Wednesday, January 22, 2025

ರಾಜಸ್ಥಾನ ಮಾದರಿಯ ವಕೀಲರ ರಕ್ಷಣಾ ಕಾಯ್ದೆ ಜಾರಿ : ಸಿಎಂಗೆ ವಕೀಲರ ಮನವಿ

ಬೆಂಗಳೂರು : ರಾಜಸ್ಥಾನದಲ್ಲಿ ಜಾರಿಗೆ ತಂದಿರುವ ವಕೀಲರ ರಕ್ಷಣಾ ಕಾಯ್ದೆ ಮಾದರಿಯನ್ನು ರಾಜ್ಯದಲ್ಲೂ ಜಾರಿಗೊಳಿಸುವಂತೆ ವಕೀಲರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ್ದಾರೆ.

ಕರ್ನಾಟಕ ವಕೀಲರ ಮಂಡಳಿ ಅಧ್ಯಕ್ಷ  ಎಚ್.ಎಲ್.ವಿಶಾಲ ರಘು ಹಾಗೂ ಸದಸ್ಯರು  ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಸೌಹಾರ್ದಯುತ ಮಾತುಕತೆ ನಡೆಸಿದ್ದಾರೆ.

ರಾಜಸ್ಥಾನದಲ್ಲಿ ವಕೀಲರ ರಕ್ಷಣಾ ಕಾಯ್ದೆಯನ್ನು ಜಾರಿಗೆ ತಂದಿದ್ದು, ರಾಜ್ಯದಲ್ಲಿ ಈ ಕಾಯ್ದೆಯನ್ನು ಅನುಷ್ಠಾನಕ್ಕೆ ತರುವ ನಿಟ್ಟಿನಲ್ಲಿ  ಕಾಯ್ದೆಯ ಪ್ರತಿಯನ್ನು ತರಿಸಿಕೊಂಡು ಅಧ್ಯಯನ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಇದನ್ನೂ ಓದಿ : ‘ಗ್ಯಾರಂಟಿಯಲ್ಲಿ ದೋಖಾ’ ಮಾಡ್ತಿರೋದು ಸ್ಪಷ್ಟವಾಗಿ ಬೆಳಕಿಗೆ ಬಂದಿದೆ : ಬಸವರಾಜ ಬೊಮ್ಮಾಯಿ 

ವಕೀಲರ ಸಂಘಕ್ಕೆ ಶಾಶ್ವತ ಸ್ಥಳವಿಲ್ಲ

ವಕೀಲರ ಸಂಘಕ್ಕೆ ಶಾಶ್ವತವಾದ ಸ್ಥಳವಿಲ್ಲವಾಗಿದ್ದು, ಪ್ರಸ್ತುತ ಪ್ರೆಸ್ ಕ್ಲಬ್ ಬಳಿ ಇರುವ ಸ್ಥಳದಲ್ಲಿಯೇ  ಶಾಶ್ವತವಾಗಿ ಸ್ಥಳಾವಕಾಶ ಮಾಡಿಕೊಡುವಂತೆ ಇದೇ ವೇಳೆ ಕರ್ನಾಟಕ ವಕೀಲರ ಮಂಡಳಿ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದೆ.

ಸಿಎಂ ಭೇಟಿ ಮಾಡಿದ ಸಂಸದ ಸೂರ್ಯ

ಸಂಸದ ತೇಜಸ್ವಿ ಸೂರ್ಯ ಅವರು ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಸಿದ್ದರಾಮಯ್ಯ ಭೇಟಿಯಾಗಿದ್ದಾರೆ. ಬೆಂಗಳೂರು ಸಬ್ ಅರ್ಬನ್ ರೈಲು ಸೇರಿದಂತೆ ಬೆಂಗಳೂರು ಅಭಿವೃದ್ಧಿ ವಿಚಾರವಾಗಿ ಸಿಎಂ ಜೊತೆ ಚರ್ಚೆ ಮಾಡಿದ್ದಾರೆ.

RELATED ARTICLES

Related Articles

TRENDING ARTICLES