Saturday, November 23, 2024

ರೈಲು ಪ್ರಯಾಣಿಕರಿಗೆ ತಿಂಡಿ, ಊಟ, ವಸತಿ ಕಲ್ಪಿಸಲಾಗಿದೆ : ತುಷಾರ್ ಗಿರಿ ನಾಥ್

ಬೆಂಗಳೂರು : ರೈಲು ಪ್ರಯಾಣಿಕರಿಗೆ ತಿಂಡಿ, ಊಟ, ವಸತಿ ಹಾಗೂ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲಾಗಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿ ನಾಥ್ ಹೇಳಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ಆಯುಕ್ತರು, ಒಡಿಶಾದಲ್ಲಿ ಸಂಭವಿಸಿದ ರೈಲು ಅಪಘಾತದ ಹಿನ್ನೆಲೆಯಲ್ಲಿ ಬೆಂಗಳೂರಿನಿಂದ ಪಶ್ಚಿಮ ಬಂಗಾಳ ಮತ್ತು ಅಸ್ಸಾಂ ಸೇರಿದಂತೆ ಈಶಾನ್ಯ ರಾಜ್ಯಗಳಿಗೆ ತೆರಳಬೇಕಾಗಿದ್ದ ರೈಲುಗಳ ಪ್ರಯಾಣ ರದ್ದಾಗಿದೆ ಎಂದು ತಿಳಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಬೈಯಪ್ಪನಹಳ್ಳಿಯಲ್ಲಿರುವ ಸರ್.ಎಂ ವಿಶ್ವೇಶ್ವರಯ್ಯ ಟರ್ಮಿನಲ್ ಮತ್ತು ಯಶವಂತಪುರ ಜಂಕ್ಷನ್ ಗಳಲ್ಲಿಯೇ ಪ್ರಯಾಣಿಕರು ಉಳಿದುಕೊಂಡಿದ್ದಾರೆ. ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗಳ ಸೂಚನೆ ಮೇರೆಗೆ ಪ್ರಯಾಣಿಕರಿಗೆ ಅಗತ್ಯ ಸೌಲಭ್ಯ ಮಾಡಲಾಗಿದೆ ಎಂದಿದ್ದಾರೆ.

ಇದನ್ನೂ ಓದಿ : ರೈಲು ಅಪಘಾತ : ಪ್ರಧಾನಿ ಮೋದಿ ಸಂತಾಪ, ಸಂತ್ರಸ್ತರಿಗೆ ಎಲ್ಲಾ ರೀತಿಯ ಬೆಂಬಲಕ್ಕೆ ಸೂಚನೆ

ತಿಂಡಿ, ಊಟ, ಮಕ್ಕಳಿಗೆ ಹಾಲು

ಬಿಬಿಎಂಪಿ ವತಿಯಿಂದ ಪ್ರಯಾಣಿಕರಿಗೆ ತಿಂಡಿ, ಊಟ, ವಸತಿ ಸೇರಿದಂತೆ ಚಿಕ್ಕ ಮಕ್ಕಳಿಗೆ ಬಿಸಿ ಹಾಲು ಒದಗಿಸಲು ಕ್ರಮ ಕೈಗೊಳ್ಳಲಾಗಿದೆ. ಅಲ್ಲದೆ, ಈ ಪ್ರಯಾಣಿಕರಿಗೆ ಅಗತ್ಯವಾದ ತುರ್ತು ಮೂಲಭೂತ ಸೌಕರ್ಯಗಳ ವ್ಯವಸ್ಥೆ ಮಾಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ರೈಲ್ವೆ ದುರಂತ ಸ್ಥಳಕ್ಕೆ ಸಂತೋಷ್ ಲಾಡ್ ಭೇಟಿ

ಸಿಎಂ ಸಿದ್ದರಾಮಯ್ಯ ಸೂಚನೆ ಮೇರೆಗೆ ಸಚಿವ ಸಂತೋಷ್ ಲಾಡ್ ಅವರು ರೈಲು ದುರಂತ ಪ್ರಕರಣ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಪಶ್ಚಿಮ ಬಂಗಾಳದ ಹೌರಾದಲ್ಲಿ ಸಿಲುಕಿರುವ ಕರ್ನಾಟಕದ ಕ್ರೀಡಾಪಟುಗಳಿಗೆ ಊಟದ ವ್ಯವಸ್ಥೆ ಕಲ್ಪಿಸಿದ್ದಾರೆ. ರೈಲು ಅಪಘಾತ ನಡೆದ ಸ್ಥಳಕ್ಕೆ ಭೇಟಿ ನೀಡಿರುವ ಸಚಿವ ಸಂತೋಷ್ ಲಾಡ್​ ಪರಿಶೀಲನೆ ಮಾಡಿದ್ದಾರೆ.

RELATED ARTICLES

Related Articles

TRENDING ARTICLES