Monday, December 23, 2024

ಖಾತೆ ಮರುಹಂಚಿಕೆ : ಎಂ.ಬಿ ಪಾಟೀಲ, ಪ್ರಿಯಾಂಕ್ ಖರ್ಗೆಗೆ ಹೆಚ್ಚುವರಿ ಖಾತೆ

ಬೆಂಗಳೂರು : ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಮತ್ತೆ ಖಾತೆ ಮರುಹಂಚಿಕೆ ಮಾಡಿದ್ದು, ಸಚಿವರಾದ ಪ್ರಿಯಾಂಕ್ ಖರ್ಗೆ ಹಾಗೂ ಎಂ.ಬಿ ಪಾಟೀಲ್ ಅವರಿಗೆ ಹೆಚ್ಚುವರಿ ಖಾತೆ ನೀಡಿದೆ.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಹೆಚ್ಚುವರಿಯಾಗಿ ಐಟಿ ಮತ್ತು ಬಿಟಿ (ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ) ಖಾತೆಯನ್ನು ನೀಡಲಾಗಿದೆ.

ಬೃಹತ್ ಹಾಗೂ ಮಧ್ಯಮ ಕೈಗಾರಿಕೆ ಸಚಿವ ಎಂ.ಬಿ ಪಾಟೀಲ್ ಅವರಿಗೆ ಮೂಲಭೂತ ಸೌಲಭ್ಯ ಅಭಿವೃದ್ಧಿ ಖಾತೆಯನ್ನು ಹೆಚ್ಚುವರಿಯಾಗಿ ನೀಡಲಾಗಿದೆ. ಸಿಎಂ ಬಳಿ ಇದ್ದ ಖಾತೆ ಮರು ಹಂಚಿಕೆ ಮಾಡಿ ರಾಜ್ಯಪಾಲರು ಆದೇಶ ನೀಡಿದ್ದಾರೆ.

ಇದೇ ಮೇ 28ರಂದು ಸಿದ್ದರಾಮಯ್ಯ ಸಂಪುಟದ ನೂತನ ಸಚಿವರಿಗೆ ಖಾತೆಗಳನ್ನು ಹಂಚಿಕೆ ಮಾಡಲಾಗಿತ್ತು. ಈ ವೇಳೆ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ, ಮೂಲಭೂತ ಸೌಲಭ್ಯ ಅಭಿವೃದ್ಧಿ ಖಾತೆಯನ್ನು ಸಿಎಂ ತಮ್ಮ ಬಳಿ ಉಳಿಸಿಕೊಂಡಿದ್ದರು.

ಸಿದ್ದರಾಮಯ್ಯ ಬಳಿ ಇರುವ ಖಾತೆ

ಸಿಎಂ ಸಿದ್ದರಾಮಯ್ಯ ಅವರು ಆರ್ಥಿಕ (ಹಣಕಾಸು) ಖಾತೆ, ಸಂಪುಟ ಸಚಿವಾಲಯ, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ, ಗುಪ್ತಚರ ಹಾಗೂ ಹಂಚಿಕೆಯಾಗದ ಉಳಿದ ಖಾತೆಗಳನ್ನು ನಿಭಾಯಿಸಲಿದ್ದಾರೆ.

RELATED ARTICLES

Related Articles

TRENDING ARTICLES