Wednesday, January 22, 2025

ಬಿಜೆಪಿ, ಅನಗತ್ಯ ವಿದ್ಯುತ್ ಬಳಕೆಗೆ ಕುಮ್ಮಕ್ಕು ಕೊಡುತ್ತಿದೆ : ಸಿದ್ದರಾಮಯ್ಯ

ಬೆಂಗಳೂರು : ಬಿಜೆಪಿ, ವಿದ್ಯುತ್ ಅನ್ನು ಅನಗತ್ಯ ದುರ್ಬಳಕೆ ಮಾಡಲು ಕುಮ್ಮಕ್ಕು ಕೊಡುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕುಟುಕಿದ್ದಾರೆ.

ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಿದ್ದ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಕರ್ನಾಟಕ ರಾಜ್ಯ ಪರಿಸರ ಪ್ರಶಸ್ತಿ ಪ್ರದಾನ ಮಾಡಿದರು.

ಬಳಿಕ ಮಾತನಾಡಿದ ಅವರು, ಮನುಷ್ಯ ಪ್ರಕೃತಿಯ ಅವಿಭಾಜ್ಯ ಅಂಗ. ಪ್ರಕೃತಿ ನಾಶ ನಮ್ಮ ನಾಶ. ಹೀಗಾಗಿ, ಪ್ರಕೃತಿಯ ಜತೆಗೆ ನಾವು ಬೆಳೆಯಬೇಕು, ಬಾಳಬೇಕು. ಪರಿಸರ ಉಳಿಸುವುದು, ಕಾಡು ಬೆಳೆಸುವುದು ಮತ್ತು ಉಳಿಸುವುದು ಕೇವಲ ಅರಣ್ಯ ಇಲಾಖೆ ಕರ್ತವ್ಯ ಅಲ್ಲ. ಪ್ರತಿಯೊಬ್ಬರ ಜವಾಬ್ದಾರಿ. ಪ್ರಕೃತಿಯ ಪ್ರಯೋಜನವನ್ನು ಪಡೆಯುತ್ತಿರುವ ಪ್ರತಿಯೊಬ್ಬರ ಮೇಲೂ ಪ್ರಕೃತಿ ಉಳಿಸುವ ಜವಾಬ್ದಾರಿ ಇದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಇದನ್ನೂ ಓದಿ : ವಿದ್ಯುತ್ ಬಿಲ್ ಹೆಚ್ಚಳ, ಇದು ‘ಜನರಿಗೆ ಮಾಡಿರುವ ದೋಖಾ’ : ಬೊಮ್ಮಾಯಿ ವಾಗ್ದಾಳಿ

ನಾಡಿನ ಜನತೆ ಒಪ್ಪಿಕೊಂಡಿದ್ದಾರೆ

ಸಂಕಷ್ಟದಲ್ಲಿರುವ ನಾಡಿನ ಬಡವರು ಮತ್ತು ಮಧ್ಯಮ ವರ್ಗದವರ ನೆರವಿಗಾಗಿ ನಾವು ಉಚಿತ ವಿದ್ಯುತ್ ನೀಡಲು ಮುಂದಾಗಿದ್ದೇವೆ. ಒಂದು ವರ್ಷದ ಸರಾಸರಿ ಬಳಕೆಗಿಂತ ಶೇ.10 ರಷ್ಟು ಹೆಚ್ಚು ಉಚಿತ ವಿದ್ಯುತ್ ಬಳಕೆಗೆ ನಾವು ಅವಕಾಶ ನೀಡಿದ್ದೇವೆ. ಇದನ್ನು ನಾಡಿನ ಜನತೆ ಸಂಭ್ರಮದಿಂದ ಒಪ್ಪಿಕೊಂಡಿದ್ದಾರೆ ಮತ್ತು ಸ್ವೀಕರಿಸಿದ್ದಾರೆ ಎಂದು ತಿಳಿಸಿದ್ದಾರೆ.

ಬಿಜೆಪಿ ಕುಮ್ಮಕ್ಕಿಗೆ ಜನ ಸೊಪ್ಪಾಕಲ್ಲ

ಆದರೆ, ಜನರಿಂದ ತಿರಸ್ಕೃತಗೊಂಡಿರುವ ಬಿಜೆಪಿ, ವಿದ್ಯುತ್ ಅನ್ನು ಅನಗತ್ಯ ದುರ್ಬಳಕೆ, ದುಂದುವೆಚ್ಚ, ದುರುಪಯೋಗ ಮಾಡಲು ಕುಮ್ಮಕ್ಕು ಕೊಡುತ್ತಿದೆ. ಇದು ಅತ್ಯಂತ ಜನವಿರೋಧಿಯಾದದ್ದು. ನಾಡಿನ ಪ್ರಜ್ಞಾವಂತ ಜನತೆ ಇದಕ್ಕೆ ಸೊಪ್ಪಾಕುವುದಿಲ್ಲ ಎನ್ನುವ ಭರವಸೆ ನಮಗಿದೆ ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

RELATED ARTICLES

Related Articles

TRENDING ARTICLES