Friday, November 22, 2024

ತುಮಕೂರಿನಲ್ಲಿ ಲೋಕಾಯುಕ್ತ ದಾಳಿ : KIADB ಅಧಿಕಾರಿ ಮನೆಯಲ್ಲಿ 8 ಲಕ್ಷ ನಗದು, 1 ಕೆ.ಜಿ ಚಿನ್ನ ವಶ

ತುಮಕೂರು : ರಾಜ್ಯದಲ್ಲಿ ಬೆಳ್ಳಂ ಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ಹಲವು ಅಧಿಕಾರಿಗಳ ಮನೆ ಮೇಲೆ ದಿಢೀರ್ ದಾಳಿ ನಡೆಸಿ ಬಿಗ್ ಶಾಕ್ ನೀಡಿದ್ದಾರೆ.

ತುಮಕೂರಿನ ಆರ್.ಟಿ ನಗರದ ಕೆಐಎಡಿಬಿ(KIADB) ಅಧಿಕಾರಿಯೊಬ್ಬರ ಮನೆ ಮೇಲೆ ಬೆಳಗ್ಗೆಯೇ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು ಹಲವು ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ.

ಆದಾಯಕ್ಕಿಂತ ಹೆಚ್ಚಿನ ಆಸ್ತಿ ಗಳಿಕೆ ಆರೋಪ ಮೇರೆಗೆ ಆರ್.ಟಿ. ನಗರದ ಪಕ್ಕದಲ್ಲಿರುವ ಶಂಕರಪುರಂನ ಡಿ ಬ್ಲಾಕ್ ನಲ್ಲಿರುವ ಸಿ.ಎನ್.ಮೂರ್ತಿ ಅವರ ಮನೆ ಮೇಲೆ ದಾಳಿ ನಡೆದಿದೆ. ಮೂರ್ತಿ ಅವರು ಮೈಸೂರಿನ ಕೆಐಎಡಿಬಿ ಕಚೇರಿಯಲ್ಲಿ ಕಾರ್ಯನಿರ್ವಾಹಕ ಇಂಜಿಯರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

ಇದನ್ನೂ ಓದಿ : ತುಮಕೂರಿನಲ್ಲಿ ಲೋಕಾಯುಕ್ತ ದಾಳಿ : KIADB ಅಧಿಕಾರಿ ಮನೆಯಲ್ಲಿ 8 ಲಕ್ಷ ನಗದು, 1 ಕೆ.ಜಿ ಚಿನ್ನ ವಶ

ಲೋಕಾಯುಕ್ತ ಎಸ್.ಪಿ ವಲಿಬಾಷಾ ಮಾರ್ಗದರ್ಶನದಲ್ಲಿ ಡಿವೈಎಸ್.ಪಿಗಳಾದ ಮಂಜುನಾಥ್ ಮತ್ತು ಹರೀಶ್ ನೇತೃತ್ವದ ತಂಡ ದಾಳಿ ನಡೆಸಿ ದಾಖಲೆಗಳ ತಪಾಸಣೆ ನಡೆಸಿದ್ದಾರೆ. ಇದೇ ವೇಳೆ ಲೋಕಾಯುಕ್ತ ಅಧಿಕಾರಿಗಳು ಸಿ.ಎನ್.ಮೂರ್ತಿ ಅವರ ಮನೆ ಹಾಗೂ ಸಮೀಪದಲ್ಲೇ ಇರುವ ಅವರ ಮಾವ ಹಾಗೂ ನಾದಿನಿ ಮನೆ ಮೇಲೂ ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ.

ಸಿ.ಎನ್. ಮೂರ್ತಿ ಅವರು ಆದಾಯಕ್ಕಿಂತ ಅಧಿಕ ಅಕ್ರಮ ಆಸ್ತಿ ಹೊಂದಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ್ದಾರೆ. 8 ಲಕ್ಷಕ್ಕೂ ಹೆಚ್ಚು ನಗದು, 1 ಕಿಲೋಗೂ ಚಿನ್ನಾಭರಣಗಳು, ಚರಾಸ್ತಿಯ ದಾಖಲೆಗಳು ಪತ್ತೆಯಾಗಿವೆ. ಕಾಗದ ಪತ್ರ, ಚಿನ್ನಾಭರಣ, ಬೆಳ್ಳಿ ವಶಕ್ಕೆ ಪಡೆಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

RELATED ARTICLES

Related Articles

TRENDING ARTICLES