Wednesday, January 22, 2025

ಕೆಲವರ ರಾಜಿ ರಾಜಕಾರಣದಿಂದ ಬಿಜೆಪಿ ಸೋತಿದೆ : ಸಿ.ಟಿ ರವಿ ಅಸಮಾಧಾನ

ದೆಹಲಿ : ಕೆಲವರ ರಾಜಿ ರಾಜಕಾರಣದಿಂದ ಬಿಜೆಪಿ ಪಕ್ಷ ಅಧಿಕಾರ ಕಳೆದುಕೊಂಡಿತು ಎಂದು ತಮ್ಮ ಪಕ್ಷದ ನಾಯಕರ ವಿರುದ್ಧವೇ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ‌ ರವಿ ಬಹಿರಂಗವಾಗಿ ಅಸಮಧಾನ ಹೊರಹಾಕಿದ್ದಾರೆ.

ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ನಮ್ಮಲ್ಲೂ ರಾಜಿ ರಾಜಕಾರಣ ಮಾಡಿ ತಪ್ಪು ಮಾಡಿದ್ದಾರೆ. ಹೊಂದಾಣಿ ರಾಜಕಾರಣದಿಂದ ಬಿಜೆಪಿ ಸೋತಿದೆ. ಇವತ್ತು ಅಧಿಕಾರ ಕಳೆದುಕೊಳ್ಳುವ ಪರಿಸ್ಥಿತಿ ಬರುತ್ತಿರಲಿಲ್ಲ ಎಂದು ಬೇಸರಿಸಿದ್ದಾರೆ.

ಪಠ್ಯ ಪುಸ್ತಕ ಪರಿಷ್ಕರಣೆ ವಿಚಾರ ಕುರಿತು ಮಾತನಾಡಿ, ಕಾರ್ಲ್ ಮಾರ್ಕ್ಸ್ ಪಠ್ಯ ಓದಬಹುದು. ಆರ್.ಎಸ್.ಎಸ್ ನಾಯಕರದ್ದು ಬೇಡವೇ? ಇವರ ನೆರವು ಇಲ್ಲದೆ ಸಂಘದ ಶಾಖೆಯ ಮೂಲಕವೇ ವಿಚಾರ ಬೆಳೆಯಲಿದೆ. ಪಠ್ಯದಿಂದ ಹೊರಹಾಕಬಹುದು, ಹೃದಯದಿಂದ ಹೊರಹಾಕಲು ಸಾಧ್ಯವಿಲ್ಲ ಎಂದು ಟಾಂಗ್ ಕೊಟ್ಟಿದ್ದಾರೆ.

ಇದನ್ನೂ ಓದಿ : ಸಿ.ಟಿ ರವಿ ಅಂದ್ರೆ ಕನ್ನಡಕ್ಕೆ ‘ಕಂಟಕ ರವಿ’ : ಕಾಂಗ್ರೆಸ್ ಲೇವಡಿ

ಅವ್ರನ್ನ ಯಾಕೆ‌ ಜೈಲಿಗೆ ಹಾಕಲಿಲ್ಲ?

ಸುಳ್ಳು ಮತ್ತು ಕಾಂಗ್ರೆಸ್ ನಾಣ್ಯದ ಎರಡು ಮುಖಗಳು. ನೆಹರು, ಇಂದಿರಾ ಮಾಡಿ‌ ಕಾಂಗ್ರೆಸ್ ಸೋತಿದ್ದಾರೆ. ಕಾಂಗ್ರೆಸ್ ನಾಯಕರು ಕುರ್ಚಿಗೆ ಅಂಗಲಾಚಿದ್ದರು. ಕಾಂಗ್ರೆಸ್ ನವರನ್ನು ಯಾಕೆ‌ ಅಂಡಮಾನ್ ಜೈಲಿಗೆ ಹಾಕಲಿಲ್ಲ ಎಂದು ಸಿ.ಟಿ ರವಿ ಪ್ರಶ್ನಿಸಿದ್ದಾರೆ.

ಅಧಿಕಾರದ ಮದ ಇಳಿಸುತ್ತಾರೆ

ಚಕ್ರವರ್ತಿ ಸೂಲಿಬೆಲೆ ಬೆಂಗಲಿಗರು ತುಂಬಾ ಜನರು ಇದ್ದಾರೆ. ದೇಶಭಕ್ತಿಯ ಕಾರಣಕ್ಕೆ ಸೂಲಿಬೆಲೆ ಪ್ರಖ್ಯಾತರಾಗಿದ್ದಾರೆ. ಅವರ ಪ್ರಖ್ಯಾತಿ ಕುಗ್ಗಿಸೋಕೆ ಆಗಲ್ಲ. ಕಾಂಗ್ರೆಸ್ ನವರು ಮತ್ಸರ, ದ್ವೇಷ ಹೊರಹಾಕುತ್ತಿದ್ದಾರೆ. ಸದ್ದಿದ್ದಲದೆ ವಿದ್ಯುತ್ ಬಿಲ್ ಏರಿಸುತ್ತಿದ್ದಾರೆ. ಹಾಲಿನ ದರ ಏರಿಸುತ್ತಿದ್ದಾರೆ. ಇದು ಅತ್ತೆ ಆಸ್ತಿಯನ್ನು ಅಳಿಯ ದಾನ ಮಾಡಿದಂತೆ. ಅಧಿಕಾರದ ಮದವನ್ನು ಜನರು ಇಳಿಸುತ್ತಾರೆ ಎಂದು ಕುಟುಕಿದ್ದಾರೆ.

RELATED ARTICLES

Related Articles

TRENDING ARTICLES