Saturday, May 18, 2024

ಮುಖ್ಯಮಂತ್ರಿಗಳು ಸರ್ವವನ್ನೂ ಬಲ್ಲವರು : ಹೆಚ್.ಡಿ ಕುಮಾರಸ್ವಾಮಿ

ಬೆಂಗಳೂರು : ರಾಜ್ಯದ ಹಣಕಾಸು ಬಗ್ಗೆ, ಆರ್ಥಿಕತೆ ಬಗ್ಗೆ ಅವರಿಂತ ಬಲ್ಲ ಜ್ಞಾನಿಗಳು ಯಾರಿದ್ದಾರೆ? ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ನಯವಾಗಿಯೇ ಸಿದ್ದರಾಮಯ್ಯ ಅವರಿಗೆ ಟಾಂಗ್ ಕೊಟ್ಟಿದ್ದಾರೆ.

ಬೆಂಗಳೂರಿನ ಜೆಪಿ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿರುವ ಅವರು, ಈಗಿನ ಮುಖ್ಯಮಂತ್ರಿಗಳು ಸರ್ವವನ್ನೂ ಬಲ್ಲವರು ಎಂದು ಹೇಳಿದ್ದಾರೆ.

ಮುಖ್ಯಮಂತ್ರಿಗಳು ಈಗಾಗಲೇ 13 ಬಜೆಟ್ ಗಳನ್ನು ಮಂಡಿಸಿದ್ದಾರೆ. ಇನ್ನೇನು 14ನೇ ಬಜೆಟ್ ಅನ್ನೂ ಮಂಡಿಸಲಿದ್ದಾರೆ. ಮುಂದೇನು ಮಾಡಬೇಕು ಎನ್ನುವುದು ಅವರಿಗೆ ಗೊತ್ತಿರಬೇಕು. ಅದನ್ನು ಬಿಟ್ಟು ಪ್ರತಿಪಕ್ಷಗಳು ಜನರನ್ನು ಎತ್ತಿಕಟ್ಟುವ ಕೆಲಸ ಮಾಡುತ್ತಿವೆ ಅಂತಾ ಹೇಳುತ್ತಿರುವುದು ಹಾಸ್ಯಾಸ್ಪದ ಎಂದು ಕುಟುಕಿದ್ದಾರೆ.

ಇದನ್ನೂ ಓದಿ : ನಾನು 165ರಲ್ಲಿ 158 ಭರವಸೆ ಈಡೇರಿಸಿದ್ದೇನೆ, BJP ಎಷ್ಟು ಈಡೇರಿಸಿದೆ ಹೇಳಲಿ : ಸಿದ್ದರಾಮಯ್ಯ

ಸುಳ್ಳು ಹೇಳಿಕೊಂಡು ಓಡಾಡಿದ್ರಿ!

ಇದು ಉಚಿತ, ಅದು ಖಚಿತ ಅಂತಾ ಸುಳ್ಳು ಹೇಳಿಕೊಂಡು ಓಡಾಡಿ ಅಧಿಕಾರಕ್ಕೆ ಬಂದವರು. ಇವತ್ತು ಜನರನ್ನು ವಿದ್ಯುತ್ ದುರ್ಬಳಕೆ ಮಾಡಿಕೊಳ್ಳಲು ಪ್ರತಿಪಕ್ಷಗಳು ಪ್ರಚೋದಿಸುತ್ತಿವೆ ಅಂತಾ ಹೇಳುತ್ತಿರುವುದು ಹಾಸ್ಯಾಸ್ಪದ. ವಿರೋಧ ಪಕ್ಷಗಳು ವಿದ್ಯುತ್ ಬಳಕೆ ಬಗ್ಗೆ ಜನರನ್ನು ದಿಕ್ಕು ತಪ್ಪಿಸುತ್ತಿವೆ ಅಂತಾ ಮುಖ್ಯಮಂತ್ರಿಗಳು ನೀಡಿರುವ ಹೇಳಿಕೆ ಗಮನಿಸಿದ್ದೇನೆ. ವಿರೋಧ ಪಕ್ಷಗಳು ಗ್ಯಾರಂಟಿ ಯೋಜನೆಗಳ ಬಗ್ಗೆ ಜನರನ್ನು ಎತ್ತಿಕಟ್ಟುತ್ತಿವೆ ಅಂತ ಅವರು ಹೇಳಿದ್ದಾರೆ. ಈ ರೀತಿಯ ಹೇಳಿಕೆ ಮುಖ್ಯಮಂತ್ರಿಗಳಿಗೆ ಶೋಭೆಯಲ್ಲ  ಎಂದು ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.

ಮೊದಲೇ ಪರಿಜ್ಞಾನ ಇರಲಿಲ್ಲವಾ?

ರಾಜ್ಯದ ಜನರಿಗೆ ಸಿಎಂ, ಡಿಸಿಎಂ ಗ್ಯಾರಂಟಿ ಬಗ್ಗೆ ಸಹಿ ಮಾಡಿ ಕೊಟ್ಟಿದ್ದೀರಿ. ಸುಳ್ಳು ಹೇಳಿ ಮತ ಪಡೆದಿದ್ದೀರಿ. ಈಗ ನಿಮಗೆ ಅದರ ಸಾಧಕ ಭಾದಕ ಅರ್ಥ ಆಗ್ತಾ ಇದೆ. ಮೊದಲೇ ಈ ಬಗ್ಗೆ ಯೋಚನೆ ಮಾಡಿರಲಿಲ್ಲವಾ? ಪರಿಜ್ಞಾನ ಇರಲಿಲ್ಲವಾ? ಈಗ ಷರತ್ತು ಎನ್ನುತ್ತಿದ್ದಾರೆ. ಇವರಿಗೆ ಆತ್ಮಸಾಕ್ಷಿ ಎನ್ನುವುದು ಇದೆಯಾ? ಎಂದು ಛೇಡಿಸಿದ್ದಾರೆ.

RELATED ARTICLES

Related Articles

TRENDING ARTICLES