Monday, December 23, 2024

ಸಿಎಂ ಆದ ಬಳಿಕ ಮೊದಲ ಬಾರಿಗೆ ಮೈಸೂರು ಪ್ರವಾಸ : ಕಾರ್ಯಕ್ರಮಗಳ ಪಟ್ಟಿ ಇಲ್ಲಿದೆ

ಬೆಂಗಳೂರು : ಸಿದ್ದರಾಮಯ್ಯ ಅವರು ಎರಡನೇ ಬಾರಿ ರಾಜ್ಯದ ಮುಖ್ಯಮಂತ್ರಿಯಾದ ಬಳಿಕ ತವರು ಜಿಲ್ಲೆ ಮೈಸೂರಿಗೆ ಪ್ರಥಮ ಬಾರಿಗೆ ಪ್ರವಾಸ ಕೈಗೊಳ್ಳಲಿದ್ದಾರೆ.

ಜೂನ್‌ 10ರಂದು ಮೈಸೂರಿಗೆ ಆಗಮಿಸಲಿದ್ದು, ಅವರನ್ನು ಅದ್ಧೂರಿಯಾಗಿ ಸ್ವಾಗತಿಸಲು ಜಿಲ್ಲಾ ಕಾಂಗ್ರೆಸ್ ಸಕಲ ಸಿದ್ಧತೆಗಳನ್ನು ಕೈಗೊಂಡಿದೆ. ಸಿದ್ದರಾಮಯ್ಯ ಅವರು ಶನಿವಾರ ಬೆಳಗ್ಗೆ 10.30ಕ್ಕೆ ಸುತ್ತೂರು ಹೆಲಿಪ್ಯಾಡ್‌ಗೆ ಆಗಮಿಸಲಿದ್ದಾರೆ.

ಬೆಳಗ್ಗೆ 11 ಗಂಟೆಗೆ ವರುಣ ವಿಧಾನಸಭಾ ಕ್ಷೇತ್ರದ ಬಿಳಿಗೆರೆ ಬೋರೆಯಲ್ಲಿ ಆಯೋಜಿಸಿರುವ ಮತದಾರರಿಗೆ ಕೃತಜ್ಞತೆ ಸಲ್ಲಿಸುವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಮಧ್ಯಾಹ್ನ 2 ಗಂಟೆಗೆ ಶ್ರೀ ಕ್ಷೇತ್ರ ಸುತ್ತೂರು ಮಠಕ್ಕೆ ಭೇಟಿ ನೀಡಿ ಶ್ರೀಗಳ ಆಶೀರ್ವಾದ ಪಡೆಯಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ಸುತ್ತೂರು ಹೆಲಿಪ್ಯಾಡ್‌ನಿಂದ ವಾಪಸ್‌ ಬೆಂಗಳೂರಿಗೆ ತೆರಳಲಿದ್ದಾರೆ ಎನ್ನುವ ಮಾಹಿತಿ ತಿಳಿದುಬಂದಿದೆ.

ಇದನ್ನೂ ಓದಿ : ನನಗೆ ರಾಜಕಾರಣ ಬೇಕೋ, ಬೇಡ್ವೋ ಅನ್ನಿಸಿಬಿಟ್ಟಿದೆ : ಡಿ.ಕೆ ಸುರೇಶ್

ಅರ್ಧ ಕಿ.ಮೀ. ತೆರೆದ ವಾಹನದಲ್ಲಿ ಮೆರವಣಿಗೆ

ಈ ಕುರಿತು ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಾ. ಬಿ.ಜೆ.ವಿಜಯ್ ಕುಮಾರ್ ಮಾಹಿತಿ ನೀಡಿದ್ದು, ಜೂನ್‌ 10ರಂದು ಆಗಮಿಸುತ್ತಿರುವ ಸಿದ್ದರಾಮಯ್ಯ ಅವರನ್ನು ಅದ್ಧೂರಿಯಾಗಿ ಸ್ವಾಗತಿಸಲು ನಿರ್ಧರಿಸಲಾಗಿದ್ದು, ಈ ವೇಳೆ ಐವತ್ತು ಸಾವಿರ ಮಂದಿ ಸೇರಲಿದ್ದಾರೆ. ಹಾಗೆಯೆ ಸಿದ್ದರಾಮಯ್ಯ ಅವರನ್ನು ಅರ್ಧ ಕಿಲೋ ಮೀಟರ್‌ ತೆರೆದ ವಾಹನದಲ್ಲಿ ಮೆರವಣಿಗೆ ಮಾಡಲಾಗುತ್ತದೆ ಎಂದು ಹೇಳಿದ್ದಾರೆ.

ಇನ್ನೂ ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷರು, ಪಕ್ಷದ ಹಿರಿಯ ಮುಖಂಡರಿಗೆ ಹೆಚ್ಚು ಸಂಖ್ಯೆಯ ಜನರನ್ನು ಕರೆದುಕೊಂಡು ಬರಬೇಕು. ತವರಿನಲ್ಲಿ ಸಿದ್ದರಾಮಯ್ಯ ಅವರಿಗೆ ಅದ್ಧೂರಿ ಸ್ವಾಗತ ದೊರೆಯಬೇಕು ಎಂದು ಸೂಚನೆ ನೀಡಲಾಗಿದೆ.

RELATED ARTICLES

Related Articles

TRENDING ARTICLES