Friday, April 19, 2024

ಚಿಕ್ಕಬಳ್ಳಾಪುರ ಹಕ್ಕುಪತ್ರ ವಿತರಣೆ ಬಗ್ಗೆ ತನಿಖೆಗೆ ಕೈಗೊಳ್ಳಿ : ಸಚಿವ ಜಮೀರ್ ಅಹ್ಮದ್

ಬೆಂಗಳೂರು : ಚಿಕ್ಕಬಳ್ಳಾಪುರದಲ್ಲಿ ಕಾನೂನು ಬಾಹಿರವಾಗಿ ಹಕ್ಕುಪತ್ರ ವಿತರಣೆ ಸಂಬಂಧ ವಸತಿ ಸಚಿವ ಬಿ.ಝಡ್ ಜಮೀರ್ ಅಹ್ಮದ್ ಖಾನ್ ತನಿಖೆಗೆ ಸೂಚನೆ ನೀಡಿದ್ದಾರೆ.

ವಸತಿ ಇಲಾಖೆ ವ್ಯಾಪ್ತಿಗೆ ಬರುವ ರಾಜೀವ್ ಗಾಂಧಿ ವಸತಿ ನಿಗಮದ ಪ್ರಗತಿ ಪರಿಶೀಲನೆ ನಡೆಸಿ ಅವರು ಮಾತನಾಡಿದ್ದಾರೆ. ಬಡವರಿಗೆ ಅನ್ಯಾಯ ಆಗಬಾರದು, ಆ ಪ್ರಕರಣದಲ್ಲಿ ತಪ್ಪಾಗಿದ್ದರೆ ವರದಿ ತರಿಸಿಕೊಂಡು ಪರಿಶೀಲಿಸಿ ಕ್ರಮ ಕೈಗೊಳ್ಳಿ ಎಂದು ತಾಕೀತು ಮಾಡಿದ್ದಾರೆ.

ಚಿಕ್ಕಬಳ್ಳಾಪುರದಲ್ಲಿ ಮುಖ್ಯಮಂತ್ರಿ ಗಳ ನಿವೇಶನ ಯೋಜನೆಯಡಿಯಲ್ಲಿ ವಿಧಾನಸಭಾ ಚುನಾವಣೆ ವೇಳೆ ಕಾನೂನು ಬಾಹಿರವಾಗಿ ಹಿಂದಿನ ಶಾಸಕರ ಭಾವಚಿತ್ರ ಹಾಕಿ 10,500 ಹಕ್ಕುಪತ್ರ ಹಂಚಿಕೆ ಮಾಡಿದ್ದು ಅದು ಸಿಂಧುವಲ್ಲ. ಈ ಬಗ್ಗೆ ಮೊದಲೇ ತಿಳಿಸಲಾಗಿತ್ತು, ಆದರೂ ಹಂಚಿಕೆ ಮಾಡಲಾಗಿದೆ. ಸರ್ಕಾರ ಸಿದ್ದಪಡಿಸಿದ್ದ ಮುಖ್ಯಮಂತ್ರಿ ಹಾಗೂ ವಸತಿ ಸಚಿವರ ಭಾವ ಚಿತ್ರವುಳ್ಳ ಮಾದರಿಯ ಹಕ್ಕು ಪತ್ರ ಮಾತ್ರ ಮಾನ್ಯ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ : ಕಾಂಗ್ರೆಸ್ ನಮ್ಮನ್ನು ಲೆಕ್ಕಕ್ಕೂ ಇಟ್ಟಿಲ್ಲ : ಹೆಚ್.ಡಿ ಕುಮಾರಸ್ವಾಮಿ

ಶೇ.30 ಪ್ರಗತಿ ಆದ್ರೆ ಪ್ರಯೋಜನ ಏನು?

ಬಸವ ವಸತಿ, ಅಂಬೇಡ್ಕರ್ ನಿವಾಸ್, ದೇವರಾಜ ಅರಸು ನಗರ ಮತ್ತು ಗ್ರಾಮೀಣ ವಸತಿ ಯೋಜನೆಯಡಿ ಹಲವು ವರ್ಷ ಕಳೆದರೂ ಘಟಕ ಪೂರ್ಣ ಗೊಂಡಿಲ್ಲ. ಯೋಜನೆ ಜಾರಿಯಾದ ವರ್ಷದಿಂದ ಈವರೆಗಿನ ಸಮಗ್ರ ಮಾಹಿತಿ ನೀಡಬೇಕು. ಸ್ಥಳೀಯ ಮಟ್ಟದ ಸಮಸ್ಯೆ ಬಗೆಹರಿಸಿಕೊಂಡು ಯೋಜನೆ ಅನುಷ್ಠಾನಕ್ಕೆ ಮುಂದಾಗಬೇಕು. ನೂರಾರು ಕೋಟಿ ವೆಚ್ಚ ಮಾಡಿದರೂ ಶೇ.30 ರಷ್ಟು ಪ್ರಗತಿ ಆದರೆ ಏನು ಪ್ರಯೋಜನ ಎಂದು ಜಮೀರ್ ಅಹ್ಮದ್ ಪ್ರೆಶ್ನೆ ಮಾಡಿದ್ದಾರೆ.

ಕೇಂದ್ರ ಸಚಿವರ ಜೊತೆ ಚರ್ಚೆ ಮಾಡ್ತೀನಿ

ಪ್ರಧಾನ ಮಂತ್ರಿ ಅವಾಸ್, ಯೋಜನೆಯ ಅವಧಿ ಜೂನ್ ಗೆ ಮುಗಿಯಲಿದೆ. 1.41 ಮನೆಗಳ ಗುರಿಯ ಪೈಕಿ 37 ಸಾವಿರ ಮನೆಗಳಿಗೆ ಮಾತ್ರ ಅನುಮತಿ ದೊರೆತಿದೆ. ಚುನಾವಣೆ ಮತ್ತಿತರ ಕಾರಣಕ್ಕೆ ತಡವಾಗಿದ್ದರೆ ತಕ್ಷಣ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದು ಸಮಯ ವಿಸ್ತರಣೆಗೆ ಅನುಮತಿ ಪಡೆದುಕೊಳ್ಳಿ. ಅಗತ್ಯವಾದರೆ ದೆಹಲಿಗೆ ತೆರಳಿ ಕೇಂದ್ರ ಸಚಿವರ ಜತೆಯೂ ಚರ್ಚೆ ಮಾಡುತ್ತೇನೆ ಎಂದು ಸೂಚನೆ ನೀಡಿದ್ದಾರೆ.

ಬಡವರಿಗಾಗಿ ರೂಪಿಸಿರುವ ವಸತಿ ಯೋಜನೆಗಳನ್ನು ಪೂರ್ಣಗೊಳಿಸಲು ಕಾಲಮಿತಿ ಹಾಕಿಕೊಳ್ಳಿ ಎಂದು ವಸತಿ ಸಚಿವ ಜಮೀರ್ ಅಹ್ಮದ್ ತಾಕೀತು ಮಾಡಿದ್ದಾರೆ.

RELATED ARTICLES

Related Articles

TRENDING ARTICLES