Monday, December 23, 2024

ಪ್ರಧಾನಿ ಮೋದಿ ಸರ್ಕಾರಕ್ಕೆ ನವ ವಸಂತದ ಸಂಭ್ರಮ

ದೆಹಲಿ: ಪ್ರಧಾನಿ ನರೇಂದ್ರ ಮೋದಿ (Narendra Modi) ನೇತೃತ್ವದ ಬಿಜೆಪಿ ಸರ್ಕಾರವು ಇಂದಿಗೆ 9 ವರ್ಷ ಪೂರೈಸಿದೆ.

ಹೌದು,ಕೇಂದ್ರ ಸರ್ಕಾರದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ತನ್ನ ಸತತ ಎರಡು ಅವಧಿಯ ಒಂಬತ್ತು ವರ್ಷಗಳನ್ನು ಪೂರ್ಣಗೊಳಿಸಲಿರುವ ಹಿನ್ನೆಲೆಯಲ್ಲಿ ಬಿಜೆಪಿ (BJP) ಸಾಮೂಹಿಕ ಸಂಪರ್ಕ ಅಭಿಯಾನ ಪ್ರಾರಂಭಿಸಲು ನಿರ್ಧರಿಸಿದೆ.

ಇನ್ನೂ ಮೇ 30ರಿಂದ ಒಂದು ತಿಂಗಳ ಕಾಲ ದೇಶಾದ್ಯಂತ ಕಾರ್ಯಕ್ರಮ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ. ಮೇ 30 ಮತ್ತು ಜೂನ್ 30 ರ ನಡುವೆ ದೇಶಾದ್ಯಂತ ಸುಮಾರು 50 ರ್ಯಾಲಿಗಳನ್ನು ನಡೆಸಲು ಬಿಜೆಪಿ ಯೋಜಿಸುತ್ತಿದ್ದು ಪ್ರಧಾನಿ ನರೇಂದ್ರ ಮೋದಿ 6 ರ್ಯಾಲಿಗಳಿಗೆ ನೇತೃತ್ವ ವಹಿಸಲಿದ್ದಾರೆ.

ಮೂಲಗಳ ಪ್ರಕಾರ, ಸುಮಾರು ಒಂದು ವರ್ಷ ಬಾಕಿಯಿರುವ ಲೋಕಸಭೆ ಚುನಾವಣೆಗೆ (Lok sabha Election) ಬಿಜೆಪಿಯ ಸಿದ್ಧತೆಗಳಿಗೆ ಈ ಪ್ರಚಾರವು ಚಾಲನೆ ನೀಡಲಿದೆ. ಮೇ 31 ರಂದು ರಾಜಸ್ಥಾನದ ಅಜ್ಮೀರ್‌ನಲ್ಲಿ ಪ್ರಧಾನಿ ಮೋದಿಯವರಿಂದ ಮೆಗಾ ರ್ಯಾಲಿ ಮೂಲಕ ಈ ಅಭಿಯಾನವನ್ನು ಉದ್ಘಾಟಿಸಲಾಗುವುದು ಎಂದು ಮೂಲಗಳು ತಿಳಿಸಿವೆ.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ಕೇಂದ್ರ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ಇತರರು ಸಾಮೂಹಿಕ ಪ್ರಚಾರದಲ್ಲಿ ಪಾಲ್ಗೊಳ್ಳಲಿದ್ದಾರೆ.

RELATED ARTICLES

Related Articles

TRENDING ARTICLES