Monday, December 23, 2024

ಏಪ್ರಿಲ್ 1ರ ವೇಳೆಗೆ ಐಫೋನ್ ಮೊಬೈಲ್ ತಯಾರಿಕೆ ಆರಂಭ : ಎಂ.ಬಿ ಪಾಟೀಲ್

ಬೆಂಗಳೂರು : ಜುಲೈ 1ರ ಹೊತ್ತಿಗೆ ಐಫೋನ್ ತಯಾರಿಕಾ ಕಂಪನಿಗೆ ಭೂಮಿ ಹಸ್ತಾಂತರಿಸಲಾಗುತ್ತದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್ ಹೇಳಿದ್ದಾರೆ.

ಜಾರ್ಜ್ ಚು ಅವರ ನೇತೃತ್ವದಲ್ಲಿ ಫಾಕ್ಸ್ ಕಾನ್ ಕಂಪನಿಯ ಉನ್ನತ ಅಧಿಕಾರಿಗಳ ತಂಡ ಸಚಿವ ಎಂ.ಬಿ ಪಾಟೀಲ್ ಅವರನ್ನು ಇಂದು ಭೇಟಿ ಮಾಡಿತು. ಈ ವೇಳೆ ಮಾತನಾಡಿರುವ ಅವರು, ಕಾಂಗ್ರೆಸ್ ಸರ್ಕಾರವು 50 ಸಾವಿರ ಜನರಿಗೆ ಉದ್ಯೋಗ ಒದಗಿಸುವ 13,600 ಕೋಟಿ ರೂ. ಮೊತ್ತದ ಈ ಯೋಜನೆ ಜಾರಿಗೆ ವೇಗ ನೀಡಲಿದೆ ಎಂದಿದ್ದಾರೆ.

ಮುಂಚೂಣಿ ಐಫೋನ್ ತಯಾರಿಕಾ ಕಂಪನಿ ಫಾಕ್ಸ್ ಕಾನ್ 2024ರ ಏಪ್ರಿಲ್ 1ರ ವೇಳೆಗೆ ದೇವನಹಳ್ಳಿ ಘಟಕದಲ್ಲಿ ಉತ್ಪಾದನೆ ಆರಂಭಿಸುವ ಗುರಿ ಹೊಂದಿದೆ. ಇದಕ್ಕೆ ಪೂರಕವಾಗಿ ಜುಲೈ 1ರ ಹೊತ್ತಿಗೆ ಪೂರ್ತಿಯಾಗಿ ಭೂಮಿ ಹಸ್ತಾಂತರಿಸಲಾಗುವುದು ಎಂದು ಎಂ.ಬಿ ಪಾಟೀಲ್ ಹೇಳಿದ್ದಾರೆ.

.1 ವೇಳೆಗೆ ಐಫೋನ್ ತಯಾರಿಕೆ ಆರಂಭ

ದೇವನಹಳ್ಳಿ ಸಾಮಾನ್ಯ ಕೈಗಾರಿಕಾ ಪ್ರದೇಶದಲ್ಲಿ (ಐಟಿಐಆರ್) ಕಾರ್ಯಯೋಜನೆಗಾಗಿ 300 ಎಕರೆ ಗುರುತಿಸಲಾಗಿದೆ. 2024ರ ಏಪ್ರಿಲ್ 1ರ ವೇಳೆಗೆ ಇಲ್ಲಿ ಕಂಪನಿಯು ತಯಾರಿಕೆ ಶುರು ಮಾಡುವ ಗುರಿ ಹಾಕಿಕೊಂಡಿದೆ. ಇದನ್ನು ಗಮನದಲ್ಲಿರಿಸಿಕೊಂಡು ಜುಲೈ 1ಕ್ಕೆ ಮುಂಚೆ ಕಂಪನಿಗೆ ಭೂಮಿ ಹಸ್ತಾಂತರಿಸಲಾಗುವುದು ಎಂದು ತಿಳಿಸಿದ್ದಾರೆ.

ಇದನ್ನೂ ಓದಿ : ಇನ್ಮುಂದೆ ಕರ್ನಾಟಕದಲ್ಲೇ ತಯಾರಾಗುತ್ತೆ ಐಫೋನ್

2 ಕೋಟಿ ಐಫೋನ್ ಮೊಬೈಲ್‌ ತಯಾರಿಕೆ

ತೈವಾನ್ ಮೂಲದ ಮುಂಚೂಣಿ ಕಂಪನಿಯು ಮೂರು ಹಂತಗಳಲ್ಲಿ ಘಟಕ ನಿರ್ಮಾಣ ಪೂರೈಸಿ ಅಂತಿಮವಾಗಿ ಇಲ್ಲಿ ವರ್ಷಕ್ಕೆ 2 ಕೋಟಿ ಮೊಬೈಲ್‌ಗಳನ್ನು ತಯಾರಿಸುವ ಯೋಜನೆ ಹಾಕಿಕೊಂಡಿದೆ‌. ಈಗಾಗಲೇ ಭೂಮಿಗಾಗಿ ನಿಗದಿಗೊಳಿಸಿರುವ ಮೊತ್ತದಲ್ಲಿ ಶೇ.30ರಷ್ಟನ್ನು (90 ಕೋಟಿ ರೂ.) ಕಂಪನಿಯು ಕೆ.ಐ.ಎ‌‌.ಡಿ.ಬಿ.ಗೆ ಪಾವತಿಸಿದೆ ಎಂದು ಮಾಹಿತಿ ನೀಡಿದರು.

ಕಂಪನಿಯು ದಿನಕ್ಕೆ 50 ಲಕ್ಷ ಲೀಟರ್ ನೀರು ಬೇಕಾಗುವುದಾಗಿ ತಿಳಿಸಿದೆ.‌ ಇದನ್ನು ಪೂರೈಸುವ ಜೊತೆಗೆ ಗುಣಮಟ್ಟದ ವಿದ್ಯುತ್, ರಸ್ತೆ ಸಂಪರ್ಕ ಇತ್ಯಾದಿ ಮೂಲಸೌಕರ್ಯಗಳನ್ನು ಒದಗಿಸಲಾಗುತ್ತದೆ. ಕಂಪನಿಯ ಸಿಬ್ಬಂದಿಗೆ ಬೇಕಾಗುವ ಕೌಶಲ ವಿವರಗಳನ್ನು ಕೂಡ ಕೇಳಲಾಗಿದೆ. ಅದಕ್ಕೆ ತಕ್ಕಂತೆ ಸರ್ಕಾರದ ವತಿಯಿಂದ ಅರ್ಹರಿಗೆ ಕೌಶಲಗಳ ತರಬೇತಿ ಕೊಟ್ಟು ಮಾನವ ಸಂಪನ್ಮೂಲ ಲಭ್ಯವಾಗಿಸಲು ಒತ್ತು ಕೊಡಲಾಗುವುದು ಎಂದು ಪಾಟೀಲ್ ಹೇಳಿದ್ದಾರೆ.

ಈ ಸಂದರ್ಭದಲ್ಲಿ ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ, ಕಂಪನಿಯ ಪೌಲ್ ಲಿಯು, ಟಾನ್ನಿ ಲಿಯು, ಸೈಮನ್ ಸಾಂಗ್, ಭಾರತ್ ದಂಡಿ ಮತ್ತಿತರರು ಉಪಸ್ಥಿತರಿದ್ದರು.

RELATED ARTICLES

Related Articles

TRENDING ARTICLES