Sunday, December 22, 2024

Karnataka Rains: ರಾಜ್ಯದ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಇಂದು ಮಳೆಯಾಗುವ ಸಾಧ್ಯತೆ

ಬೆಂಗಳೂರು: ಕರ್ನಾಟಕದ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಇಂದು ಧಾರಾಕಾರ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಎಂದು ಹವಾಮಾನ ಇಲಾಖೆ ಸೂಚಿಸಿದೆ.

ದಕ್ಷಿಣ ಒಳನಾಡಿನ 6 ಜಿಲ್ಲೆಗಳಲ್ಲಿ ಮಳೆ

ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗದಲ್ಲಿ ಭಾರಿ ಮಳೆ ಸುರಿಯಲಿದ್ದು, ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ಇನ್ನೂ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿಯಲ್ಲಿ ಸಾಧಾರಣ ಮಳೆಯಾಗಲಿದೆ.

ಸಾಧಾರಣ ಮಳೆ

ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ದಾವಣಗೆರೆ, ತುಮಕೂರು, ವಿಜಯನಗರ, ಕೋಲಾರ, ಮಂಡ್ಯ, ಮೈಸೂರಿನಲ್ಲಿ ಕೂಡ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಮಾಗಡಿ, ವಿರಾಜಪೇಟೆ, ಚಿಂತಾಮಣಿ, ದೇವನಹಳ್ಳಿ, ಶಿಡ್ಲಘಟ್ಟ, ಚಂದೂರಾಯನಹಳ್ಳಿ, ಬೆಂಗಳೂರು ಎಚ್​ಎಎಲ್​, ಗೋಪಾಲ್​ನಗರ, ಮಧುಗಿರಿ, ಗೋಣಿಕೊಪ್ಪಲ್, ಹರದನಹಳ್ಳಿ, ತೊಂಡೆಭಾವಿ, ಬೈಲಹೊಂಗಲ, ದೊಡ್ಡಬಳ್ಳಾಪುರ, ಹೊಸಕೋಟೆ, ಕುಣಿಗಲ್, ಚಾಮರಾಜನಗರ, ಹೆಸರಘಟ್ಟ, ಬುಕ್ಕಾಪಟ್ಟಣ, ಮಲವಳ್ಳಿ, ಶ್ರವಣಬೆಳಗೊಳ, ಹಾರಂಗಿ, ಗೌರಿಬಿದನೂರಿನಲ್ಲಿ ಮಳೆಯಾಗಲಿದೆ.

RELATED ARTICLES

Related Articles

TRENDING ARTICLES