Wednesday, January 22, 2025

ಬಡವರಿಗೆ 10 ಕೆಜಿ ಅಕ್ಕಿ ಕೊಟ್ರೇ ಇವರಪ್ಪನ್ ಗಂಟು ಹೋಗೋದೇನು? : ಡಾ.ಕುಂ.ವೀರಭದ್ರಪ್ಪ

ಚಾಮರಾಜನಗರ : ಬಡವರಿಗೆ 10 ಕಿಲೋ ಅಕ್ಕಿ ಕೊಟ್ಟರೇ ಇವರಪ್ಪನ ಗಂಟು ಹೋಗೋದೇನು? ಎಂದು ಖ್ಯಾತ ಸಾಹಿತಿ ಹಾಗೂ ಕೇಂದ್ರ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಡಾ‌.ಕುಂ.ವೀರಭದ್ರಪ್ಪ ಫುಲ್ ಗರಂ ಆಗಿದ್ದಾರೆ.

ಚಾಮರಾಜನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳು ಬಡವರ ಪರವಾದ ಯೋಜನೆಗಳು. ಬಡವರಿಗೆ ಕೊಟ್ಟರೇ ಇವರಪ್ಪನ ಗಂಟು ಹೋಗೋದೇನು? ಎಂದು ಪುನರುಚ್ಚರಿಸಿದ್ದಾರೆ.

ಬಿಜೆಪಿ ಅವರು ಲೋಕಸಭೆಯಲ್ಲಿ ಗೆಲ್ಲಬೇಕಾದರೇ ಗ್ಯಾರಂಟಿ ಯೋಜನೆ ಬೆಂಬಲಿಸಬೇಕು. ಬಿಜೆಪಿಯವರು ಶ್ರೀಮಂತರ ಲಕ್ಷ ಕೋಟಿ ಸಾಲ ಮನ್ನಾ ಮಾಡಿದರಲ್ಲ ಅದು ಏನು? ಬಡವರಿಗೆ ಯೋಜನೆಗಳ ಮೂಲಕ ಅಕ್ಕಿ ಕೊಟ್ಟರೆ ಏನಾಗತ್ತೆ? ಎಂದು ಪ್ರಶ್ನೆ ಮಾಡಿದ್ದಾರೆ.

ಇದನ್ನೂ ಓದಿ : ಕಾಂಗ್ರೆಸ್ ನಮ್ಮನ್ನು ಲೆಕ್ಕಕ್ಕೂ ಇಟ್ಟಿಲ್ಲ : ಹೆಚ್.ಡಿ ಕುಮಾರಸ್ವಾಮಿ

16 ಬೆದರಿಕೆ ಪತ್ರಗಳು ಬಂದಿದೆ

ನನಗೆ ಬೆದರಿಕೆ ಪತ್ರ ಇನ್ನೂ ನಿಂತಿಲ್ಲ. ಕಳೆದ 15 ದಿನಗಳ ಹಿಂದೆಯೂ ನನಗೆ ಬೆದರಿಕೆ ಪತ್ರ ಬಂದಿದೆ. ಯಾವ ಲೇಖಕನಿಗೆ ಹೆಚ್ಚು ಬೆದರಿಕೆ ಪತ್ರ ಬರುವೋದೋ ಆತನೇ ನಿಜವಾದ ಲೇಖಕ. ಲೇಖಕನಿಗೆ ಬೆದರಿಕೆ ಪತ್ರಗಳು ಪ್ರೇಮಪತ್ರಗಳು ಇದ್ದಂತೆ ಎಂದು ಕೊಂಡಿದ್ದೇನೆ. ಮೋದಿಯನ್ನು ಅವಹೇಳನ ಮಾಡುತ್ತೀರಿ, ಮುಸ್ಲಿಂರನ್ನು ಒಲೈಸುತ್ತೀರಿ ಎಂದು ಬೆದರಿಕೆ ಪತ್ರಗಳು ಬರೆದಿದೆ. ಈವರವಿಗೆ ಒಟ್ಟು ನನಗೆ 16 ಬೆದರಿಕೆ ಪತ್ರಗಳು ಬಂದಿದೆ ಎಂದು ಹೇಳಿದ್ದಾರೆ.

ಜಾತಿ ಗಣತಿ ವರದಿ ಜಾರಿಯಾಗ್ಬೇಕು

ಜಾತಿ ಗಣತಿ ವರದಿ ಜಾರಿ ಬಗ್ಗೆ ಪ್ರತಿಕ್ರಿಯಿಸಿರುವ ಅವರು, ಈ ಹಿಂದೆ ನಡೆಸಿದ್ದ ಹಿಂದುಳಿದ ವರ್ಗಗಳ ಆರ್ಥಿಕ, ಸಾಮಾಜಿಕ ಗಣತಿ ವರದಿ ಬಹಿರಂಗವಾಗಬೇಕು, ಜಾರಿಯಾಗಬೇಕು. ಬ್ರಾಹ್ಮಣ ಸೇರಿದಂತೆ ಎಲ್ಲಾ ವರ್ಗಗಳಲ್ಲಿ ಯಾರು ಹಿಂದುಳಿದಿವರೋ ಅವರ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ, ಅನುದಾನ ಕೊಡಬೇಕು ಎಂದು ತಿಳಿಸಿದ್ದಾರೆ.

RELATED ARTICLES

Related Articles

TRENDING ARTICLES