Wednesday, January 22, 2025

ಒಡಿಶಾ ರೈಲು ದುರಂತ : ವಿರಾಟ್ ಕೊಹ್ಲಿ, ಯುವಿ, ಗಂಭೀರ್ ವಿಷಾಧ

ಬೆಂಗಳೂರು : ಒಡಿಶಾದಲ್ಲಿ ಸಂಭವಿಸಿರುವ ರೈಲು ದುರಂತ ಬಗ್ಗೆ ಟೀಂ ಇಂಡಿಯಾ ಆಟಗಾರ ವಿರಾಟ್ ಕೊಹ್ಲಿ, ಮಾಜಿ ಆಟಗಾರ ಗಂಭೀರ್ ಹಾಗೂ ಯುವಿ ವಿಷಾಧ ವ್ಯಕ್ತಪಡಿಸಿದ್ದಾರೆ.

ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ ಫೈನಲ್ ಹಿನ್ನೆಲೆ ಇಂಗ್ಲೆಂಡ್​ನಲ್ಲಿರುವ ವಿರಾಟ್ ಕೊಹ್ಲಿ, ರೈಲು ದುರಂತದ ಬಗ್ಗೆ ಟ್ವೀಟ್ ಮಾಡಿ, ಮೃತರಿಗೆ ಸಂತಾಪ ಸೂಚಿಸಿದ್ದಾರೆ.

ಒಡಿಶಾದಲ್ಲಿ ಸಂಭವಿಸಿರುವ ರೈಲು ದುರಂತದ ಸುದ್ದಿ ತಿಳಿದು ಬೇಸರವಾಗಿದೆ. ಈ ಅಪಘಾತದಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರು, ಆ ಕುಟುಂಬಗಳೊಂದಿಗೆ ನನ್ನ ಪ್ರಾರ್ಥನೆ ಇದೆ. ಅಪಘಾತದಲ್ಲಿ ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತೇನೆ ಎಂದು ತಿಳಿಸಿದ್ದಾರೆ.

ಇಡೀ ದೇಶ ಅವರ ಜೊತೆ ನಿಂತಿದೆ

ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ ಅವರು ಟ್ವೀಟ್ ಮಾಡಿದ್ದು, ರೈಲು ದುರಂತದಲ್ಲಿ ಸಾವನ್ನಪ್ಪಿರುವವರ ಕುಟುಂಬಗಳಿಗೆ ದೇವರು ನೋವು ಭರಿಸುವ ಶಕ್ತಿ ನೀಡಲಿ. ಗಾಯಾಳುಗಳು ಶೀಘ್ರ ಗುಣಮುಖರಾಗಲಿ. ಇಡೀ ದೇಶ ಅವರ ಜೊತೆ ನಿಂತಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ : ರೈಲು ಪ್ರಯಾಣಿಕರಿಗೆ ಊಟ, ತಿಂಡಿ ವ್ಯವಸ್ಥೆ ಮಾಡುವಂತೆ ಸಿದ್ದರಾಮಯ್ಯ ಸೂಚನೆ

ಯುವರಾಜ್ ಸಿಂಗ್ ಸಹ ಟ್ವೀಟ್ ಮಾಡಿದ್ದು, ಒಡಿಶಾ ರೈಲು ಅಪಘಾತದಲ್ಲಿ ಪ್ರಾಣ ಕಳೆದುಕೊಂಡವರ ಕುಟುಂಬಗಳಿಗೆ ಸಂತಾಪ ಸೂಚಿಸುತ್ತಿದ್ದೇನೆ. ಗಾಯಗೊಂಡವರು ಶೀಘ್ರ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ ಎಂದು ತಿಳಿಸಿದ್ದಾರೆ.

288 ಸಾವು, 1 ಸಾವಿರಕ್ಕೂ ಹೆಚ್ಚು ಜನರಿಗೆ ಗಾಯ

ಒಡಿಶಾದಲ್ಲಿ ಸಂಭವಿಸಿದ ರೈಲು ದುರಂತ ಇಡೀ ದೇಶವನ್ನೇ ಬೆಚ್ಚಿಬೀಳಿಸಿದೆ. ಬಹನಾಗ ರೈಲು ನಿಲ್ದಾಣದ ಬಳಿ ಮೂರು ರೈಲು ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ 288ಕ್ಕೆ ಏರಿಕೆ ಆಗಿದೆ. 1 ಸಾವಿರಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯಗಳಾಗಿದ್ದು, ಗಾಯಾಳುಗಳನ್ನು ವಿವಿಧ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

RELATED ARTICLES

Related Articles

TRENDING ARTICLES