ಬೆಂಗಳೂರು : ಅರಬ್ಬಿ ಸಮುದ್ರದಲ್ಲಿ ಬಿಪರ್ಜಾಯ್ ಚಂಡಮಾರುತದ ಅಬ್ಬರ ಹೆಚ್ಚಾಗುತ್ತಿದ್ದು, ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ಕಟ್ಟೆಚ್ಚರ ವಹಿಸಲು ಹವಮಾನ ಇಲಾಖೆ ಸೂಚನೆ ನೀಡಿದೆ.
ಜೂನ್ 11 ಹಾಗೂ 12 ರಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ. ಹೀಗಾಗಿ, ಕರಾವಳಿ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಕೇರಳ, ಲಕ್ಷ ದ್ವೀಪ, ಗೋವಾ, ಮಹಾರಾಷ್ಟ್ರದಲ್ಲೂ ಭಾರಿ ಮಳೆ ಸಂಭವವಿದೆ. ಬಿಪರ್ಜಾಯ್ ಚಂಡಮಾರುತ ಅಬ್ಬರದಿಂದ ಬಿರುಗಾಳಿ ಸಹಿತ ಮಳೆಯಾಗಲಿದೆ. ಅರಬ್ಬಿ ಸಮುದ್ರದಲ್ಲಿ ಗಂಟೆಗೆ 115 ಕಿ.ಮೀ. ವೇಗದ ಬಿರುಗಾಳಿ ಸಾಧ್ಯತೆ ಇದೆ. ಸಮುದ್ರಕ್ಕೆ ತೆರಳದಂತೆ ಮೀನುಗಾರರಿಗೆ ಹವಾಮಾನ ಇಲಾಖೆ ಸೂಚನೆ ನೀಡಿದ್ದಾರೆ.
ಇದನ್ನೂ ಓದಿ : ಬೆಂಗಳೂರಿನಲ್ಲಿ ಆಲಿಕಲ್ಲು ಸಹಿತ ಭಾರೀ ಮಳೆ, ಧರೆಗೆ ಉರುಳಿದ ಮರಗಳು
ಈ ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ
ಇನ್ನೂ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ರಾಮನಗರ, ಶಿವಮೊಗ್ಗ, ವಿಜಯನಗರದಲ್ಲಿ ಮಳೆಯಾಗಲಿದೆ.
ಮುಂಗಾರು ದುರ್ಬಲವಾಗುವ ಸಾಧ್ಯತೆ
ಮುಂಗಾರು 4 ದಿನ ತಡವಾಗಿ ಕೇರಳ ಪ್ರವೇಶ ಮಾಡಲಿದೆ. ಅಲ್ಲದೆ ಈ ಬಾರಿಯ ಮುಂಗಾರು ಪ್ರಬಲವಾಗಿರದೇ ದುರ್ಬಲವಾಗುವ ಸಾಧ್ಯತೆ ಇದೆ. ಈ ಹಿಂದೆ ಜೂನ್ 3 ಮತ್ತು 4 ರಂದು ಮುಂಗಾರು ಪ್ರವೇಶ ಸಾಧ್ಯತೆ ಬಗ್ಗೆ ಹವಾಮಾನ ಇಲಾಖೆ ತಿಳಿಸಿತ್ತು. ಸದ್ಯ ಚಂಡಮಾರುತ ಹಿನ್ನೆಲೆಯಲ್ಲಿ ಮುಂಗಾರು ಮತ್ತಷ್ಟು ತಡವಾಗುವ ಸಾಧ್ಯತೆ ಇದೆ.