Saturday, May 18, 2024

ಮಕ್ಕಳ ಹಿತದೃಷ್ಟಿಯಿಂದ ಪಠ್ಯ ಪರಿಷ್ಕರಣೆ ಮಾಡುತ್ತೇವೆ ; ಸಚಿವ ಮಧು ಬಂಗಾರಪ್ಪ

ಬೆಂಗಳೂರು: ಮಕ್ಕಳ ಹಿತದೃಷ್ಟಿಯಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರ ಮಾರ್ಗದರ್ಶನದಲ್ಲಿ ನಾವು ಪಠ್ಯಪರಿಷ್ಕರಣೆ ಮಾಡುತ್ತೇವೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ (Madhu Bangarappa) ಹೇಳಿದ್ದಾರೆ.

ಹೌದು, ವಿಧಾನಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಕಾಂಗ್ರೆಸ್​ ಅಧಿಕಾರಕ್ಕೆ ಬಂದ ಮೇಲೆ ಪಠ್ಯಪುಸ್ತಕ ಪರಿಷ್ಕರಣೆ (Textbook revision) ವಿಚಾರ ಸಾಕಷ್ಟು ಚರ್ಚೆಯಾಗುತ್ತಿದೆ.ಆದರಿಂದ ಅದಷ್ಟು ಬೇಗ ನಾವು ಈ ಸಮಸ್ಸೆಯನ್ನು ಬಗೆಹರಿಸುತ್ತೇವೆ ಎಂದರು.

ಈ ಹಿಂದಿನ ಸರ್ಕಾರ ಪರಿಷ್ಕರಿಸಿದ ಪಠ್ಯಪುಸ್ತಕವನ್ನು, ಈಗ ಮತ್ತೆ ಕಾಂಗ್ರೆಸ್​ ಸರ್ಕಾರ ಪರಿಷ್ಕರಿಸಲು ಮುಂದಾಗಿದೆ. ಪಠ್ಯಪುಸ್ತಕ ಪರಿಷ್ಕರಣೆಯನ್ನು ಮಕ್ಕಳಿಗೆ ಸಮಸ್ಯೆಯಾಗದಂತೆ ಮಾಡುತ್ತೇವೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಗ್ಯಾರಂಟಿ ಜಾರಿಯ ಬಗ್ಗೆ ಅಧಿಕಾರಿಗಳೊಂದಿಗೆ ಸಿದ್ದರಾಮಯ್ಯ ಸಭೆ

ಪಠ್ಯ ಪುಸ್ತಕ ಪರಿಷ್ಕರಣೆ ಈಗಾಗಲೇ ಒಂದು ಹಂತಕ್ಕೆ ಬಂದಿದೆ. ಶಾಲಾ ತರಗತಿ ಪ್ರಾರಂಭ ಮಾಡಲು ಇನ್ನೂ 15 ದಿನಗಳು ಬೇಕು. ಮಕ್ಕಳಿಗೆ ತೊಂದರೆ ಆಗದಂತೆ ಪಠ್ಯಪರಿಷ್ಕರಣೆ ಮಾಡಲಾಗುತ್ತೆ. ನಿರ್ದಿಷ್ಟವಾಗಿ ಇಂತಹ ಪಾಠವೇ ತೆಗೆಯುತ್ತೇವೆ ಅಂತಾ ಹೇಳಲ್ಲ ಎಂದು ಸ್ಪಷ್ಟನೆ ನೀಡಿದರು.

 

RELATED ARTICLES

Related Articles

TRENDING ARTICLES