Friday, November 22, 2024

ಬೆಳಗಾವಿಯಲ್ಲೂ ‘ಬಿಜೆಪಿ ಸೋಲಿಗೆ ನಾನೇ ಹೊಣೆ’ ಹೊರುತ್ತೇನೆ : ಬಸವರಾಜ ಬೊಮ್ಮಾಯಿ

ಬೆಳಗಾವಿ : ಬೆಳಗಾವಿಯಲ್ಲೂ ಬಿಜೆಪಿ ಸೋಲಿಗೆ ನಾನೇ ಹೊಣೆ ಹೊರುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ತಡವಾಗಿ ಸೀಟ್ ಅನೌನ್ಸ್ ಮಾಡಿದ್ವಿ. ಹೊಸಬರಿಗೆ ಟಿಕೆಟ್ ಕೊಟ್ಟಿದ್ದು ಸಂಯೋಜನೆ ಆಗಲಿಲ್ಲ. ಸ್ಥಳೀಯವಾಗಿಯೂ ಸಹ ಕೆಲವು ತೊಂದರೆ ಆಗಿದೆ. ಸೋಲಿನ ಹೊಣೆಯನ್ನು ನಾನೇ ಹೊರುತ್ತೇನೆ. ಬೆಳಗಾವಿಯಲ್ಲೂ ಬಿಜೆಪಿ ಸೋಲಿಗೆ ನಾನೇ ಹೊಣೆ ಹೊರುತ್ತೇನೆ ಎಂದು ಹೇಳಿದ್ದಾರೆ.

ಕಾಂಗ್ರೆಸ್ ಸರ್ಕಾರದಲ್ಲಿ ಲಿಂಗಾಯತರಿಗೆ ಅನ್ಯಾಯ ಆಗಿದೆ ಎಂಬ ವಿನಯ್ ಕುಲಕರ್ಣಿ ಹೇಳಿಕೆ ವಿಚಾರದ ಬಗ್ಗೆ ಪ್ರತಿಕ್ರಿಯಿಸಿರುವ ಬೊಮ್ಮಾಯಿ, ಅದು ಕಾಂಗ್ರೆಸ್ ಪಕ್ಷದ ಆಂತರಿಕ ವಿಚಾರ. ಆದರೆ, ಅತ್ಯಂತ ಹೆಚ್ಚು‌ ಲಿಂಗಾಯತ ಶಾಸಕರು ಆರಿಸಿ ಬಂದಿದ್ದರು. ಅವರುಗಳಿಗೆ ಹೆಚ್ಚಿನ ಪ್ರಾತಿನಿಧ್ಯ ನೀಡಬೇಕು ಎಂದು ಒಬ್ಬ ಸಾಮಾನ್ಯ ಲಿಂಗಾಯತಾನಾಗಿ ನಾನು ‌ಹೇಳಬಲ್ಲೆ ಎಂದು ನಯವಾಗಿಯೇ ಕಾಂಗ್ರೆಸ್ ಗೆ ಟಾಂಗ್ ಕೊಟ್ಟಿದ್ದಾರೆ.

ಇದನ್ನೂ ಓದಿ : ಜುಲೈ 7ರಂದು ರಾಜ್ಯ ಬಜೆಟ್ ಮಂಡಿಸಲಾಗುವುದು : ಸಿದ್ದರಾಮಯ್ಯ

ವಿವೇಕ ಯೋಜನೆ ನಿಲ್ಲಿಸಬಾರದು

ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಲು ಅಭಿವೃದ್ಧಿ ಕೆಲಸ ಸ್ಥಗಿತಗೊಳ್ಳಬಾರದು. ಹೀಗಾಗಿಯೇ ನಾನು ಸಿಎಂಗೆ ಪತ್ರ ಬರೆದು ನಿವೇದನೆ ಮಾಡಿಕೊಂಡಿದ್ದೇನೆ. ವಿವೇಕ ಯೋಜನೆ ನಿಲ್ಲಿಸಬಾರದು. ಅದು ಬಿಜೆಪಿಯ ಯೋಜನೆ ಅಲ್ಲ. ಇದಕ್ಕಾಗಿ ಈಗಾಗಲೇ ಎಂಟು ಸಾವಿರ ಕೊಠಡಿ ನಿರ್ಮಾಣಕ್ಕೆ ಮುಂದಾಗಿದೆ. ಸಿದ್ದರಾಮಯ್ಯ ಏನೂ ನಿರ್ಣಯ ಮಾಡ್ತಾರೆ ನೋಡೋಣ. ಅದರ ಮೇಲೆ ನಮ್ಮ ಹೋರಾಟ ನಿಶ್ಚಯ ಆಗಲಿದೆ ಎಂದು ಬೊಮ್ಮಾಯಿ ಕಾದು ನೋಡುವ ತಂತ್ರದ ಮೊರೆ ಹೋಗಿದ್ದಾರೆ.

ಗ್ಯಾರಂಟಿಗೆ ಹಣ ಹೇಗೆ ಹೊಂದಿಸ್ತಾರೆ

ಐದು ಗ್ಯಾರಂಟಿ ಯೋಜನೆಗಳಿಗೆ ಎಲ್ಲಿಂದ ಹಣ ತರ್ತಿವಿ ಅಂತ ಎಲ್ಲೂ ಸಹ ಸಿದ್ದರಾಮಯ್ಯ ಮಾತಾಡಿಲ್ಲ. ಗ್ಯಾರಂಟಿ ಯೋಜನೆಗಳಿಗೆ ಹಣ ಹೇಗೆ ಹೊಂದಿಸ್ತಾರೆ ಅಂತ ಎಲ್ಲೂ ಮಾತಾಡಿಲ್ಲ. ಸರ್ಕಾರದ ಮೇಲೆ ಜನರು ಸಂಶಯ ಪಡುವಂತಾಗಿದೆ ಎಂದು ಟಕ್ಕರ್ ಕೊಟ್ಟಿದ್ದಾರೆ.

RELATED ARTICLES

Related Articles

TRENDING ARTICLES