Monday, December 23, 2024

ಶಿವಕುಮಾರ ಶ್ರೀಗಳ ಫೋಟೋ ವಿಧಾನಸೌಧದಿಂದ ತೆರವು : ಬಿಜೆಪಿ ಕಿಡಿ

ಬೆಂಗಳೂರು : ನಡೆದಾಡುವ ದೇವರು, ತ್ರಿವಿಧ ದಾಸೋಹಿ ಲಿಂಗೈಕ್ಯ ಡಾ. ಶಿವಕುಮಾರ ಸ್ವಾಮೀಜಿಗಳ ಫೋಟೋಗಳನ್ನು ವಿಧಾನಸೌಧದ ಕೊಠಡಿಯಿಂದ ತೆರವು ಮಾಡಲಾಗಿದೆ.

ರಾಜ್ಯ ವಿಧಾನಸಭಾ ಚುನಾವಣೆ ಗೆಲುವಿನ ಬಳಿಕ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್‌ ಸರ್ಕಾರ ತಮ್ಮ ನಡೆಯಿಂದ ವಿಪಕ್ಷಗಳ ಆಕ್ರೋಶಕ್ಕೆ ತುತ್ತಾಗುತ್ತಿದೆ. ಅದರಲ್ಲೂ ಶ್ರೀಗಳ ಫೋಟೋ ತೆರವು ಮಾಡಿರುವುದಕ್ಕೆ ಬಿಜೆಪಿ ನಾಯಕರು ಆಕ್ರೋಶ ಹೊರಹಾಕಿದ್ದಾರೆ.

ವಿಧಾನಸೌಧದಲ್ಲಿ ಈಗಾಗಲೇ ನೂತನ ಸಚಿವರಿಗೆ ಕೊಠಡಿಗಳನ್ನು ಹಂಚಿಕೆ ಮಾಡಲಾಗಿದೆ. ಆ ಕೊಠಡಿಯನ್ನು ಸ್ವಚ್ಛಗೊಳಿಸಿ ತಮಗೆ ಬೇಕಾದಂತೆ ಸಿದ್ಧಪಡಿಸಿಕೊಳ್ಳಲಾಗಿದೆ. ಈ ವೇಳೆ ತುಮಕೂರಿನ ಸಿದ್ದಗಂಗಾ ಮಠದ ಲಿಂಗೈಕ್ಯ ಶಿವಕುಮಾರ ಸ್ವಾಮೀಜಿ ಫೋಟೋಗಳನ್ನು ಬೇಕಾಬಿಟ್ಟಿಯಾಗಿ ಹೊರಗೆ ಹಾಕಲಾಗಿದೆ.

ಕಾಂಗ್ರೆಸ್‌ ದುರಹಂಕಾರದ ಪರಮಾವಧಿ

ಈ ಕುರಿತು ರಾಜ್ಯ ಬಿಜೆಪಿ ಟ್ವೀಟ್‌ ಮಾಡಿದ್ದು, ಕಾಂಗ್ರೆಸ್‌ ಸರ್ಕಾರಕ್ಕೆ ಕೇಸರಿ ಎಂದರೆ ದ್ವೇಷ, ಶತ್ರುಭಾವ! ಇದೆ. ಇಂದು ನಡೆದಾಡುವ ದೇವರು, ಕಾಯಕಯೋಗಿ, ತ್ರಿವಿಧದಾಸೋಹಿ  ಪರಮ ಪೂಜನೀಯ ಡಾ. ಶಿವಕುಮಾರ ಮಹಾಸ್ವಾಮೀಜಿಯವರ ಭಾವಚಿತ್ರವನ್ನು ವಿಧಾನಸೌಧದ ಕೊಠಡಿಯಿಂದ ತೆರವುಗೊಳಿಸಿ ಪಡಸಾಲೆಯಲ್ಲಿ ಉರುಳಾಡುವಂತೆ ಮಾಡಿ ಅಪಮಾನಿಸಿರುವುದು ಅಕ್ಷಮ್ಯ ಅಪರಾಧ ಎಂದು ಛೇಡಿಸಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಕೂಡಲೆ ರಾಜ್ಯದ ಜನತೆಯ ಕ್ಷಮೆ ಕೋರಿ ಪೂಜ್ಯ ಸ್ವಾಮೀಜಿಯವರ ಭಾವಚಿತ್ರವನ್ನು ಸಕಲ ಗೌರವಗಳೊಂದಿಗೆ ಪುನಃ ಲಗತ್ತಿಸಲು ಆಗ್ರಹಿಸುತ್ತೇವೆ ಎಂದು ತಿಳಿಸಿದೆ.

RELATED ARTICLES

Related Articles

TRENDING ARTICLES