Friday, November 22, 2024

ರೈಲು ಪ್ರಯಾಣಿಕರಿಗೆ ಊಟ, ತಿಂಡಿ ವ್ಯವಸ್ಥೆ ಮಾಡುವಂತೆ ಸಿದ್ದರಾಮಯ್ಯ ಸೂಚನೆ

ಬೆಂಗಳೂರು : ಒಡಿಶಾದಲ್ಲಿ ಸಂಭವಿಸಿರುವ ರೈಲು ಅಪಘಾತ ದುರಂತ ಹಿನ್ನೆಲೆಯಲ್ಲಿ ಇಂದು ಹಲವು ರೈಲುಗಳ ಸಂಚಾರ ಸ್ಥಗಿತಗೊಳಿಸಿದ್ದು, ರೈಲು ಪ್ರಯಾಣಿಕರಿಗೆ ಊಟ, ತಿಂಡಿ ವ್ಯವಸ್ಥೆ ಮಾಡುವಂತೆ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ಬೈಯಪ್ಪನಹಳ್ಳಿ ರೈಲು ನಿಲ್ದಾಣದಲ್ಲಿರುವ ಪ್ರಯಾಣಿಕರಿಗೆ ಅಗತ್ಯ ಊಟ, ತಿಂಡಿ ವ್ಯವಸ್ಥೆ ಮಾಡುವಂತೆ ಬಿಬಿಎಂಪಿ ಆಯುಕ್ತರಿಗೆ ಸೂಚನೆ ನೀಡಿದ್ದಾರೆ.

ಒಡಿಶಾದಲ್ಲಿ ಸಂಭವಿಸಿರುವ ರೈಲು ಅಪಘಾತ ದುರಂತದ ಕಾರಣ ಆ ಮಾರ್ಗದಲ್ಲಿ ಸಂಚರಿಸುವ ಹತ್ತಾರು ರೈಲುಗಳ ಪ್ರಯಾಣವನ್ನು ಸ್ಥಗಿತಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಈಶಾನ್ಯ ರಾಜ್ಯಗಳಿಗೆ, ಕೋಲ್ಕತ್ತಾ ಮುಂತಾದ ರಾಜ್ಯಗಳಿಗೆ ತೆರಳ ಬೇಕಿರುವ ಕಾರ್ಮಿಕರು ಬೈಯಪ್ಪನಹಳ್ಳಿ ರೈಲು ನಿಲ್ದಾಣದಲ್ಲೇ ದಿನ ಕಳೆಯುವಂತಾಗಿದೆ. ಹೀಗಾಗಿ, ಇವರೆಲ್ಲರಿಗೂ ಅಗತ್ಯ ಊಟ, ತಿಂಡಿಯ ವ್ಯವಸ್ಥೆ ಮಾಡುವಂತೆ ತಾಕೀತು ಮಾಡಿದ್ದಾರೆ.

ಇದನ್ನೂ ಓದಿ : Odisha Train Accident: ಕನ್ನಡಿಗರ ಸುರಕ್ಷತೆಗಾಗಿ ಸಚಿವ ಸಂತೋಷ್ ಲಾಡ್ ನಿಯೋಜನೆ

ಮೃತಪಟ್ಟವರ ಸಂಖ್ಯೆ 288ಕ್ಕೆ ಏರಿಕೆ

ಬಹನಾಗ ರೈಲು ನಿಲ್ದಾಣದ ಬಳಿ ಮೂರು ರೈಲು ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ ಹೆಚ್ಚುತ್ತಲೇ ಇದೆ. ಸದ್ಯದ ಮಾಹಿತಿ ಪ್ರಕಾರ ಸಾವನ್ನಪ್ಪಿರುವವರ ಸಂಖ್ಯೆ 288ಕ್ಕೆ ಏರಿಕೆ ಆಗಿದೆ. 1 ಸಾವಿರಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯಗಳಾಗಿದ್ದು, ಗಾಯಾಳುಗಳನ್ನು ವಿವಿಧ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

RELATED ARTICLES

Related Articles

TRENDING ARTICLES