Wednesday, October 30, 2024

ಸಿಎಂಗೆ ಕಾನೂನು ಸಲಹೆಗಾರ, ಇಬ್ಬರು ರಾಜಕೀಯ ಕಾರ್ಯದರ್ಶಿ ನೇಮಕ

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಇಬ್ಬರು ರಾಜಕೀಯ ಕಾರ್ಯದರ್ಶಿಗಳು ಹಾಗೂ ಕಾನೂನು ಸಲಹೆಗಾರರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

ಸಿಎಂ ರಾಜಕೀಯ ಕಾರ್ಯದರ್ಶಿಯಾಗಿ ಕೆ.ಗೋವಿಂದರಾಜ್, ನಜೀರ್‌ ಅಹ್ಮದ್ ನೇಮಕವಾಗಿದ್ದಾರೆ. ಇನ್ನೂ ವಿರಾಜಪೇಟೆ ಕ್ಷೇತ್ರದ ಶಾಸಕರಾಗಿರುವ ಎ.ಎಸ್​ ಪೊನ್ನಣ್ಣ ಅವರನ್ನು ಸಿಎಂ ಕಾನೂನು ಸಲಹೆಕಾರರಾಗಿ ನೇಮಕ ಮಾಡಲಾಗಿದೆ.

ಕೆ.‌ ಗೋವಿಂದರಾಜ್​ ವಿಧಾನಪರಿಷತ್ ಸದಸ್ಯರಾಗಿದ್ದಾರೆ. ಇವರು ಹಾಗೂ ನಜೀರ್‌ ಅಹ್ಮದ್ ಅವರನ್ನು ಸಿಎಂ ಸಿದ್ದರಾಮಯ್ಯ ರಾಜಕೀಯ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ. ಇವರಿಗೆ ಸಂಪುಟ ದರ್ಜೆ ಸ್ಥಾನಮಾನ‌ಗಳನ್ನು ನೀಡಲಾಗಿದೆ.

ಇದನ್ನೂ ಓದಿ : ‘ಸಿದ್ದು-ಡಿಕೆಶಿ ಜಾತಿ ಪ್ರೇಮ’ ನೋಡಿ ಈಡಿಗ ಮುಖಂಡರು ಕಲಿಯಬೇಕು : ಪ್ರಣವಾನಂದ ಸ್ವಾಮೀಜಿ

ಸುನೀಲ್​​ ಕನುಗೋಲು ಮುಖ್ಯ ಸಲಹೆಗಾರ

ಸಿಎಂ ಕಾನೂನು ಸಲಹೆಗಾರರಾಗಿ ಕೊಡಗು ಜಿಲ್ಲೆಯ ವಿರಾಜಪೇಟೆ ಶಾಸಕ ಪೊನ್ನಣ್ಣ ನೇಮಕ ಮಾಡಲಾಗಿದೆ. ಚುನಾವಣಾ ನೀತಿ ತಂತ್ರಜ್ಞ ಸುನೀಲ್​​ ಕನುಗೋಲು ಅವರು ಸಿಎಂ ಮುಖ್ಯ ಸಲಹೆಗಾರರನ್ನಾಗಿ ನೇಮಿಸಲಾಗಿದೆ. ಈ ನಾಲ್ವರಿಗೆ ಸಂಪುಟ ದರ್ಜೆಯ ಸ್ಥಾನಮಾನ‌ದೊಂದಿಗೆ, ಎಲ್ಲ ಸೌಲಭ್ಯಗಳನ್ನು ನೀಡುವಂತೆ ಆದೇಶಿಸಲಾಗಿದೆ.

ತಿಮ್ಮಕ್ಕಗೆ ಸಂಪುಟ ದರ್ಜೆ ಸ್ಥಾನಮಾನ‌

ಸಹಸ್ರಾರು ಗಿಡಗಳನ್ನು ನೆಟ್ಟು, ಅವುಗಳನ್ನು ತಾಯಿಯಂತೆ ಪೊರೆದ ವೃಕ್ಷಮಾತೆ ಸಾಲುಮರದ ತಿಮ್ಮಕ್ಕನವರ ನಿಸ್ವಾರ್ಥ ಸೇವೆಯನ್ನು ಗೌರವಿಸುವ ನಿಟ್ಟಿನಲ್ಲಿ ತಿಮ್ಮಕ್ಕನವರಿಗೆ ಈ ಹಿಂದೆ ನೀಡಲಾಗಿದ್ದ ಸಚಿವ ಸಂಪುಟ ದರ್ಜೆ ಸ್ಥಾನಮಾನವನ್ನು ಮುಂದುವರಿಸಲಾಗಿದೆ. ಜೊತೆಗೆ, ಪರಿಸರ ರಾಯಭಾರಿಯಾಗಿ ಅವರನ್ನೇ ಮುಂದುವರೆಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶಿಸಿದ್ದಾರೆ.

RELATED ARTICLES

Related Articles

TRENDING ARTICLES