Wednesday, January 22, 2025

Odisha Train Accident: ಕನ್ನಡಿಗರ ಸುರಕ್ಷತೆಗಾಗಿ ಸಚಿವ ಸಂತೋಷ್ ಲಾಡ್ ನಿಯೋಜನೆ

ಬೆಂಗಳೂರು: ಒಡಿಶಾದ ಬಾಲಸೋರ್ ನಲ್ಲಿ ಸಂಭವಿಸಿದ ರೈಲು ದುರಂತದ ಹಿನ್ನೆಲೆಯಲ್ಲಿ ಕನ್ನಡಿಗರ ಸುರಕ್ಷತೆ ಬಗ್ಗೆ ಗಮನ ಹರಿಸಲು ಸಚಿವ ಸಂತೋಷ್ ಲಾಡ್ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ನಿಯೋಜಿಸಿದ್ದಾರೆ.

ಹೌದು, ಒಡಿಶಾದ ಬಹನಾಗ ನಿಲ್ದಾಣದ ಬಳಿ 3 ರೈಲುಗಳ ನಡುವೆ ಡಿಕ್ಕಿ ಸಂಭವಿಸಿ ಅಪಘಾತ(Odisha Train Accident) ನಡೆದ ಸಂಬಂಧ ಸಿಎಸ್ ವಂದಿತಾ ಶರ್ಮಾ(Vandita Sharma) ಅವರು ಸಿಎಂ ಸಿದ್ದರಾಮಯ್ಯನವರನ್ನು(Siddaramaiah) ಭೇಟಿ ಮಾಡಿ ಪ್ರಾಥಮಿಕ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಒಡಿಶಾದಲ್ಲಿ ರೈಲು ಅಪಘಾತ : 50 ಮಂದಿ ದಾರುಣ ಸಾವು, ಮೃತರ ಕುಟುಂಬಕ್ಕೆ 10 ಲಕ್ಷ

ಇನ್ನು ಒಡಿಶಾದ ಬಾಲಸೋರ್ ನಲ್ಲಿ ಸಂಭವಿಸಿದ ರೈಲು ದುರಂತದ ಹಿನ್ನೆಲೆಯಲ್ಲಿ ತಕ್ಷಣ ಘಟನಾ ಸ್ಥಳಕ್ಕೆ ತೆರಳಿ ಕನ್ನಡಿಗರ ಸುರಕ್ಷತೆ ಬಗ್ಗೆ ಗಮನ ಹರಿಸಲು ಹಾಗೂ ಅವರಿಗೆ ಅಗತ್ಯ ನೆರವನ್ನು ಒದಗಿಸಲು ಸಚಿವ ಸಂತೋಷ್ ಲಾಡ್ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಿಯೋಜಿಸಿದ್ದು,ಘಟನೆಯಲ್ಲಿ ಗಾಯಗೊಂಡ ಅಥವಾ ಇತರೆ ಯಾವುದೇ ಸಮಸ್ಯೆ ಎದುರಿಸುತ್ತಿರುವ ಕನ್ನಡಿಗರ ರಕ್ಷಣೆಗೆ ಸಂಪೂರ್ಣ ನೆರವು ನೀಡಲಾಗುವುದು.

“ಪ್ರತಿಯೊಬ್ಬ ಕನ್ನಡಿಗನನ್ನು ಸುರಕ್ಷಿತವಾಗಿ ನಾಡಿಗೆ ಕರೆತರಲು ಸರ್ಕಾರ ಬದ್ಧವಿದೆ” ಎಂದು ಟ್ವೀಟ್ ಮೂಲಕ ತಿಳಿಸಿದ್ದಾರೆ.

 

RELATED ARTICLES

Related Articles

TRENDING ARTICLES