ಬೆಳಗಾವಿ : ವಿದ್ಯುತ್ ಬಿಲ್ ಹೆಚ್ಚಳ ಮಾಡಿ ಕಾಂಗ್ರೆಸ್ ಸರ್ಕಾರ ಜನರಿಗೆ ದೋಖಾ ಮಾಡಿದೆ. ಒಂದು ಕೈಯಲ್ಲಿ ಕೊಟ್ಟು, ಇನ್ನೊಂದು ಕೈಯಲ್ಲಿ ಕಿತ್ತುಕೊಳ್ಳುವುದನ್ನೂ ಮಾಡ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಿಡಿಕಾರಿದ್ದಾರೆ.
ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಕಾಂಗ್ರೆಸ್ ಸರ್ಕಾರ ಬಂದ ತಕ್ಷಣ ವಿದ್ಯುತ ಬಿಲ್ ಜಾಸ್ತಿ ಮಾಡಿರುವ ಬಗ್ಗೆ ಕಲವಳ ವ್ಯಕ್ತಪಡಿಸಿದರು. ಅವರ ಕಾಲದಲ್ಲಿ ದೊಡ್ಡ ಪ್ರಮಾಣದ ಹೊರಯನ್ನು ಹೆಸ್ಕಾಂ ಮೇಲೆ ಹಾಕಿದ್ದರು ಎಂದು ಹೇಳಿದ್ದಾರೆ.
ನಾನು ಸಿಎಂ ಆಗಿದ್ದಾಗ ದೊಡ್ಡ ಪ್ರಮಾಣದ ಅನುದಾನ ನೀಡಿದ್ದೆ.13 ಸಾವಿರ ಕೋಟಿ ರೂಪಾಯಿ ನೀಡಿ ಅದಕ್ಕೆ ಪುನಶ್ಚೇತನ ನೀಡಿದ್ವಿ. ಕಾಂಗ್ರೆಸ್ ಪಕ್ಷಕ್ಕೆ ಇದು ಗೊತ್ತಿಲ್ಲಾ ಅಂತೇನಿಲ್ಲಾ, ವಿದ್ಯುಚ್ಛಕ್ತಿ ಕ್ಷೇತ್ರ ಆರ್ಥಿಕವಾಗಿ ಸಂಕಷ್ಟದಲ್ಲಿದೆ. ಒಟ್ಟು ಬಿಲ್ ನಲ್ಲಿ ಐವತ್ತು ಪರ್ಸಂಟ್ ಬಿಲ್ ಸರ್ಕಾರದಿಂದ ಬರುತ್ತೆ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ : ಗೋವುಗಳನ್ನು ಏಕೆ ಕಡಿಯಬಾರದು? : ಸಚಿವರ ಹೇಳಿಕೆಗೆ ಬೊಮ್ಮಾಯಿ ಕಿಡಿ
ಹಳೆ ಬಾಕಿ ಅಂತಾ ಪುಕ್ಕಟೆ ಹೊರೆ
ಹೆಸ್ಕಾಂ ಅಧಿಕಾರಿಗಳಿಗೆ ಬಿಲ್ ವಸೂಲಿ ಮಾಡಲು ಆರ್ಥಿಕ ಇಲಾಖೆಯಲ್ಲಿ ಕುರ್ಚಿ ಹಾಕಿ ಕೊಡಬೇಕಾಗುತ್ತದೆ. ಹಳೆ ಬಾಕಿ ಅಂತಾ ಪುಕ್ಕಟೆ ಹೊರೆಯನ್ನು ಜನರ ಮೇಲೆ ಹಾಕಿದ್ರು. ಇದು ಜನರಿಗೆ ಮಾಡಿರುವ ಒಂದು ದೋಖಾ, ಇನ್ನೊಂದು ಕೈಯಲ್ಲಿ ಕಿತ್ತುಕೊಳ್ಳುವುದನ್ನ ಮಾಡ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಸಂಕಷ್ಟಕ್ಕೆ ಸಿಲುಕಿಸುವ ಕೆಲಸ
ಎಷ್ಟು ವಿದ್ಯುತ್ ಬಳಕೆ ಮಾಡಬೇಕು ಎನ್ನುವ ಅಧಿಕಾರ ಪ್ರತಿ ಪ್ರಜೆಗೂ ಇದೆ. ಇವರು ಸರಾಸರಿ ಲೆಕ್ಕದಲ್ಲಿ ಜನರು ಬಳಸುವ ವಿದ್ಯುತ್ ಮೇಲೂ ಸಹ ಹಿಡಿದುಕೊಳ್ಳುತ್ತಿದ್ದಾರೆ. ಜನರನ್ನು ಸಂಕಷ್ಟಕ್ಕೆ ಸಿಲುಕಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಬಸವರಾಜ ಬೊಮ್ಮಾಯಿ ಕುಟುಕಿದ್ದಾರೆ.