ಬೆಂಗಳೂರು : ಇಂಜಿನ್‌ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡ ಕಾರಣ ದೆಹಲಿಯಿಂದ ಸ್ಯಾನ್ ಫ್ರಾನ್ಸಿಸ್ಕೋಗೆ ತೆರಳುತ್ತಿದ್ದ ಏರ್ ಇಂಡಿಯಾ ತುರ್ತು ಭೂಸ್ಪರ್ಶ ಮಾಡಿದೆ.
ರಷ್ಯಾದ ಮಗಡನ್ ಏರ್ಪೋರ್ಟ್ನಲ್ಲಿ ತುರ್ತು ಲ್ಯಾಂಡಿಂಗ್ ಮಾಡಿದೆ. ವಿಮಾನದಲ್ಲಿ 16 ಸಿಬ್ಬಂದಿ ಸೇರಿ 216 ಪ್ರಯಾಣಿಕರು ಪ್ರಯಾಣಿಸುತ್ತಿದ್ದು, ಎಲ್ಲರೂ ಸುರಕ್ಷಿತರಾಗಿದ್ದಾರೆ.
ಈ ಬಗ್ಗೆ ಏರ್ ಇಂಡಿಯಾ ಅಧಿಕಾರಿಗಳು ಸ್ಪಷ್ಟನೆ ನೀಡಿದ್ದಾರೆ. ಇಂಜಿನ್‌ನಲ್ಲಿ ತಾಂತ್ರಿಕ ಸಮಸ್ಯೆಯಿಂದಾಗಿ 216 ಪ್ರಯಾಣಿಕರು ಮತ್ತು 16 ಸಿಬ್ಬಂದಿಯಿದ್ದ ವಿಮಾನವನ್ನು ರಷ್ಯಾದ ಮಗದನ್ ವಿಮಾನ ನಿಲ್ದಾಣದಲ್ಲಿ ಸುರಕ್ಷಿತವಾಗಿ ಇಳಿಸಲಾಯಿತು ಎಂದು ಹೇಳಿದ್ದಾರೆ.
ಇದನ್ನೂ ಓದಿ : ಒಂದಲ್ಲಾ, ಎರಡಲ್ಲಾ ‘ಮೂರು ಹದ್ದು ಬಂದಿದ್ವು’ : ಘಟನೆ ಬಗ್ಗೆ ಡಿಕೆಶಿ ಏನಂದ್ರು ಗೊತ್ತಾ?
Important Update regarding AI 173 Delhi to SFO pic.twitter.com/DibzwCoGU4
— Air India (@airindia) June 7, 2023
ಪ್ರಯಾಣಿಕರಿಗೆ ಅಗತ್ಯ ಸೌಲಭ್ಯ
ಈಗಾಗಲೇ ವಿಮಾನವನ್ನು ತಪಾಸಣೆಗೆ ಒಳಪಡಿಸಲಾಗಿದೆ. ಪ್ರಯಾಣಿಕರಿಗೆ ಅಗತ್ಯ ಸೌಲಭ್ಯ ಒದಗಿಸಲಾಗಿದೆ. ರಷ್ಯಾದ ಮಗಡನ್ ವಿಮಾನ ನಿಲ್ದಾಣದಿಂದ ತನ್ನ ಪ್ರಯಾಣಿಕರನ್ನು ಕರೆದೊಯ್ಯಲು ಪರ್ಯಾಯ ವಿಮಾನ ವ್ಯವಸ್ಥೆ ಕಲ್ಪಿಸಲಾಗಿದೆ. ಅಲ್ಲಿಯವರೆಗೆ ಪ್ರಯಾಣಿಕರು ಹಾಗೂ ಸಿಬ್ಬಂದಿಗೆ ಮಗಡನ್‌ನ ಹೋಟೆಲ್ ನಲ್ಲಿ ಸೌಲಭ್ಯ ಕಲ್ಪಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ಇನ್ನೂ, ಪ್ರಯಾಣಿಕರನ್ನು ಸ್ಯಾನ್ ಫ್ರಾನ್ಸಿಸ್ಕೋಗೆ ಕರೆದೊಯ್ಯಲು ಏರ್ ಇಂಡಿಯಾ ಮತ್ತೊಂದು ವಿಮಾನವು ಮುಂಬೈನಿಂದ ಮಧ್ಯಾಹ್ನ 1 ಗಂಟೆಗೆ ರಷ್ಯಾದ ಮಗಡನ್‌ಗೆ ಹೊರಡಲಿದೆ ಎಂದು ತಿಳಿಸಿದ್ದಾರೆ.