Thursday, December 19, 2024

ಸೂಲಿಬೆಲೆ ವಾಟ್ಸಾಪ್ ಯೂನಿವರ್ಸಿಟಿಯಲ್ಲಿ ಓದಿರುವವರು : ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು : ಚಕ್ರವರ್ತಿ ಸೂಲಿಬೆಲೆ ವಾಟ್ಸಪ್ ಯೂನಿವರ್ಸಿಟಿಯಲ್ಲಿ ಓದಿರುವವರು ಎಂದು ಸಚಿವ ಪ್ರಿಯಾಂಕ್ ಖರ್ಗೆ ಟಾಂಗ್ ಕೊಟ್ಟಿದ್ದಾರೆ.

ಬಿಜೆಪಿ ಅವಧಿಯ ಪಠ್ಯ ಪರಿಷ್ಕರಣೆ ವಿಚಾರವಾಗಿ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಚಕ್ರವರ್ತಿ ಸೂಲಿಬೆಲೆ ಬರೆದಿರುವ ಪಠ್ಯ ಓದಿಲ್ಲ. ಆದರೂ ಅವರು ಬರೆದಿರುವ ಪಠ್ಯ ನಮ್ಮ ಮಕ್ಕಳು ಓದುವುದು ಬೇಡ ಎಂದು ಹೇಳಿದ್ದಾರೆ.

ಯಾವ ಆಧಾರದಲ್ಲಿ ಚಕ್ರವರ್ತಿ ಸೂಲಿಬೆಲೆ ಅವರ ಪಠ್ಯ ಪುಸ್ತಕದಲ್ಲಿ ಸೇರ್ಪಡೆ ಮಾಡಿದ್ದಾರೆ? ಅವರು ಪಿಹೆಚ್ಡಿ(PHD) ಮಾಡಿದ್ದಾರಾ?ಬಾಡಿಗೆ ಭಾಷಣಕಾರರನ್ನೆಲ್ಲ ನೀವು ಲೇಖಕರು, ಸಾಹಿತಿಗಳು ಮಾಡಿದ್ದೀರಿ. ಅದನ್ನು ನಮ್ಮ ಮಕ್ಕಳು ಓದಬೇಕಾ? ಕರ್ನಾಟಕ ಸಾಹಿತ್ಯಕ್ಕೆ ಅಷ್ಟು ಬರ ಬಂದಿದೆಯಾ? ಯಾರು ಇವರೆಲ್ಲಾ? ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ : ಬಿ.ಕೆ ಹರಿಪ್ರಸಾದ್ ಮಾನಸಿಕ ಅಸ್ವಸ್ಥರಾಗಿದ್ದಾರೆ : ಬಿಜೆಪಿ ಕಿಡಿ

ಮಕ್ಕಳ ಭವಿಷ್ಯ ಏನಾಗಬೇಕು?

ಇವರು ವಾಟ್ಸಪ್ ಯೂನಿವರ್ಸಿಟಿಯಲ್ಲಿ ಓದಿರುವವರು. ಅವರೆಲ್ಲಾ ಪಠ್ಯ ರಚನೆ ಮಾಡಲು ಪ್ರಾರಂಭಿಸಿದ್ದಾರೆ. ಅಂತಹ ಪಾಠ ನಮ್ಮ ಮಕ್ಕಳು ಕಲಿತರೆ ನಮ್ಮ ಮಕ್ಕಳ ಭವಿಷ್ಯ ಏನಾಗಬೇಕು ಎಂದು ಸೂಲಿಬೆಲೆ ವಿರುದ್ಧ ಪ್ರಿಯಾಂಕ್ ಖರ್ಗೆ ಕಿಡಿಕಾರಿದ್ದಾರೆ.

ಸೂಲಿಬೆಲೆ ಕುಗ್ಗಿಸೋಕೆ ಆಗಲ್ಲ

ಸೂಲಿಬೆಲೆ ಕುರಿತು ಕಾಂಗ್ರೆಸ್ ನಾಯಕರ ಹೇಳಿಕೆಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ‌ ರವಿ ಟಾಂಗ್ ಕೊಟ್ಟಿದ್ದಾರೆ. ಚಕ್ರವರ್ತಿ ಸೂಲಿಬೆಲೆ ಬೆಂಗಲಿಗರು ತುಂಬಾ ಜನರು ಇದ್ದಾರೆ. ದೇಶಭಕ್ತಿಯ ಕಾರಣಕ್ಕೆ ಸೂಲಿಬೆಲೆ ಪ್ರಖ್ಯಾತರಾಗಿದ್ದಾರೆ. ಅವರ ಪ್ರಖ್ಯಾತಿ ಕುಗ್ಗಿಸೋಕೆ ಆಗಲ್ಲ. ಕಾಂಗ್ರೆಸ್ ನವರು ಮತ್ಸರ, ದ್ವೇಷ ಹೊರಹಾಕುತ್ತಿದ್ದಾರೆ ಎಂದು ಕುಟುಕಿದ್ದಾರೆ.

RELATED ARTICLES

Related Articles

TRENDING ARTICLES