Thursday, April 25, 2024

ನಾಳೆಯಿಂದ ಭಾರತ-ಆಸ್ಟ್ರೇಲಿಯಾ WTC ಫೈನಲ್

ಬೆಂಗಳೂರು : ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಕಾದಾಟಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಬಹುನಿರೀಕ್ಷಿತ ಪಂದ್ಯದಲ್ಲಿ ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳು ಮುಖಾಮುಖಿಯಾಗಲಿವೆ.

ಲಂಡನ್​ನ ಕೆನ್ನಿಂಗ್ಟನ್ ಓವಲ್​ನಲ್ಲಿ ಜೂನ್ 7 ರಿಂದ 11ರವರೆಗೆ ಈ ಮಹತ್ವದ ಪಂದ್ಯ ನಡೆಯಲಿದ್ದು, ಇನ್ನು ಕೇವಲ ಒಂದು ದಿನವಷ್ಟೇ ಬಾಕಿಯಿದೆ. ಈಗಾಗಲೇ ಉಭಯ ತಂಡಗಳು ಸಮರಾಭ್ಯಾಸದಲ್ಲಿ ನಿರತರಾಗಿದ್ದಾರೆ.

ರೋಹಿತ್ ಶರ್ಮಾ ಪಡೆ ಹೊಸ ವಾತಾವರಣಕ್ಕೆ ಹೊಂದಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ. 143 ವರ್ಷಗಳ ಇತಿಹಾಸ ಹೊಂದಿರುವ ಓವಲ್‌ ಗ್ರೌಂಡ್‌ನಲ್ಲಿ ಇದೇ ಮೊದಲ ಬಾರಿಗೆ ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ನ ಫೈನಲ್‌ ನಡೆಯುತ್ತಿದೆ. ಅಲ್ಲದೆ ಈ ಅಂಗಳದಲ್ಲಿ ಬೌಲರ್‌ಗಳಿಗೆ ಪಿಚ್‌ ಹೇಗೆ ವರ್ತಿಸುತ್ತದೆ ಎಂಬುದು ಇನ್ನೂ ಗೊತ್ತಾಗದ ಸಂಗತಿ.

ಮಿಸ್ಟ್ರಿ ಪಿಚ್ ಎಂದೇ ಹೇಳಲಾಗುವ ಕೆನ್ನಿಂಗ್ಟನ್ ಓವಲ್​ನಲ್ಲಿ ವಿಶ್ವದ ಎರಡನೇ ಅತ್ಯಂತ ಹಳೆಯ ಕ್ರೀಡಾಂಗಣ. ಈ ಪಿಚ್ ಹಿಂದೆ ವೇಗಿಗಳಿಗೆ ಅನುಕೂಲಕರವಾಗಿದ್ದರೆ, ಕಳೆದ ಆರು ಪಂದ್ಯಗಳು ಇದಕ್ಕೆ ವಿರುದ್ಧವಾಗಿ ಕಂಡಿವೆ. 2016 ರಿಂದ ಓವಲ್‌ನಲ್ಲಿ ನಡೆದ ಕೊನೆಯ 6 ಟೆಸ್ಟ್‌ಗಳು ದಿನಗಳು ಕಳೆದಂತೆ ಪಿಚ್ ಕ್ರಮೇಣ ಉತ್ತಮಗೊಳ್ಳುತ್ತವೆ ಎಂದು ತೋರಿಸಿದೆ.

ಇದನ್ನೂ ಓದಿ : ಆಸ್ಟ್ರೇಲಿಯಾಗೆ ಕಿಂಗ್ ಕೊಹ್ಲಿಯೇ ವಿಲನ್! ಅಂಕಿ ಅಂಶಗಳೇ ಹೇಳುತೈತೆ ‘ವಿರಾಟ್’ ರೂಪ

ಭಾರತ ತಂಡ

ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ಚೇತೇಶ್ವರ ಪೂಜಾರ, ಅಜಿಂಕ್ಯ ರಹಾನೆ, ಇಶಾನ್ ಕಿಶನ್ (ವಿಕೆಟ್ ಕೀಪರ್), ಆರ್. ಅಶ್ವಿನ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕೆಎಸ್ ಭರತ್, ಶಾರ್ದೂಲ್ ಠಾಕೂರ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್, ಜಯದೇವ್ ಉನದ್ಕಟ್, ಸೂರ್ಯಕುಮಾರ್ ಯಾದವ್, ಯಶಸ್ವಿ ಜೈಸ್ವಾಲ್, ಮುಖೇಶ್ ಕುಮಾರ್

ಆಸ್ಟ್ರೇಲಿಯಾ ತಂಡ

ಪ್ಯಾಟ್ ಕಮಿನ್ಸ್ (ನಾಯಕ), ಸ್ಟೀವ್ ಸ್ಮಿತ್, ಡೇವಿಡ್ ವಾರ್ನರ್, ಸ್ಕಾಟ್ ಬೋಲ್ಯಾಂಡ್, ಅಲೆಕ್ಸ್ ಕ್ಯಾರಿ, ಕ್ಯಾಮೆರಾನ್ ಗ್ರೀನ್, ಮಾರ್ಕಸ್ ಹ್ಯಾರಿಸ್, ಜೋಶ್ ಹ್ಯಾಜಲ್‌ವುಡ್, ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್, ಉಸ್ಮಾನ್ ಖವಾಜಾ, ಮಾರ್ನಸ್ ಲಬುಶೇನ್, ನಾಥನ್ ಲಿಯಾನ್, ಮಿಚೆಲ್ ಮಾರ್ಷ್, ಟಾಡ್ ಮರ್ಫಿ, ಮಿಚೆಲ್ ಸ್ಟಾರ್ಕ್​, ಮ್ಯಾಥ್ಯೂ ರೆನ್ಶಾ

RELATED ARTICLES

Related Articles

TRENDING ARTICLES