Wednesday, January 22, 2025

ಮುಸ್ಲಿಮರ ಮನೆಯಲ್ಲಿ 2 ಹೆಂಡ್ತಿ, 3 ಹೆಂಡ್ತಿ ಇದ್ದಾರೆ, ಅವರಲ್ಲಿ ಯಜಮಾನಿ ಯಾರು? : ಪ್ರತಾಪ್ ಸಿಂಹ ಟಕ್ಕರ್

ಬೆಂಗಳೂರು : ಮುಸ್ಲಿಮರ ಮನೆಯಲ್ಲಿ ಎರಡು ಹೆಂಡ್ತಿ, ಮೂರು ಹೆಂಡ್ತಿ ಇದ್ದಾರೆ. ಅವರಲ್ಲಿ ಯಾರು ಯಜಮಾನಿ ಆಗುತ್ತಾರೆ? ಎಂದು ಸಂಸದ ಪ್ರತಾಪ್ ಸಿಂಹ ಪ್ರಶ್ನೆ ಮಾಡಿದ್ದಾರೆ.

ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಜಾರಿಗೊಳಿಸಿರುವ ಬಗ್ಗೆ ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಮುಸ್ಲಿಮರ ಮನೆಯೊಳಗೆ ಬೆಂಕಿ ಹಾಕುತ್ತಿದ್ದಿರಿ. ಕುಟುಂಬ ಒಡೆಯುವ ಕೆಲಸ ಆಗುತ್ತಿದೆ ಎಂದು ಕುಟುಕಿದ್ದಾರೆ.

ಚುನಾವಣೆಗೆ ಮೊದಲು ಕಾಂಗ್ರೆಸ್ ನವರು ಎದೆ ಬಡಿದು ಕೊಂಡು, ಊರು ಊರಿಗೆ ಹೋಗಿ ತಮಟೆ ಬಾರಿಸಿದ್ದರು. ಎಲ್ಲರಿಗೂ ವಿದ್ಯುತ್ ಉಚಿತ ಅಂದಿದ್ದರು. ಕೆಎಸ್ಸಾರ್ಟಿಸಿಗೆ ಇನ್ನೂ ಮಾಹಿತಿ ಬಂದಿಲ್ಲ. ಸ್ವಾತಂತ್ರ್ಯ ಪೂರ್ವದಲ್ಲಿ ತಲೆ ಮೇಲೆ ಟೋಪಿ ಹಾಕಿ ಕೊಂಡವರನ್ನು ಕಾಂಗ್ರೆಸ್ ನವರು ಎನ್ನುತ್ತಿದ್ದರು. ಈಗ ಕಾಂಗ್ರೆಸ್ ನವರನ್ನು ಜನರಿಗೆ ಟೋಪಿ ಹಾಕುವವರು ಎನ್ನುತ್ತಾರೆ ಎಂದು ಛೇಡಿಸಿದ್ದಾರೆ.

ಇದನ್ನೂ ಓದಿ : ಸಚಿವ ಜಮೀರ್, ಮನೆಯಲ್ಲಿ 7 ಜನ ಇದ್ರೆ, 70 ಕೆ.ಜಿ ಅಕ್ಕಿ ಸಿಗುತ್ತೆ ಅಂದಿದ್ರು : ಸಿ.ಟಿ ರವಿ 

ಗೃಹಲಕ್ಷ್ಮಿ ಮುಂದೂಡಲು ಕುಂಟು ನೆಪ

ಎಲ್ಲರಿಗೂ 200 ಯೂನಿಟ್ ವಿದ್ಯುತ್ ಉಚಿತ ಎಂದು ಹೇಳಿದ್ದೀರಿ. ಈಗ ಸರಾಸರಿ ತೆಗೆದು ಉಚಿತ ಕೊಡುತ್ತೇವೆ ಅಂತಾ ಹೇಳ್ತಿದ್ದೀರಿ. ಇದು ಮೋಸ ಅಲ್ವಾ?ಯಾವುದು ಷರತ್ತು ಇಲ್ಲದೆ ಎಲ್ಲರಿಗೂ 200 ಯೂನಿಟ್ ವಿದ್ಯುತ್ ಉಚಿತವಾಗಿ ಕೊಡಲೇಬೇಕು. ಜನ್ ಧನ್ ಅಕೌಂಟ್ ಓಪನ್ ಆಗಿದೆ. ಅದಕ್ಕೆ ಆಧಾರ್ ಕಾರ್ಡ್ ಲಿಂಕ್ ಆಗಿದೆ. ಹೀಗಿದ್ದರೂ ಗೃಹ ಲಕ್ಷ್ಮಿ ಜಾರಿ ಯಾಕೆ ಆಗುತ್ತಿಲ್ಲ? ಗೃಹಲಕ್ಷ್ಮಿ ಯೋಜನೆ ಮುಂದೂಡಲು ಕುಂಟು ನೆಪ ಹೇಳಲಾಗುತ್ತಿದೆ ಎಂದು ಕಾಲೆಳೆದಿದ್ದಾರೆ.

ಯಜಮಾನಿಗೆ ಪೈಪೋಟಿ ಇರುತ್ತೆ

ಮನೆ ಯಜಮಾನಿ ಯಾರು ಅಂತಾ ತೀರ್ಮಾನ ಮಾಡಬೇಕಂತೆ? ಮನೆಯೊಳಗೆ ಅತ್ತೆ-ಸೊಸೆ ಕೂತು ಈ ತೀರ್ಮಾನ ಮಾಡಲು ಸಾಧ್ಯನಾ? ಹಿಂದೂಗಳ ಮನೆಯಲ್ಲದರೂ ಅತ್ತೆ-ಸೊಸೆ ನಡುವೆ ಯಜಮಾನಿಗೆ ಪೈಪೋಟಿ ಇರುತ್ತೆ. ಆದರೆ, ಮುಸ್ಲಿಮರ ಮನೆಯಲ್ಲಿ ಎರಡು ಹೆಂಡ್ತಿ, ಮೂರು ಹೆಂಡ್ತಿ ಇದ್ದಾರೆ. ಅವರಲ್ಲಿ ಯಾರು ಯಜಮಾನಿ ಆಗುತ್ತಾರೆ? ಎಂದು ಪ್ರತಾಪ್ ಸಿಂಹ ಪ್ರಶ್ನೆ ಮಾಡಿದ್ದಾರೆ.

RELATED ARTICLES

Related Articles

TRENDING ARTICLES