Wednesday, January 22, 2025

ಸಿಪಿಐ ಲಿಂಗರಾಜ್ ಹೃದಯಾಘಾತದಿಂದ ನಿಧನ

ಚಿತ್ರದುರ್ಗ : ಬೆಂಗಳೂರಲ್ಲಿ ಸಿಪಿಐ ಆಗಿ ಸೇವೆ ಸಲ್ಲಿಸುತ್ತಿದ್ದ ಲಿಂಗರಾಜ್(39) ಅವರು ತೀವ್ರ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.

ಚಿತ್ರದುರ್ಗ ನಗರದ ಬಡಾವಣೆ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಬಸವೇಶ್ವರ ಆಸ್ಪತ್ರೆಗೆ ತೆರಳುವ ಮಾರ್ಗ ಮದ್ಯೆ ಸಿಪಿಐ ಲಿಂಗರಾಜ್ ಕೊನೆಯುಸಿರೆಳೆದಿದ್ದಾರೆ.

ಈ ಹಿಂದೆ ಚಿತ್ರದುರ್ಗದಲ್ಲಿ PSI ಆಗಿ ಸೇವೆ ಸಲ್ಲಿಸಿದ್ದ ಲಿಂಗರಾಜ್ ಅವರು ಪ್ರಸ್ತುತ ಬೆಂಗಳೂರಲ್ಲಿ ಸಿಪಿಐ ಆಗಿ ಸೇವೆ ಸಲ್ಲಿಸುತ್ತಿದ್ದರು. ನಿನ್ನೆ ಬೆಂಗಳೂರಿಂದ ಚಿತ್ರದುರ್ಗ ನಗರಕ್ಕೆ ಆಗಮಿಸಿದ್ದರು. ಖಾಸಗಿ ಲಾಡ್ಜ್ ವೊಂದರಲ್ಲಿ ಲಿಂಗರಾಜ್ ವಾಸ್ತವ್ಯ ಹೂಡಿದ್ದರು. ಇಂದು ಬೆಳಗ್ಗೆ ಎದೆನೋವು ಕಾಣಿಸಿಕೊಮಡಿದೆ. ತಕ್ಷಣ ಆಸ್ಪತ್ರೆಗೆ ತೆರಳಿದ್ದಾರೆ. ಆದರೆ, ದುರಾದೃಷ್ಟವಶಾತ್ ಮಾರ್ಗ ಮದ್ಯೆಯೇ ಮೃತಪಟ್ಟಿದ್ದಾರೆ.

ಇದನ್ನೂ ಓದಿ : ಬಿಸಿಲಿನಲ್ಲಿ ನಿಂತ ರೈತರಗೆ ಬಾಳೆಹಣ್ಣು ನೀಡಿ ಮಾನವೀಯತೆ ಮೆರೆದ ಪಿಎಸ್ಐ

ಕೆಲಸದ ವೇಳೆ ಲೈನ್ ಮೆನ್ ಸಾವು

ಕೆಲಸದ ವೇಳೆ (ಕರ್ತವ್ಯ ನಿರತ) ಲೈನ್ ಮೆನ್ ಸಾವನ್ನಪ್ಪಿರುವ ಘಟನೆ ಧಾರವಾಡ ಬೇಲೂರು ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ. ಕಂಬದಲ್ಲಿ ಕೆಲಸ ಮಾಡುವಾಗ ವಿದ್ಯುತ್ ಸ್ಪರ್ಶಿಸಿ ಸಾವನ್ನಪ್ಪಿದ್ದಾರೆ.

ನಿಜಗುಣಿ ಗಿರಿಯಪ್ಪನವರ ಸಾವನ್ನಪ್ಪಿದ ಲೈನ್ ಮನ್. ಇವರು ಧಾರವಾಡ ತಾಲೂಕಿನ ಶಿಬಾರಗಟ್ಟಿ ಗ್ರಾಮದ ನಿವಾಸಿ. ನಿಜಗುಣಿ ಗಿರಿಯಪ್ಪನವರ ಮೃತದೇಹವನ್ನು ಧಾರವಾಡ ಜಿಲ್ಲಾ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಧಾರವಾಡ ಗರಗ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES

Related Articles

TRENDING ARTICLES