Thursday, January 23, 2025

ಬಿಜೆಪಿ ಸೃಷ್ಟಿಸಿದ ಮೀಸಲಾತಿ ಗೊಂದಲ ನಿವಾರಣೆ ಮಾಡುತ್ತೇನೆ : ಸಿದ್ದರಾಮಯ್ಯ

ಬೆಂಗಳೂರು : ಬಿಜೆಪಿ ಸರ್ಕಾರವು ಮೀಸಲಾತಿಯಲ್ಲಿ ಸೃಷ್ಟಿಸಿದ ಗೊಂದಲ ನಿವಾರಣೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.

ಮೀಸಲಾತಿ ವಿಚಾರ ಕುರಿತು ಮಾತನಾಡಿರುವ ಅವರು, ಮೀಸಲಾತಿ ಗೊಂದಲ ನಿವಾರಿಸುವುದು ನಮ್ಮ ಮೊದಲ ಆದ್ಯತೆ. ಇಲ್ಲವಾದರೆ ಯಾರಿಗೂ ಸಾಮಾಜಿಕ ನ್ಯಾಯ ಒದಗಿಸಲು ಸಾಧ್ಯವಾಗಲ್ಲ ಎಂದು ಹೇಳಿದ್ದಾರೆ.

ನಮ್ಮ ಸರ್ಕಾರದ ಅವಧಿಯಲ್ಲಿ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಮೂಲಕ ಜಾತಿವಾರು ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆ ನಡೆಸಲಾಗಿತ್ತು. ಆ ವರದಿಯನ್ನು ಸ್ವೀಕರಿಸಿ, ಅದರ ದತ್ತಾಂಶದ ಆಧಾರದಲ್ಲಿ ವಿವಿಧ ಸಮುದಾಯಗಳಿಗೆ ಅನುಕೂಲ ಕಲ್ಪಿಸುತ್ತೇವೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ಇದನ್ನೂ ಓದಿ : ಕಾಂಗ್ರೆಸ್ ನಮ್ಮನ್ನು ಲೆಕ್ಕಕ್ಕೂ ಇಟ್ಟಿಲ್ಲ : ಹೆಚ್.ಡಿ ಕುಮಾರಸ್ವಾಮಿ

ಜಾತಿವಾರು ಸಮೀಕ್ಷೆ ವರದಿ ಸ್ವೀಕಾರ

ಜಾತಿವಾರು ಸಮೀಕ್ಷೆಯಿಂದ ಜನರಿಗೆ ಒದಗಿಸಬೇಕಾದ ಸೌಲಭ್ಯಗಳು, ಆದ್ಯತಾ ಕ್ರಮಗಳು ಮೊದಲಾದ ಅಂಶಗಳ ಕುರಿತು ಸೂಕ್ತ ನಿರ್ಧಾರ ಕೈಗೊಳ್ಳಲು ಅಗತ್ಯವಿರುವ ದತ್ತಾಂಶ ಲಭ್ಯವಾಗುತ್ತದೆ. ಮೀಸಲಾತಿ ಮತ್ತಿತರ ಸೌಲಭ್ಯಗಳನ್ನು ಒದಗಿಸಲು ವೈಜ್ಞಾನಿಕ ಹಾಗೂ ನಿಖರ ಮಾಹಿತಿ ಅತಿ ಅಗತ್ಯ. ಈ ಉದ್ದೇಶದಿಂದ ಜಾತಿವಾರು ಸಮೀಕ್ಷೆಯನ್ನು ನಡೆಸಲಾಗಿತ್ತು. ಇದೀಗ ವರದಿಯನ್ನು ಸ್ವೀಕರಿಸಿ, ಅದರಲ್ಲಿನ ದತ್ತಾಂಶಗಳ ಆಧಾರದಲ್ಲಿ ಸೂಕ್ತ ಕ್ರಮಗಳನ್ನು ಕೈಗೊಳ್ಳುತ್ತೇವೆ ಎಂದು ಹೇಳಿದ್ದಾರೆ.

ಮುಖಂಡರ ಜೊತೆ ಸಿದ್ದರಾಮಯ್ಯ ಚರ್ಚೆ

ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟದ ಸದಸ್ಯರು, ಸುಮಾರು 80ಕ್ಕೂ ಹೆಚ್ಚು ಹಿಂದುಳಿದ ಜಾತಿಗಳ ಪ್ರತಿನಿಧಿಗಳು ಹಾಗೂ 60ಕ್ಕೂ ಹೆಚ್ಚು ದಲಿತ ಜಾತಿ-ಸಮುದಾಯಗಳ ಮುಖಂಡರು ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಕೆಲವು ಪ್ರಮುಖ ವಿಚಾರಗಳ ಕುರಿತು ಚರ್ಚಿಸಿದ್ದಾರೆ.

RELATED ARTICLES

Related Articles

TRENDING ARTICLES