Friday, March 29, 2024

ನಾನು 165ರಲ್ಲಿ 158 ಭರವಸೆ ಈಡೇರಿಸಿದ್ದೇನೆ, BJP ಎಷ್ಟು ಈಡೇರಿಸಿದೆ ಹೇಳಲಿ : ಸಿದ್ದರಾಮಯ್ಯ

ಬೆಂಗಳೂರು : ಹಾಲಿನ ಪ್ರೋತ್ಸಾಹ ಧನ ಕಡಿತ ಹಾಗೂ ವಿದ್ಯುತ್ ದರ ಏರಿಕೆ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ಬಿಜೆಪಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಟಕ್ಕರ್ ಕೊಟ್ಟಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಪಾಪ ಅವರಿಗೆ ಏನೂ ಇಲ್ಲ. ಅದಕ್ಕೆ ಪ್ರತಿಭಟನೆ ಮಾಡ್ತಿದ್ದಾರೆ. ಪ್ರತಿಭಟನೆ ಮಾಡೋಕೆ ಬಿಜೆಪಿ ಅವರಿಗೆ ಯಾವ ನೈತಿಕತೆ ಇದೆ ಎಂದು ಪ್ರಶ್ನೆ ಮಾಡಿದ್ದಾರೆ.

ಬಿಜೆಪಿ ಅವರು 10 ಗಂಟೆ ವಿದ್ಯುತ್ ಕೊಡ್ತೀವಿ ಅಂದ್ರು ಕೊಟ್ರಾ? ಸಾಲಮನ್ನಾ ಮಾಡ್ತೀವಿ ಅಂದ್ರು ಮಾಡಿದ್ರಾ? ನೀರಾವರಿಗೆ 1.5 ಲಕ್ಷ ಕೋಟಿ ಖರ್ಚು ಮಾಡ್ತೀನಿ ಅಂದ್ರು ಮಾಡಿದ್ರಾ? ಹೀಗಿರುವಾಗ ನಮ್ಮನ್ನು ಪ್ರಶ್ನೆ ಮಾಡೋಕೆ ಇವರಿಗೆ ನೈತಿಕತೆ ಇದೆಯಾ? ಎಂದು ಛೇಡಿಸಿದ್ದಾರೆ.

ಇದನ್ನೂ ಓದಿ : ಈ ಸರ್ಕಾರ ದರ ಏರಿಕೆ ವಿರುದ್ಧ ಅಂದಿದ್ರು, ಬಂದ ತಕ್ಷಣವೇ ದರ ಏರಿಕೆ ಮಾಡ್ತಿದ್ದಾರೆ : ಅಶ್ವತ್ಥನಾರಾಯಣ

ಮೊಸರಲ್ಲಿ ಕಲ್ಲು ಹುಡುಕೋಕೆ ಹೊರಟಿದ್ದಾರೆ

ಬಿಜೆಪಿ ಅವರು ಹೇಳಿದ್ದು ಮಾಡಲಿಲ್ಲ. ನಾವು ಹೇಳಿದ್ದು ಮಾಡಿದ್ರು ಮೊಸರಲ್ಲಿ ಕಲ್ಲು ಹುಡುಕೋಕೆ ಹೊರಟಿದ್ದಾರೆ. ಬಿಜೆಪಿ ಜನ ವಿರೋಧಿ ಪಕ್ಷ. ಅವರು ಅಧಿಕಾರದಲ್ಲಿ ಇದ್ದಾಗ ಲೂಟಿ ಹೊಡೆದು, ಲಂಚ ಹೊಡೆದು, ರಾಜ್ಯಕ್ಕೆ ಕೆಟ್ಟ ಹೆಸರು ಕೊಟ್ಟು ಹೋದ್ರು. ಈಗ ನಮಗೆ ಪಾಠ ಹೇಳಿ ಕೊಡ್ತಾರೆ ಏನ್ ಹೇಳೋಣ ಎಂದು ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

ನಾನು 158 ಭರವಸೆ ಈಡೇರಿಸಿದ್ದೇನೆ

ಬಿಜೆಪಿ ಅವರು ಕೊಟ್ಟ ಎಷ್ಟು ಭರವಸೆ ಈಡೇರಿಸಿದ್ದಾರೆ ಹೇಳಲಿ. ನಾವು ಬಂದ 15 ದಿನಗಳ ಒಳಗೆ 5 ಉಚಿತ ಗ್ಯಾರಂಟಿಗಳನ್ನು ಜಾರಿ ಮಾಡಿದ್ದೇವೆ. ಹಿಂದೆ ನಾನು ಸಿಎಂ ಆಗಿದ್ದಾಗ ಕೊಟ್ಟಿದ್ದ 165 ಭರವಸೆ ಪೈಕಿ 158 ಭರವಸೆ ಈಡೇರಿಸಿದ್ದೇನೆ. ಇಂದಿರಾ ಕ್ಯಾಂಟಿನ್ ನಿಲ್ಲಿಸಿದ್ದು ಯಾರು? ಕೃಷಿ ಭಾಗ್ಯ ನಿಲ್ಲಿಸಿದ್ದು ಯಾರು? ಪಶು ಭಾಗ್ಯ, ಶೂ ಭಾಗ್ಯ ನಿಲ್ಲಿಸಿದ್ದು ಯಾರು? ಸೈಕಲ್ ನಿಲ್ಲಿಸಿದ್ದು ಯಾರು?ಎಂದು ಸಿದ್ದರಾಮಯ್ಯ ಬಿಜೆಪಿಗೆ ಪ್ರಶ್ನೆಗಳ ಸುರಿಮಳೆಗೈದಿದ್ದಾರೆ.

RELATED ARTICLES

Related Articles

TRENDING ARTICLES