Thursday, December 19, 2024

ಖಾಸಗಿ ಬಸ್ ಗಳಲ್ಲಿಯೂ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಿ : ಶಾಸಕ ಸುನಿಲ್ ಕುಮಾರ್

ಬೆಂಗಳೂರು : ಖಾಸಗಿ ಬಸ್‌ಗಳಲ್ಲಿಯೂ ಮಹಿಳೆಯರಿಗೆ ಉಚಿತ ಪ್ರಯಾಣದ ಸೌಲಭ್ಯವನ್ನು ಕಲ್ಪಿಸಬೇಕು ಎಂದು ಬಿಜೆಪಿ ಶಾಸಕ ಸುನಿಲ್ ಕುಮಾರ್ ಒತ್ತಾಯಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ಕಾಂಗ್ರಸ್ ಸರ್ಕಾರ ಸರ್ಕಾರಿ ಸಾರಿಗೆಗಳಲ್ಲಿ ಮಾತ್ರ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ನೀಡಿರುವುದು ಸರಿಯಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ. ಇದಕ್ಕೆ ಕಾರಣವನ್ನೂ ನೀಡಿದ್ದಾರೆ.

ಉಡುಪಿ, ದಕ್ಷಿಣ ಕನ್ನಡ ಹಾಗೂ ಶಿವಮೊಗ್ಗ ಜಿಲ್ಲೆಯ ಬಹುತೇಕ ಭಾಗಗಳಿಗೆ ಸಾರಿಗೆ ಸಂಪರ್ಕ ಲಭ್ಯವಾಗುವುದು ಖಾಸಗಿ ಬಸ್‌ಗಳ ಮೂಲಕ ಮಾತ್ರ. ಇಲ್ಲಿ ಸರ್ಕಾರಿ ಬಸ್ ಸೇವೆ ಲಭ್ಯವಿಲ್ಲ. ಆದರೆ, ಕಾಂಗ್ರೆಸ್ ಸರ್ಕಾರ ಮಹಿಳೆಯರಿಗೆ ನೀಡುವ ಉಚಿತ ಬಸ್ ಸೇವೆಯನ್ನು ಸರ್ಕಾರಿ ಸಾರಿಗೆ ಸಂಸ್ಥೆಗೆ ಮಾತ್ರ ಸೀಮಿತಗೊಳಿಸಲು ನಿರ್ಧರಿಸಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ : ಎಲ್ಲಾ ಮಹಿಳೆಯರಿಗೂ ಉಚಿತ ಪ್ರಯಾಣ ; ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟನೆ

ಮೂರು ಜಿಲ್ಲೆಗಳ ಮಹಿಳೆಯರಿಗೆ ಅನ್ಯಾಯ

ಸರ್ಕಾರದ ನಿರ್ಧಾರದಿಂದ ಈ ಭಾಗದ ಜನರಿಗೆ(ಮಹಿಳೆಯರಿಗೆ) ಅನ್ಯಾಯವಾಗಲಿದೆ. ಸರ್ಕಾರ ಈ ಮೂರು ಜಿಲ್ಲೆಗಳಲ್ಲಿ ಖಾಸಗಿ ಬಸ್‌ಗಳಲ್ಲೂ ಮಹಿಳೆಯರಿಗೆ ಉಚಿತ ಪ್ರಯಾಣ ಸೌಲಭ್ಯ ಕಲ್ಪಿಸಬೇಕು ಎಂದು ಟ್ವೀಟ್ ಮಾಡುವ ಮೂಲಕ ಸರ್ಕಾರಕ್ಕೆ ಒತ್ತಾಯ ಮಾಡಿದ್ದಾರೆ.

ಉಚಿತ ಬಸ್‌ ಪ್ರಯಾಣ ಜಾರಿ 

ರಾಜ್ಯದ ಮಹಿಳೆಯರಿಗೆ 31 ಅಥವಾ ಜೂನ್ 1 ರಿಂದಲೇ ಉಚಿತ ಬಸ್‌ ಪ್ರಯಾಣ ಜಾರಿ ಮಾಡಲಾಗುವುದು ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ. ಇಂದಿನ ಸಭೆಯಲ್ಲಿ ಸಾರಿಗೆ ಅಧಿಕಾರಿಗಳು ಮೂರ್ನಾಲ್ಕು ಆಯ್ಕೆಗಳನ್ನು ಕೊಟ್ಟಿದ್ದಾರೆ. ಇವನ್ನು ನಾಳಿನ ಸಂಪುಟ ಸಭೆಯಲ್ಲಿ ಮಂಡಿಸುತ್ತೇನೆ ಎಂದು ತಿಳಿಸಿದ್ದಾರೆ.

RELATED ARTICLES

Related Articles

TRENDING ARTICLES