Monday, December 23, 2024

ಡಿಸಿಎಂ ಡಿಕೆ ಶಿವಕುಮಾರ್​ಗೆ ಬಿಗ್ ರಿಲೀಫ್ ನೀಡಿದ ಹೈಕೋರ್ಟ್

ಬೆಂಗಳೂರು: ಡಿಸಿಎಂ ಡಿಕೆಶಿಗೆ ಹೈಕೋರ್ಟ್ ಬಿಗ್​ ರಿಲೀಫ್​ ನೀಡಿದೆ.

ಹೌದು,ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣದಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಅವರಿಗೆ ಹೈಕೋರ್ಟ್ ಮತ್ತೆ ತಡೆಯಾಜ್ಞೆ ವಿಸ್ತರಿಸಿದ್ದು, ಡಿಕೆ ಶಿವಕುಮಾರ್​ ನಿರಾಳರಾಗಿದ್ದಾರೆ.

ಇನ್ನೂ ಸಿಬಿಐ ತನಿಖೆಗೆ ನೀಡಿದ್ದ ಮಧ್ಯಂತರ ತಡೆಯಾಜ್ಞೆ ಕರ್ನಾಟಕ ಹೈಕೋರ್ಟ್(Karnataka High Court) ಏಕಸದಸ್ಯ ಪೀಠ ಮತ್ತೆ ವಿಸ್ತರಣೆ ಮಾಡಿ  ಇಂದು ಆದೇಶ ಹೊರಡಿಸಿದೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಕೆ ಶಿವಕುಮಾರ್​ ವಿರುದ್ಧದ ಸಿಬಿಐ ತನಿಖೆಗೆ ಎರಡನೇ ಬಾರಿಗೆ ಹೈಕೋರ್ಟ್ ಮೇ ಅಂತ್ಯದವರೆಗೂ ತಡೆಯಾಜ್ಞೆ ನೀಡಿದೆ.

ಪ್ರಕರಣವೇನು?

ಭ್ರಷ್ಟಾಚಾರ ನಿಗ್ರಹ ಕಾಯ್ದೆ 1988ರ ಕಲಂ 13(2), 13(1)ಇ ಅಡಿಯಲ್ಲಿ ಸಿಬಿಐ 2020ರ ಅಕ್ಟೋಬರ್ 3ರಂದು ಕ್ರಿಮಿನಲ್ ಪ್ರಕರಣ ದಾಖಲಿಸಿತ್ತು. ಈ ಪ್ರಕರಣ ರದ್ದು ಕೋರಿ ಡಿಕೆ ಶಿವಕುಮಾರ್ ಅವರು ಹೈಕೋರ್ಟ್ ಮೊರೆ ಹೋಗಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್, ತನಿಖೆಗೆ ಮಧ್ಯಂತರ ತಡೆ ತಡೆಯಾಜ್ಞೆ ನೀಡಿತ್ತು. ಇದೇ ಅದೇ ತಡೆಯಾಜ್ಞೆ ವಿಸ್ತರಣೆಯಾಗುತ್ತಾ ಬಂದಿದೆ.

RELATED ARTICLES

Related Articles

TRENDING ARTICLES