Wednesday, January 22, 2025

ಸಿಎಂ ಹೈವೋಲ್ಟೇಜ್​​ ಮೀಟಿಂಗ್​ನಲ್ಲಿ ಇದೇ ಉಚಿತ ಗ್ಯಾರಂಟಿಗಳು ಘೋಷಣೆ..? 

ಬೆಂಗಳೂರು: ಕಾಂಗ್ರೆಸ್​ ಸರ್ಕಾರದ ಭರವಸೆಯ ಯೋಜನೆಗಳಾದ 5 ಗ್ಯಾರೆಂಟಿಗಳು ಇದೇ ಜಾರಿಯಾಗುವ ಸಾಧ್ಯತೆ ಇದೆ.

ಹೌದು, ಸಚಿವ ಸಂಪುಟದಲ್ಲಿ ಈ ಸಂಬಂಧ ಇಂದು ಮಹತ್ವದ ಸಭೆ ನಡೆಯಲಿದ್ದು, ಇವತ್ತಿನ ಸಭೆಯಲ್ಲೇ ಐದು ಗ್ಯಾರಂಟಿಗಳಿಗೆ ಅಂತಿಮ ಮುದ್ರೆ ಬೀಳಲಿದೆ ಎಂಬುವುದನ್ನು ಕಾದುನೋಡಬೇಕಿದೆ. 

ಇದನ್ನೂ ಓದಿ: ಸಿಎಂಗೆ ಕಾನೂನು ಸಲಹೆಗಾರ, ಇಬ್ಬರು ರಾಜಕೀಯ ಕಾರ್ಯದರ್ಶಿ ನೇಮಕ

ಇನ್ನೂ ಸಿಎಂ ಸಿದ್ದರಾಮಯ್ಯ ಎಲ್ಲಾ ಇಲಾಖೆ ಜತೆ ಸಭೆ ನಡೆಸಿದ್ದು, ಅಂತಿಮ ನಿರ್ಧಾರಕ್ಕೆ ಇಂದು ಬಂದಿದ್ದಾರೆ. ರಾಜ್ಯದ ಜನರಿಗೆ ಫ್ರೀ ಗಿಫ್ಟ್‌ ಕೊಡಲು ಕಾಂಗ್ರೆಸ್​ ಸರ್ಕಾರ ತೀರ್ಮಾನಿಸಿದ್ದಾರೆ. ಅದಕ್ಕಾಗಿ ಇಂದು ಬೆಳಗ್ಗೆ 11 ಗಂಟೆಗೆ ವಿಧಾನಸೌಧದಲ್ಲಿ ಸಚಿವ ಸಂಪುಟ ಸಭೆ ನಡೆಯಲಿದೆ. 

ಈ ಐದು ಗ್ಯಾರಂಟಿಗಳು ಕಾಂಗ್ರೆಸ್​ಗೆ ಬಹುಮತ ನೀಡಿ ಗೆಲುವು ನೀಡಿವೆ. ಇಡೀ ರಾಜ್ಯಕ್ಕೆ ರಾಜ್ಯವೇ ಎದುರು ನೋಡುತ್ತಿರುವ ಗ್ಯಾರಂಟಿ, ಹಾದಿ ಬೀದಿಯಲ್ಲಿ ಚರ್ಚೆ ಆಗುತ್ತಿವೆ. ಇದೀಗ ಇದೇ ಗ್ಯಾರಂಟಿ ಘೋಷಣೆಗೆ ಕ್ಷಣಗಣನೆ ಶುರುವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಇಂದು ಸಭೆ ನಡೆಯಲಿದೆ. ಸಭೆ ಬಳಿಕ ಯೋಜನೆಗಳು ಜಾರಿಯಾಗುವ ಸಾಧ್ಯತೆ ಇದೆ.

RELATED ARTICLES

Related Articles

TRENDING ARTICLES