Monday, December 23, 2024

ರಾಜ್ಯದಲ್ಲಿ ಮೂರು ದಿನ ಭಾರೀ ಮಳೆ ಸಾಧ್ಯತೆ, ಹೈ ಅಲರ್ಟ್ ಘೋಷಣೆ

ಬೆಂಗಳೂರು : ಅರಬ್ಬಿ ಸಮುದ್ರದ ಆಗ್ನೇಯ ಭಾಗದಲ್ಲಿ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ವಾಯುಭಾರ ಕುಸಿತವು ಬೈಪೋರ್ಜಾಯ್ ಹೆಸರಿನ ಚಂಡಮಾರುತವಾಗಿ ಬದಲಾಗಿದ್ದು, ಮುಂಗಾರು ಮತ್ತಷ್ಟು ವಿಳಂಬವಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಕರ್ನಾಟಕದ ಕರಾವಳಿ ಭಾಗದಲ್ಲಿ ಆತಂಕ ಹೆಚ್ಚಾಗಿದ್ದು, 4 ದಿನ ಮೀನುಗಾರರು ಸಮುದ್ರಕ್ಕಿಳಿಯದಂತೆ ಎಚ್ಚರಿಕೆ ನೀಡಲಾಗಿದೆ.

ಇದನ್ನೂ ಓದಿ : Bengaluru Rain : ಬೆಂಗಳೂರಿನಲ್ಲಿ ಧಾರಾಕಾರ ಮಳೆ

ಸಮುದ್ರದಲ್ಲಿ ಭಾರೀ ಅಲೆಯ ಎಚ್ಚರಿಕೆ

ಕರ್ನಾಟಕ, ಮಹಾರಾಷ್ಟ್ರ, ಕೇರಳ, ಗುಜರಾತ್ ಕರಾವಳಿ ಭಾಗದಲ್ಲಿ 3 ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ ಭಾಗದಲ್ಲಿ 2ರಿಂದ 3 ದಿನ ಮಳೆಯ ಜೊತೆಗೆ ಸಮುದ್ರದಲ್ಲಿ ಭಾರೀ ಅಲೆಯ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ.

ಇನ್ನೂ, ಮುಂಗಾರು 4 ದಿನ ತಡವಾಗಿ ಕೇರಳ ಪ್ರವೇಶ ಮಾಡಲಿದೆ. ಅಲ್ಲದೆ ಈ ಬಾರಿಯ ಮುಂಗಾರು ಪ್ರಬಲವಾಗಿರದೇ ದುರ್ಬಲವಾಗುವ ಸಾಧ್ಯತೆ ಇದೆ. ಈ ಹಿಂದೆ ಜೂನ್ 3 ಮತ್ತು 4 ರಂದು ಮುಂಗಾರು ಪ್ರವೇಶ ಸಾಧ್ಯತೆ ಬಗ್ಗೆ ಹವಾಮಾನ ಇಲಾಖೆ ತಿಳಿಸಿತ್ತು. ಸದ್ಯ ಚಂಡಮಾರುತ ಹಿನ್ನೆಲೆಯಲ್ಲಿ ಮುಂಗಾರು ಮತ್ತಷ್ಟು ತಡವಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

RELATED ARTICLES

Related Articles

TRENDING ARTICLES