Sunday, January 19, 2025

ಪಠ್ಯದಲ್ಲಿ ‘ನಕಲಿ ಗಾಂಧಿ ಫ್ಯಾಮಿಲಿ ಚರಿತ್ರೆ’ ಮಾತ್ರ ತುಂಬಿರಬೇಕಲ್ಲವೇ? : ಸುನೀಲ್ ಕುಮಾರ್ ಕಿಡಿ

ಬೆಂಗಳೂರು : ಶಾಲಾ ಪಠ್ಯದಲ್ಲಿ ನಕಲಿ ಗಾಂಧಿ ಫ್ಯಾಮಿಲಿ ಚರಿತ್ರೆ ಹಾಗೂ ವಿದೇಶಿ ದಾಳಿಯ ವಿಕೃತಿಗಳು ಮಾತ್ರ ತುಂಬಿರಬೇಕಲ್ಲವೇ? ಎಂದು ಮಾಜಿ ಸಚಿವ ಸುನೀಲ್ ಕುಮಾರ್ ಕಿಡಿಕಾರಿದ್ದಾರೆ.

ಪಠ್ಯ ಪುಸ್ತಕ ಪರಿಷ್ಕರಣೆಗೆ ಮುಂದಾಗಿರುವ ಕಾಂಗ್ರೆಸ್ ಸರ್ಕಾರದ ವಿರುದ್ಧ ಸರಣಿ ಟ್ವೀಟ್ ಮೂಲಕ ಸುನೀಲ್ ಕುಮಾರ್ ಕಿಡಿಕಾರಿದ್ದಾರೆ.

ಅಧಿಕಾರಕ್ಕೆ ಬಂದು ತಿಂಗಳು ಕಳೆಯುವಷ್ಟರಲ್ಲೇ ಸಿದ್ದರಾಮಯ್ಯ ಸರ್ಕಾರ ಪಠ್ಯ ಪುಸ್ತಕ ಪರಿಷ್ಕರಣೆಗೆ ಕೈ ಹಾಕಿದೆ. ನಿಮ್ಮ ದೃಷ್ಟಿಯಲ್ಲಿ ಶಾಲಾ ಪಠ್ಯದಲ್ಲಿ ನಕಲಿ ಗಾಂಧಿ ಕುಟುಂಬದ ಚರಿತ್ರೆ ಮಾತ್ರ ಇರಬೇಕಲ್ಲವೇ? ಪಠ್ಯದಲ್ಲಿ ಭಾರತೀಯತೆ, ಸಂಸ್ಕ್ರತಿ ಹಾಗೂ ಇತಿಹಾಸದ ನೈಜ್ಯ ಸತ್ಯಗಳೇನುಎಂಬುದು ವಿದ್ಯಾರ್ಥಿಗಳಿಗೆ ತಿಳಿಯದಂತೆ ಮುಚ್ಚಿಡುವುದು ಸರ್ಕಾರದ ಉದ್ದೇಶವೇ? ಎಂದು ಪ್ರಶ್ನಿಸಿದ್ದಾರೆ.

ಪಠ್ಯ ಪರಿಷ್ಕರಣೆಯ ಹಠವೇಕೆ?

ಶಾಲೆಗಳಿಗೆ ಪಠ್ಯ ಪುಸ್ತಕ ಪೂರೈಕೆಯಾದ ನಂತರ ಪರಿಷ್ಕರಣೆಯ ಹಠವೇಕೆ? ಸಿದ್ದರಾಮಯ್ಯನವರೇ, ಶಿಕ್ಷಣ ಸಚಿವ ಮಧು ಬಂಗಾರಪ್ಪನವರಿಗೆ ಇಲಾಖೆಯ ಇತರೆ ವಿಚಾರಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆಯುವುದಕ್ಕಾದರೂ ಅವಕಾಶ ಕೊಡಿ. ಅದನ್ನು ಬಿಟ್ಟು ಆರಂಭದಲ್ಲೇ ವಿದ್ಯಾರ್ಥಿಗಳಿಗೆ ಕಲಿಸುವ ಪಾಠ ಯಾವುದೆಂದು ನಿರ್ಧರಿಸಿ ಎಂದು ನೀವು ಪಾಠ ಮಾಡಬೇಡಿ ಎಂದು ಛೇಡಿಸಿದ್ದಾರೆ.

ಇದನ್ನೂ ಓದಿ : ವಿವಾದಿತ ಪಠ್ಯಕ್ಕೆ ಕೊಕ್, ಸಂಪೂರ್ಣ ಪರಿಷ್ಕರಣೆ ಇಲ್ಲ : ಸಿದ್ದರಾಮಯ್ಯ ಸೂಚನೆ

ನಾನು ಮೇಷ್ಟ್ರಾಗಿದ್ದೆ ಕಣ್ರಿ ಅಂತಿರಾ

ನಾನು ಮೇಷ್ಟ್ರಾಗಿದ್ದೆ ಕಣ್ರಿ ಎಂದು ಪತ್ರಿಕಾಗೋಷ್ಠಿಯಲ್ಲಿ ಹೇಳಿಕೆ ನೀಡುವುದಕ್ಕೂ ಮುನ್ನ ವಿದ್ಯಾರ್ಥಿ ಹಾಗೂ ಶಿಕ್ಷಕರ ಸಮಸ್ಯೆ ಮೊದಲು ಅರ್ಥ ಮಾಡಿಕೊಳ್ಳಿ. ಪಠ್ಯ ಪರಿಷ್ಕರಣೆ ಬಗ್ಗೆ ನಿಮಗಿರುವ ಧಾವಂತ ನೋಡಿದರೆ ಶಿಕ್ಷಣ ಇಲಾಖೆಯನ್ನು ಮೂರನೇ ವ್ಯಕ್ತಿಗಳು ನಿಯಂತ್ರಿಸುತ್ತಿರುವ ಅನುಮಾನ ಬರುತ್ತಿದೆ. ಸಿದ್ದರಾಮಯ್ಯನವರೇ, ನಿಮಗೆ ಶ್ರೇಷ್ಠ ಭಾರತೀಯ ಚಿಂತನೆಗಳು, ನಿಜವಾದ ಆದರ್ಶ ಪುರುಷ ಯಾರಾಗಬೇಕು? ಎಂದು ಕುಟುಕಿದ್ದಾರೆ.

ಗುಲಾಮಿ ಚಿಂತನೆ ತುರುಕುತ್ತೀರಾ?

ತಾಯಿ ಭಾರತೀಯ ಅಮರಪುತ್ರರು ಎಂಬ ವಿಚಾರಗಳು ಹೇಗೆ ಇಷ್ಟವಾಗುತ್ತದೆ ಹೇಳಿ? ನಿಮ್ಮನ್ನು ಎರಡನೇ ಬಾರಿಗೆ ಮುಖ್ಯಮಂತ್ರಿ ಮಾಡಿದ್ದಾರೆಂಬ ಋಣ ತೀರಿಸಿಕೊಳ್ಳುವುದಕ್ಕಾಗಿ ಗುಲಾಮಿ ಚಿಂತನೆಯನ್ನು ಶಿಕ್ಷಣದಲ್ಲಿ ತುರುಕುತ್ತೀರಾ? ಎಂದು ಸರಣಿ ಟ್ವೀಟ್ ಮೂಲಕ ಆಕ್ರೋಶ ಹೊರಹಾಕಿದ್ದಾರೆ.

RELATED ARTICLES

Related Articles

TRENDING ARTICLES