ಕರಾವಳಿ ಭಾಗದಲ್ಲಿ 3 ದಿನ ವರುಣಾರ್ಭಟ, ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು : ಅರಬ್ಬಿ ಸಮುದ್ರದಲ್ಲಿ ಬಿಪರ್​ಜಾಯ್ ಚಂಡಮಾರುತದ ಅಬ್ಬರ ಹೆಚ್ಚಾಗುತ್ತಿದ್ದು, ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ಕಟ್ಟೆಚ್ಚರ ವಹಿಸಲು ಹವಮಾನ ಇಲಾಖೆ ಸೂಚನೆ ನೀಡಿದೆ.

ಜೂನ್​ 11 ಹಾಗೂ 12 ರಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ. ಹೀಗಾಗಿ, ಕರಾವಳಿ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ಕೇರಳ, ಲಕ್ಷ ದ್ವೀಪ, ಗೋವಾ, ಮಹಾರಾಷ್ಟ್ರದಲ್ಲೂ ಭಾರಿ ಮಳೆ ಸಂಭವವಿದೆ. ಬಿಪರ್​ಜಾಯ್ ಚಂಡಮಾರುತ ಅಬ್ಬರದಿಂದ ಬಿರುಗಾಳಿ ಸಹಿತ ಮಳೆಯಾಗಲಿದೆ. ಅರಬ್ಬಿ ಸಮುದ್ರದಲ್ಲಿ ಗಂಟೆಗೆ 115 ಕಿ.ಮೀ. ವೇಗದ ಬಿರುಗಾಳಿ ಸಾಧ್ಯತೆ ಇದೆ. ಸಮುದ್ರಕ್ಕೆ ತೆರಳದಂತೆ ಮೀನುಗಾರರಿಗೆ ಹವಾಮಾನ ಇಲಾಖೆ ಸೂಚನೆ ನೀಡಿದ್ದಾರೆ.

ಇದನ್ನೂ ಓದಿ : ಬೆಂಗಳೂರಿನಲ್ಲಿ ಆಲಿಕಲ್ಲು ಸಹಿತ ಭಾರೀ ಮಳೆ, ಧರೆಗೆ ಉರುಳಿದ ಮರಗಳು

ಈ ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ

ಇನ್ನೂ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ರಾಮನಗರ, ಶಿವಮೊಗ್ಗ, ವಿಜಯನಗರದಲ್ಲಿ ಮಳೆಯಾಗಲಿದೆ.

ಮುಂಗಾರು ದುರ್ಬಲವಾಗುವ ಸಾಧ್ಯತೆ

ಮುಂಗಾರು 4 ದಿನ ತಡವಾಗಿ ಕೇರಳ ಪ್ರವೇಶ ಮಾಡಲಿದೆ. ಅಲ್ಲದೆ ಈ ಬಾರಿಯ ಮುಂಗಾರು ಪ್ರಬಲವಾಗಿರದೇ ದುರ್ಬಲವಾಗುವ ಸಾಧ್ಯತೆ ಇದೆ. ಈ ಹಿಂದೆ ಜೂನ್ 3 ಮತ್ತು 4 ರಂದು ಮುಂಗಾರು ಪ್ರವೇಶ ಸಾಧ್ಯತೆ ಬಗ್ಗೆ ಹವಾಮಾನ ಇಲಾಖೆ ತಿಳಿಸಿತ್ತು. ಸದ್ಯ ಚಂಡಮಾರುತ ಹಿನ್ನೆಲೆಯಲ್ಲಿ ಮುಂಗಾರು ಮತ್ತಷ್ಟು ತಡವಾಗುವ ಸಾಧ್ಯತೆ ಇದೆ.

RELATED ARTICLES

Related Articles

TRENDING ARTICLES