Wednesday, January 22, 2025

ಕಾಂಗ್ರೆಸ್ ಗ್ಯಾರಂಟಿಗಳು ಚೀಪ್ ಪಾಪ್ಯುಲಾರಿಟಿ : ಚಲುವರಾಯಸ್ವಾಮಿ ವಿಡಿಯೋ ವೈರಲ್

ಬೆಂಗಳೂರು : ಕಾಂಗ್ರೆಸ್​ ಗ್ಯಾರಂಟಿಗಳು ಚೀಪ್​ ಪಾಪ್ಯುಲಾರಿಟಿ. ಫಲಿತಾಂಶಕ್ಕಾಗಿ ಎಲ್ಲವನ್ನೂ ಮಾಡಬೇಕು. ಚೀಪ್​ ಪಾಪ್ಯುಲಾರಿಟಿ ಇಲ್ಲದ್ದು, ಪಲ್ಲದ್ದು ಮಾಡಬೇಕು. ಸಿಎಂ ಸಿದ್ದರಾಮಯ್ಯಗೆ ಇಷ್ಟ ಆಗುತ್ತೋ ಇಲ್ಲವೋ, ಆದರೂ ಮಾಡಬೇಕು. ಫಲಿತಾಂಶವೇ ಅನಿವಾರ್ಯ, ರಿಸಲ್ಟ್​ಗಾಗಿ ಎಲ್ಲವನ್ನೂ ಮಾಡಬೇಕು.

ಇದು, ಸಿದ್ದರಾಮಯ್ಯ ಸಂಪುಟದ ಕೃಷಿ ಸಚಿವ ಚಲುವರಾಯಸ್ವಾಮಿ ಅವರ ಅವಹೇಳನಕಾರಿ ಮಾತುಗಳು. ಕಾಂಗ್ರೆಸ್ 5 ಉಚಿತ ಗ್ಯಾರಂಟಿಗಳ ಬಗ್ಗೆ ಅವರು ಅವಹೇಳನ ಮಾಡಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಉಚಿತ ಭರವಸೆಗಳೆಲ್ಲ ಕೇವಲ ಚುನಾವಣಾ ಗಿಮಿಕ್ ಅಷ್ಟೆ. ಚುನಾವಣೆಯಲ್ಲಿ ಗೆದ್ದು ಅಧಿಕಾರ ಹಿಡಿಯಲು ಇಂಥ ಗಿಮಿಕ್​ಗಳನ್ನು ಮಾಡಲಾಗಿದೆ ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ಹೇಳಿದ್ದಾರೆ.

ಫ್ರೀ ಫ್ರೀ ಅಂತ ಹೋದರೆ!

ಮೊದಲಿಗೆ ಉಚಿತ ಯೋಜನೆಗಳನ್ನು ಘೋಷಿಸುವ ಬಗ್ಗೆ ದೇಶದಲ್ಲೆಲ್ಲ ಚರ್ಚೆಯಾಯಿತು. ನಾವು ಕೂಡ ಚರ್ಚೆ ಮಾಡಿದೆವು. ಇದು ಒಳ್ಳೆಯದಲ್ಲ ಎಂಬುದಾಗಿ. ಮುಂದೆ ಫ್ರೀ ಫ್ರೀ ಅಂತ ಹೋದರೆ ಇದು ಎಲ್ಲಿಗೆ ಹೋಗಿ ಮುಟ್ಟಬಹುದು ಎಂಬ ಬಗ್ಗೆ ಚರ್ಚಿಸಲಾಯಿತು ಎಂದು ತಿಳಿಸಿದ್ದಾರೆ.

ಇದನ್ನೂ ಓದಿ : ಮುಖ್ಯಮಂತ್ರಿಗಳು ಸರ್ವವನ್ನೂ ಬಲ್ಲವರು : ಹೆಚ್.ಡಿ ಕುಮಾರಸ್ವಾಮಿ

ಗೆಲುವಿಗಾಗಿ ಚೀಪ್ ಪಾಪ್ಯಲಾರಿಟಿ!

ಈಗ ನಾವುಗಳೂ ಅದೇ ಮಾರ್ಗದಲ್ಲಿ ಹೊರಟಿದ್ದೇವೆ. ಎಲ್ಲೋ ಒಂದು ಕಡೆ ಚುನಾವಣೆ, ಫಲಿತಾಂಶ, ಸರ್ಕಾರ ಬಂದ್ರೆ ತಾನೇ ನಾವೇನಾದ್ರೂ ಮಾಡಲು ಸಾಧ್ಯವಾಗುವುದು? ಅಧಿಕಾರ ಸಿಕ್ಕಿದರೆ ತಾನೇ ನಾವು ಕೆಲಸ ಮಾಡಲು ಸಾಧ್ಯವಾಗುವುದು ಎಂಬ ದೃಷ್ಟಿ ಬಂದಾಗ ಅಂದಿಗೆ ಫಲಿತಾಂಶ ಅನಿವಾರ್ಯ ಆಗುತ್ತದೆ. ಫಲಿತಾಂಶ ಬರಬೇಕು ಎಂದಾಗ ಈ ರೀತಿಯ ಚೀಪ್ ಪಾಪ್ಯಲಾರಿಟಿ, ಇಲ್ಲದ್ದು ಬಲ್ಲದ್ದು ಎಲ್ಲ ಮಾಡ್ತೀವಿ ಎಂದು ಹೇಳಿಕೆ ಹರಿಬಿಟ್ಟಿದ್ದಾರೆ.

ಇದು ನಮ್ಮ ಮನಸ್ಸಿಗೆ ಇಷ್ಟ ಆಗ್ತದೋ ಇಲ್ಲವೋ, ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮನಸ್ಸಿಗೆ ಇಷ್ಟ ಆಗ್ತದೋ ಇಲ್ಲವೋ. ಕೆಲವೊಂದನ್ನು ಮಾಡಿಕೊಂಡು ಹೋಗಬೇಕಾಗುತ್ತದೆ. ಕೆಲವನ್ನು ನಾವು ಒಪ್ಪಿಕೊಳ್ಳಬೇಕಾಗುತ್ತದೆ ಎಂದು ಚಲುವರಾಯಸ್ವಾಮಿ ಹೇಳಿಕೆ ನೀಡಿದ್ದಾರೆ.

RELATED ARTICLES

Related Articles

TRENDING ARTICLES