುತ್ತಾರೆ. ಹೀಗಾಗಿ ಗೃಹಲಕ್ಷ್ಮೀ ಯೋಜನೆಯ ಹಣವನ್ನು ಅತ್ತೆಗೆ ನೀಡುತ್ತೇವೆ. ಅತ್ತೆ ಪ್ರೀತಿಯಿಂದ ಬೇಕಾದರೆ ಸೊಸೆಗೆ ಯೋಜನೆಯ ಹಣ ನೀಡಲಿ. ನಾಳೆ ಅಧಿಕಾರಿಗಳ ಜತೆ ಸಭೆ ನಡೆಸಿ ಅನುಷ್ಠಾನ ಬಗ್ಗೆ ಮಾಹಿತಿ ಸಂಗ್ರಹಿಸಲಾಗುತ್ತದೆ ಎಂದು ಹೇಳಿದರುಈ ಮೂಲಕ ಲಕ್ಷ್ಮೀ ಹೆಬ್ಬಾಳ್ಕರ್ ಪರೋಕ್ಷವಾಗಿ ಗೃಹಲಕ್ಷ್ಮೀ ಯೋಜನೆ ಸೊಸೆಗೆ ಸಿಗುವುದಿಲ್ಲ ಎನ್ನುವ ಸುಳಿವು ನೀಡಿದರು.

 

RELATED ARTICLES

Related Articles

TRENDING ARTICLES