Sunday, December 22, 2024

Lokayukta Raid : ಕರ್ನಾಟಕದಾದ್ಯಂತ ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ

ಬೆಂಗಳೂರು: ಬೆಳ್ಳಂಬೆಳಗ್ಗೆ ಇಂದು ಕರ್ನಾಟಕದಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ.

ಹೌದು, ಸರ್ಕಾರಿ ಅಧಿಕಾರಿ ನಿವಾಸ ಹಾಗೂ ಕಚೇರಿ ಮೇಲೆ ಲೋಕಾಯುಕ್ತ ದಾಳಿ ನಡೆಸಿದ್ದು, ದಾಖಲೆ ಪರಿಶೀಲನೆ ನಡೆಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬೆಳ್ಳಂಬೆಳಗ್ಗೆ ಎನ್​ಐಎ ಅಧಿಕಾರಿಗಳು ದಾಳಿ ಮಾಡಿದ್ದರೆ, ಮತ್ತೊಂದೆಡೆ ರಾಜ್ಯದ ವಿವಿದೆಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ(Karnataka Lokayukta raid) ಮಾಡಿದ್ದಾರೆ.

ಎಲ್ಲೆಲ್ಲಿ ದಾಳಿ..? 

ಬೆಂಗಳೂರು, ತುಮಕೂರು(Tumakuru) ಹಾಗೂ ಹಾವೇರಿ(Haveri) ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳಿ ಅಧಿಕಾರಿಗಳು, ಸರ್ಕಾರಿ ಅಧಿಕಾರಿಗಳ ನಿವಾಸ ಹಾಗೂ ಕಚೇರಿಗಳ ಮೇಲೆ  ಮಾಡಿದ್ದಾರೆ. ಸರ್ಕಾರಿ ಅಧಿಕಾರಿಗಳು ಆದಾಯ ಮೀರಿ ಅಧಿಕ ಆಸ್ತಿ ಗಳಿಸಿದ ಆರೋಪದ ಮೇಲೆ ದಾಳಿ ನಡೆದಿದ್ದು, ಆದಾಯದ ಮೂಲ, ಆಸ್ತಿ ಪತ್ರಗಳು, ಬ್ಯಾಂಕ್ ವಿವರಗಳ ಬಗ್ಗೆ ಲೋಕಾಯುಕ್ತರ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.

ಕೆಐಎಡಿಬಿ ಅಧಿಕಾರಿ ಮನೆ ಮೇಲೆ ದಾಳಿ

ತುಮಕೂರಿನ ಕೆಐಎಡಿಬಿ ಅಧಿಕಾರಿ ನರಸಿಂಹಮೂರ್ತಿ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ನಗರದ ಆರ್.ಟಿ. ನಗರದಲ್ಲಿ ಇರುವ ಮನೆ ಮೇಲೆ ಲೋಕಾಯುಕ್ತ ಡಿಎಸ್ ಪಿಗಳಾದ ಮಂಜುನಾಥ್ ಹಾಗೂ ಹರೀಶ್ ತಂಡ ದಾಳಿ ಮಾಡಿದ್ದು, ದಾಖಲೆಗಳನ್ನು ವಶಪಡಿಸಿಕೊಂಡು ಪರಿಶೀಲನೆ ನಡೆಸುತ್ತಿದೆ.

ಹಾವೇರಿಯ ನಿರ್ಮಿತಿ ಕೇಂದ್ರದ ಇಂಜಿನಿಯರ್ ಮನೆ ಮೇಲೆ ಲೋಕಾಯುಕ್ತ ದಾಳಿ

ಹಾವೇರಿ ಜಿಲ್ಲೆಯಲ್ಲೂ ಲೋಕಾಯುಕ್ತ ದಾಳಿಯಾಗಿದೆ. ಹಾವೇರಿಯ ನಿರ್ಮಿತಿ ಕೇಂದ್ರದ ಇಂಜಿನಿಯರ್ ವಾಗೀಶ್ ಶೇಟ್ಟರ್ ಮನೆ ಹಾಗೂ ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ.ರಾಣೆಬೆನ್ನೂರು ನಗರದ ನಿವಾಸ ಹಾಗೂ ಹಾವೇರಿಯ ದೇವಗರಿಯ ಜಿಲ್ಲಾಧಿಕಾರಿ ಕಚೇರಿ ಬಳಿ ಇರುವ ನಿರ್ಮಿತಿ ಕೇಂದ್ರ ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದು, ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ.

ಬೆಂಗಳೂರಿನ ಎರಡು ಕಡೆ ಲೋಕಾಯುಕ್ತ ದಾಳಿ

ಬೆಂಗಳೂರಿನ ಎರಡು ಕಡೆ ಇಂದು ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ಮಾಡಿದ್ದಾರೆ. ನಗರದ ಬಸವೇಶ್ವರನಗರದಲ್ಲಿರುವ ಬೆಸ್ಕಾ ಟೆಕ್ನಿಕಲ್ ಡೈರೆಕ್ಟರ್ ರಮೇಶ್ ಮನೆ ಮೇಲೆ ದಾಳಿಯಾಗಿದೆ. ಇನ್ನು ಇಂಡಸ್ಟ್ರೀಸ್ ಆಂಡ್ ಬಾಯ್ಲರ್ ಇಲಾಖೆ ಅಧಿಕಾರಿಯೊಬ್ಬರ ಮನೆ ಮೇಲೆ ಲೋಕಾಯುಕ್ತ ದಾಳಿ ಮಾಡಿದ್ದ, ಕಡತಗಳ ಪರಿಶೀಲನೆ ನಡೆಸಿದ್ದಾರೆ.

 ಮೈಸೂರು ಮಹಾನಗರ ಪಾಲಿಕೆ ಅಧಿಕಾರಿಯ ಮೇಲೆ ಲೋಕಾಯುಕ್ತ ದಾಳಿ

ಮೈಸೂರಿನ ನಿವೇದಿತಾ ನಗರ ಸಂಕ್ರಾಂತಿ ವೃತ್ತದ ಬಳಿ ಇರುವ ಮೈಸೂರು ಮಹಾನಗರ ಪಾಲಿಕೆ ಅಧಿಕಾರಿ ಮಹೇಶ್ ಕುಮಾರ್ ನಿವಾಸದ ಮೇಲೆ ದಾಳಿಯಾಗಿದೆ. ತೋಟದ ಮನೆ ಸೇರಿ ಹಲವು ಕಡೆ ಒಟ್ಟು 13 ಅಧಿಕಾರಿಗಳ ತಂಡ ಏಕಕಾಲಕ್ಕೆ ದಾಳಿ ಮಾಡಿ‌ ಕಾರ್ಯಾಚರಣೆ ನಡೆಸಿದೆ.

ಬೀದರ್ ಭೂಸೇನಾ ನಿಗಮದ ಅಧಿಕಾರಿ ಮೇಲೂ ದಾಳಿ

ಬೀದರ್ ಭೂಸೇನಾ ನಿಗಮದ ಅಧಿಕಾರಿ ಮನೆ ಮೇಲೂ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಬೀದರ್ ಹಾಗೂ ಚಿಟಗುಪ್ಪಾ ತಾಲೂಕಿನ ಮುತ್ತಂಗಿ ಗ್ರಾಮದ ಫಾರ್ಮ್ ಹೌಸ್ ಮೇಲೂ ಲೋಕಾಯುಕ್ತ ಡಿವೈಎಸ್ಪಿ ಓಲೆಕಾರ ನೇತೃತ್ವದಲ್ಲಿ ದಾಳಿ ದಾಳಿಯಾಗಿದೆ. ಬೀದರ್ ಹಾಗೂ ಚಿಟಗುಪ್ಪಾ ತಾಲೂಕಿನ ಮುತ್ತಂಗಿ ಗ್ರಾಮದ ಫಾರ್ಮ್ ಹೌಸ್ ನಲ್ಲೂ ಪರಿಶೀಲನೆ ನಡೆಸಿದ್ದಾರೆ.

 

RELATED ARTICLES

Related Articles

TRENDING ARTICLES