Monday, December 23, 2024

ರಾಜ್ಯದಲ್ಲಿ 5 ದಿನ ಗುಡುಗು, ಮಿಂಚು ಸಹಿತ ಭಾರೀ ಮಳೆ

ಬೆಂಗಳೂರು : ಮುಂದಿನ 5 ದಿನ ರಾಜ್ಯದಲ್ಲಿ ಗುಡುಗು, ಮಿಂಚು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರಿನಲ್ಲಿ ಇಂದು, ನಾಳೆ ಗುಡುಗು ಸಹಿತ ಮಳೆ ಸಾಧ್ಯತೆ ಇದೆ. ದಕ್ಷಿಣ ಒಳನಾಡಿಗೆ ಇಂದು, ನಾಳೆ ಹಾಗೂ ಜೂನ್ 4ರಂದು ಬಹುತೇಕ ಕಡೆ ಜೋರು ಮಳೆ ಸಾಧ್ಯತೆ ಇದೆ. ಜೂ.2, 3ರಂದು ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ತಜ್ಞ ಪ್ರಸಾದ್ ಮಾಹಿತಿ ನೀಡಿದ್ದಾರೆ.

ಕರಾವಳಿಯಲ್ಲಿ ಮುಂದಿನ 5 ದಿನ ಕೆಲವೆಡೆ ಸಾಧಾರಣ ಮಳೆ ಸಾಧ್ಯತೆ ಇದ್ದು, ಉತ್ತರ ಒಳನಾಡಿನಲ್ಲಿ ಕೆಲ ಕಡೆ ಮಾತ್ರ ಮಳೆ ಸಾಧ್ಯತೆ ಇದೆ. ಇನ್ನು ಬೆಂಗಳೂರಿನಲ್ಲಿ ಇಂದು, ನಾಳೆ ಗುಡುಗು ಸಹಿತ ಮಳೆ ಸಾಧ್ಯತೆ ಇದೆ ಎಂದು ಹೇಳಿದ್ದಾರೆ.

ಸಿಡಿಲು ಬಡಿದು ಇಬ್ಬರು ಸಾವು

ಸಿಡಿಲು ಬಡಿದು ಇಬ್ಬರು ಸಾವನ್ನಪ್ಪಿರುವ ಎರಡು ಪ್ರತ್ಯೇಕ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದೆ. ಅಥಣಿ ತಾಲೂಕಿನ ಕಕಮರಿ ಹಾಗೂ ದೆಸರಹಟ್ಟಿ ಗ್ರಾಮಗಳಲ್ಲಿ ಪ್ರತ್ಯೇಕ ಘಟನೆ ಸಂಭವಿಸಿದೆ.

ದೇಸರಹಟ್ಟಿ ಗ್ರಾಮದ‌ ಜಮೀನಿನಲ್ಲಿ ಸಿಡಿಲು ಬಡಿದಿದ್ದರಿಂದ ರೈತ ಅಮುಲ್ ಜಯಸಿಂಗ್ (24) ಸಾವನ್ನಪ್ಪಿದ್ದಾನೆ. ಕಕಮರಿ ಗ್ರಾಮದ ಜಮೀನಿನಲ್ಲಿ ವಿಟ್ಟಾಬಾಯಿ ಕಾಮಕರ (50) ಎಂಬ ಮಹಿಳೆ ಮೃತಪಟ್ಟಿದ್ದಾರೆ. ಈ ಸಂಬಂಧ ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES

Related Articles

TRENDING ARTICLES